Get Updates
Get notified of breaking news, exclusive insights, and must-see stories!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಮಹತ್ವದ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಜನವರಿ 08: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ ನಡೆಸಿದರು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದ್ದು, ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು‌‌‌.

Action Will Be Taken To Increase The Honorarium Of Anganwadi Workers Lakshmi Hebbalkar

ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಹಿಳಾ‌ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು: ಜಿ.ಪರಮೇಶ್ವರ

ಪೊಲೀಸ್ ವಸತಿ ನಿಗಮದಿಂದ ಇಲಾಖೆಯ ಅಧಿಕಾರಿ‌ಮತ್ರು ಸಿಬ್ಬಂದಿಗಳಿಗೆ 28 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿಗಳ‌ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಇಡೀ ದೇಶದಲ್ಲಿ ಕರ್ನಾಟಕ ಪೊಲೀಸರು ಉತ್ತಮವಾದ ಪೊಲೀಸ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅನೇಕ‌ ಸವಾಲುಗಳನ್ನು ಎದುರಿಸಿಕೊಂಡು ಬರುತ್ತಿದೆ. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಇಲಾಖೆಗೆ‌ ಅನೇಕ‌ ಉತ್ತೇಜನ ಕೊಟ್ಟಿದ್ದಾರೆ. ಪೊಲೀಸರು ವಾಸಿಸುವ ಮನೆಗಳನ್ನು ನೋಡಿದಾಗ ಸುಸಜ್ಜಿತವಾಗಿ ಇರಲಿಲ್ಲ. ಯೋಗ್ಯವಾದ ಮನೆಗಳನ್ನು ಕಲ್ಪಿಸಬೇಕು ಎಂಬ ಉದ್ದೇಶದಿಂದ ಪೊಲೀಸ್ ವಸತಿ ಗೃಹ ಯೋಜನೆ ಆರಂಭಿಸಲಾಯಿತು. ಈವರೆಗೆ ಶೇ. 46ರಷ್ಟು ಮನೆಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಪೊಲೀಸ್ ವಸತಿ ಗೃಹ ಯೋಜನೆಯನ್ನು ಮುಂದುವರಿಸಲಾಗುವುದು ಎಂದು ಹೇಳಿದರು.

ಪೊಲೀಸ್ ವಸತಿ ನಿರ್ಮಿಸಲು ಹೆಚ್ಚಿನ‌ ಅನುದಾನ‌ ಕೋರಿ ಕೇಂದ್ರ ಸರ್ಕಾರಕ್ಕೆ‌ ಮನವಿ‌ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ‌ ಅನುದಾನ ನೀಡಿದರೆ ಇಲಾಖೆಯ ಅಧಿಕಾರಿ‌‌ ಮತ್ತು ಸಿಬ್ಬಂದಿಗಳಿಗೆ ಎಲ್ಲ‌ ರೀತಿಯ ಸವಲತ್ತುಗಳನ್ನು ಕಲ್ಪಿಸಲು ಅನುಕೂಲವಾಗುತ್ತದೆ. ನಗರದಲ್ಲಿ ಅಪರಾಧಗಳು ಇಳಿಮುಖವಾಗಿದ್ದು, ಜನಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮತ್ತಷ್ಟು ಕಠಿಣವಾಗಿ ಕೆಲಸ‌ ಮಾಡಬೇಕು‌ ಎಂದು ಸೂಚಿಸಿದರು.

ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ನಿಯಂತ್ರಣ ಮಾಡಿದ್ದೇವೆ. ದೇಶದಲ್ಲೇ‌‌ ಮೊದಲ ಬಾರಿಗೆ ಸೈಬರ್ ವಿಭಾಗಕ್ಕೆ ಡಿಜಿಪಿ ಸ್ಥಾನಮಾನದ ಅಧಿಕಾರಿಯನ್ನು‌ ನಿಯೋಜಿಸಲಾಗುತ್ತಿದೆ. ಡೇಟಾ ಕದಿಯುವ ಜಾಲವನ್ನು ತಡೆಗಟ್ಟಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಗರದಲ್ಲಿ‌ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದೆ. ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 650 ಕೋಟಿ ರೂ. ಖರ್ಚು ಮಾಡಿ, ಸಿಸಿ‌ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಸಣ್ಣ ಘಟನೆಯು ಜರುಗದಂತೆ ಇಲಾಖೆಯ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ‌ ಮಾಡುವುದಾಗಿ ಘೋಷಣೆ ಮಾಡಿದ್ದೇವೆ. ಈ ನಿಟ್ಟಿನಲ್ಲಿ ನೂರಾರು ಕೋಟಿ ರೂ.‌ಮೌಲ್ಯದ ಡ್ರಗ್ಸ್ ಪತ್ತೆಹಚ್ಚಿ ನಾಶಪಡಿಸಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಒಂದು ತಿಂಗಳ‌ ಮುಂಚೆಯೇ ವಿಶೇಷ ಕಾರ್ಯಾಚರಣೆ ಕೈಗೊಂಡು ಮಾದಕ ದ್ರವ್ಯಗಳನ್ನು ಪತ್ತೆ ಹಚ್ಚಲಾಗಿದ್ದು, ಕಾರ್ಯಾಚರಣೆಯು ನಿರಂತರವಾಗಿ ಮುಂದುವರಿಯಲಿದೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+