Kamal Haasan: ನಟ ಕಮಲ್ ಹಾಸನ್ ಥಗ್ ಲೈಫ್ ಸಿನಿಮಾಗೆ ಎದುರಾಯ್ತು ಸಂಕಷ್ಟ: ಕನ್ನಡಿಗರ ಆಗ್ರಹವೇನು ?
Kamal Haasan: ನಟ ಕಮಲ್ ಹಾಸನ್ ಅವರ ಕನ್ನಡಿಗರ ಕ್ಷಮೆ ಕೇಳಬೇಕು ಎನ್ನುವ ಆಗ್ರಹ ಹೆಚ್ಚಾಗಲು ಪ್ರಾರಂಭವಾಗಿದೆ. ನಟ ಕಮಲ್ ಹಾಸನ್ ಅವರು ತಮಿಳಿನಿಂದಲೇ ಕನ್ನಡ ಎಂದು ಹೇಳಿದ್ದರು. ಇದಕ್ಕೆ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು. ಈ ವಿಚಾರವಾಗಿ ಕ್ಷಮೆ ಕೇಳಬೇಕು ಎನ್ನುವ ಆಗ್ರಹವು ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಜನ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಕನ್ನಡಿಗರು ನಟ ಕಮಲ್ ಹಾಸನ್ ಅವರ ಮೇಲೆ ಅಪಾರ ಪ್ರೀತಿಯನ್ನು ಇರಿಸಿಕೊಂಡಿದ್ದರು. ಅವರ ಅಭಿನಯಕ್ಕೆ ಕನ್ನಡಿಗರು ಮೆಚ್ಚಿಕೊಂಡಿದ್ದರು. ಆದರೆ, ನಟ ಕಮಲ್ ಹಾಸನ್ ಅವರು ಅವರ ಕೈಯಿಂದಲೇ ಅದನ್ನು ಹಾಳು ಮಾಡಿಕೊಂಡಿದ್ದಾರೆ. ಕನ್ನಡ ಭಾಷೆಯಿಂದ ತಮಿಳು ಬಂದಿದೆ ಎಂದು ಹೇಳುವ ಅವಶ್ಯಕತೆಯೇ ಇರಲಿಲ್ಲ. ಕಮಲ್ ಅವರು ಅನಿವಾರ್ಯವಾಗಿ ಈ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಕನ್ನಡಿಗರು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟ ಕಮಲ್ ಹಾಸನ್ ಹಾಗೂ ಶಿವರಾಜ್ ಕುಮಾರ್ ಅವರ ಬಗ್ಗೆ ಚರ್ಚೆಯಾಗುತ್ತಿರುವುದೇನು ಎನ್ನುವ ವಿವರ ನೋಡೋಣ..
ಕನ್ನಡ - ತಮಿಳಿನ ಬಗ್ಗೆ ಕಮಲ್ ಹಾಸನ್ ಅವರು ಮಾತನಾಡಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಇದೀಗ ನಟ ಕಮಲ್ ಹಾಸನ್ ಅವರ ಪ್ರಮುಖ ಸಿನಿಮಾ 'ಥಗ್ ಲೈಫ್' ಬಿಡುಗಡೆಗೆ ದೊಡ್ಡ ತಲೆನೋವು ಎದುರಾಗಿದೆ. ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ನಟ ಕಮಲ್ ತಮಿಳಿನಿಂದಲೇ ಕನ್ನಡ ಬಂದಿದೆ ಎಂದು ಹೇಳಿರುವ ಒಂದು ಮಾತು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೂ ವಿರೋಧ ವ್ಯಕ್ತಪಡಿಸಿದ್ದಾರೆ. ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ, ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ಅವರು ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ ಎಂದು ಹೇಳಿದ್ದಾರೆ.
ಭಾರತವೂ ಸೇರಿದಂತೆ ವಿಶ್ವದ ಹತ್ತು -ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತಾಶತಮಾನಗಳಿಂದಲೂ ಪಡಿಮೂಡಿದೆ. ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ ಎಂಬ ಕನಿಷ್ಠ ತಿಳುವಳಿಕೆ ಕಮಲ್ ಹಾಸನ್ ರಂತಹ ಸಂಕುಚಿತ ವ್ಯಕ್ತಿತ್ವವಿರುವ ದುರಾಭಿಮಾನಿ ವ್ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ,ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ.
ದಕ್ಷಿಣ ಭಾರತದಲ್ಲಿ ಸಾಮರಸ್ಯತೆಯನ್ನು ಬೆಸೆಯಬೇಕಾದ ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುತ್ತಿದ್ದರು. ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು ಕನ್ನಡವನ್ನು ಅಪಮಾನಿಸಿದ್ದಾರೆ. ಈ ಕೂಡಲೇ ಕಮಲ್ ಹಾಸನ್ ಅವರು ಈ ಕೂಡಲೇ ಬೇಷರತ್ ಕನ್ನಡಿಗರ ಕ್ಷಮೆ ಕೇಳಬೇಕು.
ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿತು ಎಂಬುದನ್ನು ವ್ಯಾಖ್ಯಾನಿಸಲು ಕಮಲ್ ಹಾಸನ್ ಇತಿಹಾಸ ತಜ್ಞರೇನೂ ಅಲ್ಲ. ಆದರೆ ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಇರುವ ಕನ್ನಡ ಭಾಷೆ ಭಾರತದ ಭೂಪಟದಲ್ಲಿ ಸಮೃದ್ಧತೆಯನ್ನು ಸಂಕೇತಿಸುತ್ತದೆ, ಸೌಹಾರ್ದತೆಯನ್ನು ಪ್ರತಿನಿಧಿಸುತ್ತಿದೆ. ಕನ್ನಡಿಗರು ಭಾಷಾ ದ್ವೇಷಿಗಳಲ್ಲ, ಆದರೆ ಕನ್ನಡ ನಾಡು, ನುಡಿ, ಜನ, ಜಲ, ವಿಚಾರಗಳು ಬಂದಾಗ ಸ್ವಾಭಿಮಾನವನ್ನು ಎಂದಿಗೂ ಬಲಿ ಕೊಟ್ಟಿಲ್ಲ ಎಂಬ ಸತ್ಯ ವಿವೇಕ ಸುಟ್ಟುಕೊಂಡವರಂತೆ ಮಾತನಾಡಿರುವ ಕಮಲ್ ಹಾಸನ್ ಅವರಿಗೆ ನೆನಪಿರಲಿ ಎಂದಿದ್ದಾರೆ.
ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ ಎಂದ ಜೆಡಿಎಸ್!
ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಬಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು. ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ ತೆವಲಿಗೆ ಮತ್ತೊಂದು ಭಾಷೆಯನ್ನು ಹೀಯಾಳಿಸುವುದು ತರವೇ ? ಬಹು ಭಾಷಾ ನಟರಾಗಿ ಇಂತಹ ಅಪ್ರಬುದ್ಧ ಹೇಳಿಕೆ ನೀಡುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ಹೇಳಿದೆ.
ತಮಿಳು ಭಾಷೆಯ ಮೇಲಿನ ನಿಮ್ಮ ಅಭಿಮಾನವನ್ನು ತೋರ್ಪಡಿಸಲು ಕನ್ನಡಕ್ಕೆ ಅಪಮಾನಿಸುವುದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ದ್ರಾವಿಡ ಭಾಷೆಗಳಲ್ಲಿ ತಮಿಳಿನಂತೆ ಕನ್ನಡವೂ ಒಂದು ಸ್ವತಂತ್ರ ಭಾಷೆ. ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆ. ಕನ್ನಡ ವಿಶ್ವ ಲಿಪಿಗಳ ರಾಣಿ ಎಂಬುದನ್ನು ಇತಿಹಾಸ ತಜ್ಞರೇ ಒಪ್ಪಿದ್ದಾರೆ ಮೆಚ್ಚಿದ್ದಾರೆ. ವಿಶ್ವದ ಅತ್ಯಂತ ಸುಂದರವಾದ ಭಾಷೆಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿದೆ.
ಭಾಷೆಯ ಬಗ್ಗೆ ಸರ್ಟಿಫಿಕೇಟ್ ಕೊಡಲು ನೀವೇನು ಭಾಷಾ ವಿಜ್ಞಾನಿಯೇ ? ಭಾಷಾ ವಿಜ್ಞಾನ ಗೊತ್ತಿರದ ಅವಿವೇಕಿಗಳಿಂದ ಮಾತ್ರ ಇನ್ನೊಂದು ಭಾಷೆ ಬಗ್ಗೆ ಲಘುವಾಗಿ ಮಾತಾನಾಡಲು ಸಾಧ್ಯ. ಕನ್ನಡ ಭಾಷೆಯು ಸಾವಿರಾರು ವರ್ಷಗಳಿಗೂ ಹೆಚ್ಚು ಪುರಾತನವಾದ ಚಾರಿತ್ರಿಕ ಮತ್ತು ಐತಿಹಾಸಿಕ ಹಿನ್ನೆಲೆಯುಳ್ಳ ಭಾಷೆ ಎಂಬುದನ್ನು ತಾವು ಮೊದಲು ಅರಿಯಿರಿ ಎಂದು ಟ್ವೀಟ್ ಮಾಡಲಾಗಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications