ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ!
ಬೆಳಗಾವಿ, ಡಿಸೆಂಬರ್ 11: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ದಿನೇಶ್ ಗುಂಡೂರಾವ್ ಅವರು ಉತ್ತರಿಸಿದ್ದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ.

ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ.
ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು. ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ
ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಬಗ್ಗೆ ಐಪಿಹೆಚ್‍ಎಸ್ ಮಾರ್ಗಸೂಚಿ ಹಾಗೂ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿವೃತ್ತ ಅಧಿಕಾರಿ ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಈ ಸಮಿತಿಯ ಮಾರ್ಗದರ್ಶನದಂತೆ ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವಿಭಾಗದಲ್ಲಿ ಆಸ್ಪತ್ರೆಗಳನ್ನು ಮಂಜೂರು ಮಾಡಲು ಅಥವಾ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಇದೇ ಸಮಿತಿಯ ವರದಿ ಆಧಾರದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು. 2022 ರ ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಜನಸಂಖ್ಯೆ ಆಧಾರದ ಮೇಲೆ ಸ್ಥಾಪಿಸಲಾಗುತ್ತಿದ್ದು, ಸಮತಟ್ಟು ಪ್ರದೇಶದಲ್ಲಿ 1,20,000 ಜನಸಂಖ್ಯೆಗೆ ಹಾಗೂ ಗುಡ್ಡಗಾಡು ಗಿರಿಜನ ಪ್ರದೇಶದಲ್ಲಿ 80,000 ಜನಸಂಖ್ಯೆಗೆ ಅನುಗುಣವಾಗಿ ಸ್ಥಾಪಿಸಲಾಗುತ್ತಿದೆ.
ನಗರೀಕರಣದ ಕಾರಣದಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಜನಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯೆ ಕುಸಿತ ಕಂಡುಬರುತ್ತಿದೆ. ಹೀಗಾಗಿ ಜನಸಂಖ್ಯೆಯನ್ನು ಪರಿಗಣಿಸುವ ವಿಷಯದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications