Jaggesh Tiger Claw: ಹುಲಿ ಉಗುರು ಧರಿಸಿದ್ದಾಗಿ ಒಪ್ಪಿಕೊಂಡಿದ್ದ ನಟ ಜಗ್ಗೇಶ್‌ಗೆ ಸಂಕಷ್ಟ?, ದೂರು ದಾಖಲು
ಬೆಂಗಳೂರು, ಅಕ್ಟೋಬರ್ 25: ಬಿಗ್‌ಬಾಸ್‌ಗೆ ಕನ್ನಡ ರಿಯಾಲಿಟಿ ಶೋಗೆ ತೆರಳಿದ್ದ ವರ್ತೂರು ಸಂತೋಷ್ ಅವರು 'ಹುಲಿ ಉಗುರು' (Tiger claw) ಧರಿಸಿದ್ದರಿಂದ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಹುಲಿ ಉಗುರು, ಚರ್ಮ ಬಳಕೆ ವಿಚಾರ ಮುನ್ನೆಲೆ ಬರುತ್ತಿದೆ. ವರ್ತೂರು ಸಂತೋಷ್ ಅವರಿಗೆ ಬಂದ ಸಂಕಷ್ಟ ಬಿಜೆಪಿ ಸಂಸದ ನಟ ಜಗ್ಗೇಶ್ ಅವರಿಗೂ ಬಂದಿದೆ.
ಹೌದು, ವಿಡಿಯೋ ಒಂದರಲ್ಲಿ ನವರಸ ನಾಯಕ ಜಗ್ಗೇಶ್ ಅವರು ಸಂದರ್ಶನ ವೇಳೆ ತಾವು ನಿಜವಾದಗಿಯೂ ಹುಲಿ ಉಗುರನ್ನು ಧರಿಸಿರುವುದಾಗಿ ಸ್ವತಃ ಅವರೇ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ವರ್ತೂರು ಸಂತೋಷ್ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ಹುಲಿ ಉಗುರು ಧರಿಸಿದ ನಾಯಕರು, ರಾಜಕಾರಣಿಗಳ ವಿಡಿಯೋ, ಫೋಟೊಗಳು, ಚರ್ಮ ಬಳಕೆಯ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಸಂದರ್ಶನವೊಂದರಲ್ಲಿ ನಟ ಮತ್ತು ಸಂಸದ ಜಗ್ಗೇಶ್ ಅವರು, 'ನನಗೆ 20 ವರ್ಷ ವಯಸ್ಸಾದಾಗ ಜನ್ಮ ದಿನಾಚರಣೆಗೆ ನನ್ನ ತಾಯಿ ನನಗೆ ಒರಿಜಿನಲ್ ಹುಲಿ ಉಗುರಿನಲ್ಲಿ ಇದನ್ನು ಮಾಡಿಸಿದ್ದಾರೆ'' ಎಂದು ಹೇಳಿದ್ದಾರೆ. ಹೇಳುವಾಗ ಕೊರಳಲ್ಲಿನ ಹುಲಿ ಉಗುರಿನ ಲಾಕೆಟ್/ಚೈನ್ ಅನ್ನು ಪ್ರದರ್ಶಿಸುತ್ತಾರೆ. ಬಳಿಕ ಶರ್ಟ್ ನಿಂದ ಹುಲಿ ಉಗುರಿನ ಲಾಕೆಟ್ ಅನ್ನು ಮುಚ್ಚಿಕೊಳ್ಳುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಜನತಾ ದಳದಿಂದ ಜಗ್ಗೇಶ್ ವಿರುದ್ಧ ದೂರು
ಸದ್ಯ ಅರಣ್ಯಜೀವಿ ಸಂರಕ್ಷಣಾ ಕಾಯ್ದೆ (1972) ಅಡಿ ಜಗ್ಗೇಶ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕು ಪ್ರಶ್ನೆ ಮಾಡುತ್ತಿದ್ದಾರೆ. ಇದಷ್ಟೇ ಅಲ್ಲ ನಟರಾದ ದರ್ಶನ್, ನಿಖಿಲ್ ಕುಮಾರಸ್ವಾಮಿ, ರಾಕ್‌ಲೈನ್ ವೆಂಕಟೇಶ್ ಅವರು ಸಹ ಹುಲಿ ಉಗುರು ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅವರಲ್ಲಿ ಯಾರು ಈ ಬಗ್ಗೆ ಒಪ್ಪಿಕೊಂಡಿಲ್ಲ. ಇತ್ತ ಅವಧೂತ ವಿನಯ್ ಗುರೂಜಿ ಅವರು ಹುಲಿಯ ಚರ್ಮದ ಮೇಲೆ ಕುಳಿತ ಫೋಟೊ ವೈರಲ್ ಆಗಿದೆ. ಪ್ರಕರಣ ಸಂಬಂಧ ಕೆಲವರ ವಿರುದ್ಧ ಈಗಾಗಲೇ ದೂರು ದಾಖಲಾಗಿವೆ.

ಸಾಬೀತಾದರೆ ಕ್ರಮ ಎಂದ ಅರಣ್ಯ ಇಲಾಖೆ
ಬುಧವಾರ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ನಾಗೇಶ್ ಅವರು ನಟ ಜಗ್ಗೇಶ್ ಅವರ ವಿರುದ್ಧ ಅರಣ್ಯ ಇಲಾಖೆಗೆ ದೂರು ದಾಖಲಿಸಿದ್ದಾರೆ. ಹುಲಿ ಉಗುರು ಎಂದು ಸಾಬೀತಾದರೆ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ಹುಲಿ ಉಗುರು ಧಾರಣೆ ವಿಚಾರದಲ್ಲಿ ರಾಜ್ಯ ಅರಣ್ಯ ಇಲಾಖೆ ಏನು ಕ್ರಮ ಜರುಗಿಸಲಿದೆ. ಮುಂದಿನ ನಡೆ ಏನು? ಯಾರಿಗೆಲ್ಲ ನೋಟಿಸ್ ನೀಡಿಲಿದೆ ಎಂಬದನ್ನು ಕಾದು ನೋಡಬೇಕಿದೆ. ಇನ್ನೂ ವರ್ತೂರು ಸಂತೋಷ್ ಅವರನ್ನು ಇದೇ ವಿಚಾರದಲ್ಲಿ ಬಂಧಿಸಲಾಗಿದೆ. ಅವರು ಧರಿಸಿದ್ದ ಹುಲಿ ಉಗುರನ್ನು ಎಫ್‌ಎಸ್‌ಎಲ್ ತಪಾಸಣೆಗೆ ಕಳುಹಿಸಲಾಗಿದೆ. ಅಲ್ಲಿ ಈ ಹುಲಿ ಉಗುರು ಎಷ್ಟು ವಯಸ್ಸಿನ ಹುಲಿಯದ್ದು, ಯಾವ ಜಾತಿ ಹುಲಿಯದು ಎಂಬ ಸತ್ಯ ಬೆಳಕಿಗೆ ಬರಲಿದೆ. ಅದರ ಆಧಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ಸಾಗಲಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications