E-Swathu: ಇ-ಸ್ವತ್ತು ತಾಂತ್ರಿಕ ಸಮಸ್ಯೆಗೆ ಕ್ರಮ: ಅಪ್‌ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ಇದುವರೆಗೆ ಒಟ್ಟು 27,138 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ ಹೊಸ ತಂತ್ರಾಂಶದ ಮೂಲಕ 16,572 ಹಾಗೂ ಹಳೆ ತಂತ್ರಾಂಶದ ಮೂಲಕ 10,566 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸ್ವೀಕೃತಗೊಂಡ ಅರ್ಜಿಗಳಲ್ಲಿ 4,608 ಅರ್ಜಿಗಳು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಲಾಗಿನ್‌ನಲ್ಲಿ, 8,695 ಅರ್ಜಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಲಾಗಿನ್‌ನಲ್ಲಿ, 6,882 ಅರ್ಜಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರ ಲಾಗಿನ್‌ನಲ್ಲಿ ಹಾಗೂ 4,322 ಅರ್ಜಿಗಳು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಲಾಗಿನ್‌ನಲ್ಲಿ ಅನುಮೋದನೆಗಾಗಿ ಬಾಕಿ ಇವೆ. ತಂತ್ರಾಂಶದಲ್ಲಿನ ತಾಂತ್ರಿಕ ತೊಂದರೆಗಳಿಂದ ಅನುಮೋದನೆಯಲ್ಲಿ ವಿಳಂಬವಾಗಿದ್ದು, ತಂತ್ರಾಂಶದಲ್ಲಿನ ತೊಡಕು ನಿವಾರಣೆಗೊಂಡ ಕೂಡಲೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಅನುಮೋದನೆಗೊಂಡ 11,855 ಅರ್ಜಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಲಾಗಿನ್‌ನಲ್ಲಿ ಅಂತಿಮ ಅನುಮೋದನೆಗಾಗಿ ಬಾಕಿ ಉಳಿದಿವೆ, ಈ ರೀತಿ, ವಿವಿಧ ಹಂತಗಳಲ್ಲಿ ಒಟ್ಟು 36,362 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿದ್ದು, ಇದುವರೆಗೆ ಇ-ಸ್ವತ್ತು 2.0 ತಂತ್ರಾಂಶದಡಿ ಒಟ್ಟು 6,823 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ನಮೂನೆ-11ಎ ಖಾತೆಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆಗಳು ಹಾಗೂ ಬಹುಮಹಡಿ (ಅಪಾರ್ಟ್‌ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಎರಡು ವಾರಗಳಲ್ಲಿ ಅವಕಾಶ ನೀಡಲಾಗುವುದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳಿಕರಿಸಲು ಕ್ರಮವಹಿಸಲಾಗುತ್ತಿದೆ, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಸಮಸ್ಯೆ / ಸಂದೇಹಗಳನ್ನು ಬಗೆಹರಿಸಲು ಸರ್ಕಾರ ಬದ್ದವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸಹಕಾರ ನೀಡಬೇಕೆಂದು ಕೋರಿರುವ ಸಚಿವರು ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆಯಿಂದ ಸಹಾಯವಾಣಿ (9483476000) ಪ್ರಾರಂಭಿಸಲಾಗಿದ್ದು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಇ-ಸ್ವತ್ತು 2.0 ರಡಿ ಅರ್ಜಿ ಸಲ್ಲಿಸಲು, ಸಂಬಂಧಿತ ದಾಖಲಾತಿ / ಪ್ರಕ್ರಿಯೆಯಲ್ಲಿ / ತಂತ್ರಾಂಶದ ಬಳಕೆಯ ಕುರಿತು ಸಂದೇಹಗಳಿದ್ದಲ್ಲಿ ತಮ್ಮ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.karnataka.gov.in/Login.aspx ರಲ್ಲಿ "ಸಂಪರ್ಕಿಸಿ" ಶೀರ್ಷಿಕೆಯಡಿ ಹಾಗೂ https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications