ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತಿಭಟಿಸುತ್ತಿದ್ದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಬಂಧನ
ಬೆಂಗಳೂರು, ಸೆಪ್ಟೆಂಬರ್ 29: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೆ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದಲ್ಲಿ ಕಾವೇರಿ ನದಿ ನೀರಿನ ಪರ ಹೋರಾಟ ಜೋರಾಗಿದ್ದು ಬೆಂಗಳೂರು ಬಂದ್ ಯಶಸ್ವಿಯಾದ ಬೆನ್ನಲ್ಲೇ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಈಗ ಮತ್ತೊಂದೆಡೆ ಕರ್ನಾಟಕ ಗಡಿ ಅತ್ತಿಬೆಲೆ ಬಳಿ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಸದಸ್ಯರನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಪ್ರತಿಭಟನಕಾರರು ತಮಿಳುನಾಡಿನ ಗಡಿ ಪಟ್ಟಣವಾದ ಜುಜುವಾಡಿಯಲ್ಲಿ ತಮಿಳುನಾಡು ನೋಂದಣಿ ವಾಹನಗಳನ್ನು ತಡೆದರು. ಕಾವೇರಿ ಹೋರಾಟ ಜೋರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸುಮಾರು 400 ಕ್ಕೂ ಹೆಚ್ಚು ಬಸ್‌ಗಳು ಹೊಸೂರಿನಲ್ಲಿ ನಿಂತಿವೆ. ಏಕೆಂದರೆ ಪೊಲೀಸರು ಅವುಗಳನ್ನು ಮುಂದೆ ಸಾಗದಂತೆ ತಡೆಯುತ್ತಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ ಗಡಿಯಲ್ಲಿ ಕನ್ನಡ ಪರ ಸಂಘಟನೆ ಪ್ರತಿಭಟನೆ ನಡೆಸಿತು.
ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಆದೇಶ ನೀಡಿದ ಹಿನ್ನೆಲೆಯಲ್ಲಿ ರೈತ ಸಂಘಗಳು ಮತ್ತು ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ನಡೆಸುತ್ತಿವೆ. ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ ಹೋರಾಟ ಜೋರಾಗಿದ್ದು, ಬಂದ್ ಕಾರಣ ಎಲ್ಲ ಸೇವೆಗಳು ಇಂದು ವ್ಯತ್ಯಯವಾಗಿವೆ. ಆದರೆ ಸರ್ಕಾರಿ ಸೇವೆಗಳಾದ ಸಾರಿಗೆ ಮೆಟ್ರೋ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಕಚೇರಿಗಳು ನಡೆಯುತ್ತಿವೆ.
ಅತ್ತಿಬೆಲೆ ಬಳಿ ಹಲವು ಪ್ರತಿಭಟನಾಕಾರರು ಕಾವೇರಿ ನದಿ ತಮಗೇ ಸೇರಿದ್ದು ಎಂದು ಘೋಷಣೆ ಕೂಗಿದರು. ಬಂದ್ ಕರೆ ಮಧ್ಯೆ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಘಟನೆಗಳ 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. "ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವುದರಿಂದ ನಾವು ಸೂಕ್ತ ವ್ಯವಸ್ಥೆ ಮಾಡಿದ್ದೇವೆ. ಸಂಘಟನೆಗಳ 50 ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಮ್ಮಲ್ಲಿ ಸಾಕಷ್ಟು ಸಿಬ್ಬಂದಿ ಇದ್ದಾರೆ ಮತ್ತು ಯಾವುದೇ ತೊಂದರೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ" ಎಂದು ಹೆಚ್ಚುವರಿ ಅಧೀಕ್ಷಕರು ಬೆಂಗಳೂರು ಗ್ರಾಮಾಂತರ ಪೊಲೀಸ್ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಸಂಸ್ಥೆಗಳು ಪ್ರತಿಭಟನೆ ಮತ್ತು ಬಂದ್ ಕರೆ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು. ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ವಾಣಿಜ್ಯ ಪ್ರದೇಶವಾದ ಕಬ್ಬನ್‌ಪೇಟೆ ಮತ್ತು ಕಾಟನ್‌ಪೇಟೆ ವಾಣಿಜ್ಯ ಮಾರುಕಟ್ಟೆಗಳಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ.
ಬಂದ್‌ಗೆ ಕರೆನೀಡಿದ್ದ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆಎ ದಯಾನಂದ ಅವರು ಶುಕ್ರವಾರ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಂಡ್ಯ ಮತ್ತು ಬೆಂಗಳೂರಿನಲ್ಲಿ ಶುಕ್ರವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಡ್ಯ ಜಿಲ್ಲೆಯ ಗದ್ದಲಗೆರೆ ರೈಲು ಹಳಿ ಮೇಲೆ ಕುಳಿತು ರೈಲು ನಿಲ್ಲಿಸಲು ರೈತ ಪರ ಹೋರಾಟಗಾರರು ಹೇಳಿದ ನಂತರ ಹೆಚ್ಚಿನ ಪೊಲೀಸ್ ಪಡೆಗಳನ್ನು ಸ್ಥಳಾಂತರಿಸಲಾಯಿತು. ಕಾರ್ಯಕರ್ತರು ರೈಲ್ವೆ ಟ್ರ್ಯಾಕ್‌ಗಳ ಬಳಿಗೆ ಹೋಗುವುದನ್ನು ತಡೆಯಲು ಪೊಲೀಸರು ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ನಿಯೋಜಿಸಿದ್ದರು.












Click it and Unblock the Notifications