ನಟ ಗಣೇಶ್‌ಗೆ ಅರಣ್ಯ ಇಲಾಖೆ ನೋಟಿಸ್ ಜಾರಿ: ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ತಡೆ
ಬೆಂಗಳೂರು, ಆಗಸ್ಟ್ 17: ಬಂಡೀಪುರ ಅರಣ್ಯದ ಸೂಕ್ಷ್ಮ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿರುವ ಸ್ಯಾಂಡಲ್‌ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಆಕ್ಷೇಪ ಎದುರಾಗಿದೆ. ನೂತನ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಬಂಡೀಪುರದಲ್ಲಿ ನಟ ಗಣೇಶ್ ಅವರು ಶಾಶ್ವತ ಮನೆ ನಿರ್ಮಿಸುತ್ತಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳಿಂದ ಈ ವಿಚಾರ ಸದ್ದು ಮಾಡುತ್ತಲೇ ಇತ್ತು. ಇದು ಅರಣ್ಯ ಸೂಕ್ಷ್ಮ ಪರಿಸರ ವಲಯವಾದ್ದರಿಂದ 'ಗಣೇಶ' ನಿವಾಸಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಇದೀಗ ಅದರ ಮುಂದುವರಿದ ಭಾಗವಾಗಿ ಅರಣ್ಯ ಇಲಾಖೆ ನಟ ಗಣೇಶ್ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಹಳ್ಳಿಯ ಸರ್ವೆ ನಂಬರ್ 105 ರಲ್ಲಿ ಒಟ್ಟು 1 ಎಕರೆ 24 ಗುಂಟೆ ಸ್ವಂತ ಭೂಮಿಯಲ್ಲಿ ಹೊಂದಿರುವ ಗಣೇಶ್ ಅವರು ನಿರ್ಮಿಸುತ್ತಿದ್ದ ನಿವಾಸದ ಕಾಮಗಾರಿಗೆ ಬ್ರೇಕ್ ಬಿದ್ದಿದೆ. ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ವಿಚಾರ ಬಹಿರಂಗವಾಗುತ್ತಿದ್ದಂತೆ ನಟ ಗಣೇಶ್ ಅವರು ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೇ ಕಟ್ಟಡ ನಿರ್ಮಾಣ ಮೂಲಕ ಪರಿಸರ ವಲಯ ನಿರ್ವಹಣಾ ಸಮಿತಿ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.
ಪರಿಸರವಾದಿಗಳ ಆಕ್ಷೇಪ
ಮತ್ತೊಂದೆಡೆ ಗಣೇಶ್ ಅವರು ಇಲ್ಲಿ ತಾತ್ಕಾಲಿಕವಾಗಿ ಮನೆ ಕಟ್ಟುತ್ತಿದ್ದಾರೆ. ಅದಕ್ಕಾಗಿ ಅವರು ಸೂಕ್ಷ್ಮ ವಲಯದ ಮಾನಿಟರಿಂಗ್ ಸಮಿತಿಯಿಂದ ಅನುಮತಿ ಪಡೆದಿದ್ದಾರೆ ಅಂತಲೂ ಹೇಳಲಾಗಿದೆ. 2022ರಲ್ಲಿ ಸ್ವಂತ ಮನೆ ಅದರ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವುದಾಗಿ ಕೇಳಿದ್ದರು. ಇದಕ್ಕೆ ಅರಣ್ಯಾಧಿಕರಿಗಳು ಮುಚ್ಚಳಿಕೆ ಬರೆಸಿಕೊಂಡು ಅನುಮತಿ ನೀಡಿದ್ದರು. ಆದರೆ ಈಗ ಅಲ್ಲಿ ಜೆಸಿಬಿ ಮೂಲಕ ದೊಡ್ಡಮಟ್ಟದಲ್ಲಿ ಕೆಲಸ ನಡೆಯುತ್ತಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಆದರೆ ಇದೂವರೆಗೂ ನಟ ಗಣೇಶ್ ಅವರು ಬಂಡೀಪುರ ಅರಣ್ಯ ಪ್ರದೇಶದಲ್ಲಿನ ಮನೆ ನಿರ್ಮಾಣ ಕುರಿತು ಪ್ರತಿಕ್ರಿಯಿಸಿಲ್ಲ. ಇದು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಕಾರಣವಾಗಿದೆ. ಏಕೆಂದರೆ ತಮ್ಮ ನೆಚ್ಚಿನ ನಟ ಹೀಗೆ ನಿಯಮ ಉಲ್ಲಂಘಿಸಿ ಮನೆ ಕಟ್ಟುತ್ತಿದ್ದಾರಾ?. ಈ ವಿಚಾರವನ್ನು ನಂಬಲು ಅವರಿಗೆ ಕಷ್ಟವಾಗುತ್ತಿದೆ. ಶೀಘ್ರವೇ ಈಕುರಿತು ಗಣೇಶ್ ಅವರು ಅಧಿಕೃತ ಮಾಹಿತಿ ನೀಡಬೇಕಿದೆ.
ನಟ ಗಣೇಶ್ ಅವರಿಗೆ ಸದ್ಯ ಸದ್ಯ ಬಂಡಿಪುರ ಹುಲಿಧಾಮ ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್ ನೋಟಿಸ್ ಜಾರಿ ಮಾಡಿದ್ದು, ಕಟ್ಟಡ ನಿರ್ಮಾಣ ಬಗ್ಗೆ ವಿವರಣೆ ಕೇಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications