Get Updates
Get notified of breaking news, exclusive insights, and must-see stories!

ಹೊಸ ಪಡಿತರ ಚೀಟಿ ವಿತರಣೆ: ಗುಡ್‌ನ್ಯೂಸ್‌ ಕೊಟ್ಟ ಸಚಿವ ಕೆ.ಎಚ್‌ ಮುನಿಯಪ್ಪ

ಬೆಂಗಳೂರು, ಮೇ 06 : ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ. ಸದ್ಯ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಆಹಾರ ಇಲಾಖೆ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, 2023 ಮಾರ್ಚ್‌ ಅಂತ್ಯದವರೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಗೆ ಕ್ರಮಕೈಗೊಂಡು ಅರ್ಹರಿಗೆ ಹೊಸ ಪಡಿತರ ಚೀಟಿ ವಿತರಿಸಬೇಕು. ಈ ಕುರಿತು ಸರ್ಕಾರದ ಅನುಮತಿ ಪಡೆದ ನಂತರ ಅಗತ್ಯ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಬಜೆಟ್ ನಲ್ಲಿ ಘೋಷಣೆ ಯಾಗಿರುವ ಅಂಶಗಳನ್ನು ತ್ವರಿತ ವಾಗಿ ಅನುಷ್ಠಾನ ಮಾಡುವ ಕುರಿತು ಸಂಭಂದಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು.

Action To Be Taken To Distribute New Ration Card Soon Said Minister K H Muniyappa

ಪಡಿತರ ಚೀಟಿ ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಷ್ಕರಣೆ ನಡೆಸುತ್ತಿದ್ದು, ಪರಿಷ್ಕರಣೆ ಮುಗಿದ ನಂತರ ಹೊಸ ಪಡಿತರ ಕಾರ್ಡ್ ಗಳ ವಿತರಣೆಗೆ ಕ್ರಮವಹಿಸಲಾಗುವುದು. ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನವನ್ನು ಗರಿಷ್ಠ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ. ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ CCTV ಅಳವಡಿಕೆ, GPS ಆಧಾರಿತ ವಾಹನ Tracking ವ್ಯವಸ್ಥೆ ಮತ್ತು Command Control Centre ಸ್ಥಾಪಿಸಲು ಕ್ರಮವಹಿಸಲು.

80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ "ಅನ್ನ-ಸುವಿಧಾ' ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಅವರು ಹೇಳಿದರು.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಗಾವಹಿಸಲು ಸಾಧ್ಯವಾಗುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಥಾಪಿಸಿರುವ Electronic Weighing Machine ಮತ್ತು Point of Sale System ಗಳನ್ನು ಸಾರ್ವಜನಿಕ ವಿತರಣಾ ಪದ್ಧತಿಯ IT ವ್ಯವಸ್ಥೆಯೊಂದಿಗೆ ಸಂಯೋಜಿಸಲು ಸೂಕ್ತ ಕ್ರಮವಹಿಸಲು ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ ಗೆ 35 ರೂ. ಗಳಿಂದ 45 ರೂ. ಗಳಿಗೆ ಹೆಚ್ಚಳ ಮಾಡುವ ಕುರಿತು ಚರ್ಚಿಸಲಾಗಿದೆ ಎಂದರು. ಹೊಸ ನ್ಯಾಯಬೆಲೆ ಅಂಗಡಿಗಳನ್ನು ಅವಶ್ಯಕತೆಗನುಗುಣವಾಗಿ ಪ್ರಾರಂಭಿಸಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮತ್ತು ಸಹಕಾರ ಸಂಘಗಳಿಗೆ ಹಂಚಿಕೆಯಲ್ಲಿ ಆದ್ಯತೆ ನೀಡುವು ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭಗೊಂಡಿದ್ದು, ಸೂಕ್ತ ಉಪಜಾತಿಯ ಹೆಸರನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ರವರು ಮನವಿ ಮಾಡಿದರು. ಮಾದಿಗ ಹೋರಾಟ ಸಮಿತಿಗಳ ಸುಧೀರ್ಘ 35 ವರ್ಷಗಳ ಹೋರಟದ ಫಲ ಮುಂದಿನ ಒಂದು ತಿಂಗಳಲ್ಲಿ ಈ ಮಾದಿಗ ಸಮಯದಾಯಕ್ಕೆ ಸಿಗಲಿದೆ. ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪು ಬಂದ ಮೇಲೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಬೇಟಿ ಮಾಡಿ ಶೀಘ್ರವಾಗಿ ಅನುಷ್ಠಾನ ಗೊಳಿಸಲು ಒತ್ತಾಯಿಸಿದಾಗ ಅವರು ಈ ಒಳ ಮೀಸಲಾತಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ಹಾಗೆಯೇ ನಮ್ಮ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ 101ಉಪ ಜಾತಿಗಳ ದತ್ತಾಂಶ ಸಂಗ್ರಹಣೆಗಾಗಿ ಅಧಿಕೃತವಾಗಿ ಇಂದು 5.5.2025 ರಿಂದ ಚಾಲನೆಗೊಂಡಿದ್ದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ರವರಿಗೆ ಧನ್ಯವಾದಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+