ನಟ ಸುದೀಪ್‌ಗೆ ಬೆದರಿಕೆ ಪ್ರಕರಣ: ಸೈಬರ್ ತಂಡದ ಸಹಾಯ ಕೋರಿದ ಕೇಂದ್ರ ಅಪರಾಧ ವಿಭಾಗ- ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೆಂಗಳೂರು, ಏಪ್ರಿಲ್‌ 11: ನಟ ಕಿಚ್ಚ ಸುದೀಪ್‌ಗೆ ( Kichcha Sudeep ) ಬಂದಿರುವ ಬೆದರಿಕೆ ಪತ್ರಗಳ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ ( CCB ) ಪೊಲೀಸರು ಸೈಬರ್ ತಜ್ಞರ ನೆರವು ಕೋರಿದ್ದಾರೆ. ತನಿಖೆಗಾಗಿ ಸೈಬರ್ ಭದ್ರತಾ ತಜ್ಞರನ್ನು ನಿಯೋಜಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ತನಿಖೆಗೆ ತಾಂತ್ರಿಕ ಬೆಂಬಲವನ್ನೂ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ನಟ ಕಿಚ್ಚ ಸುದೀಪ್‌ ಮ್ಯಾನೇಜರ್ ಆಗಿರುವ ಮಂಜುನಾಥ್ ಅಲಿಯಾಸ್ ಜಾಕ್ ಮಂಜು ಅವರು ಮಾರ್ಚ್ 29 ರಂದು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಬೆದರಿಕೆ ಪತ್ರದ ಕುರಿತು ದೂರು ನೀಡಿದ್ದರು. ಅಪರಿಚಿತ ಆರೋಪಿಗಳು ಮಾರ್ಚ್ 10 ರಂದು ಸುದೀಪ್‌ ಅವರ ಜೆಪಿ ನಗರದ ನಿವಾಸಕ್ಕೆ ಎರಡು ಬೆದರಿಕೆ ಪತ್ರಗಳನ್ನು ಕಳುಹಿಸಿದ್ದರು.

Actor Kichcha Sudeep threat case: Central Crime Branch seeks cyber team’s expertise

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಸುದೀಪ್ ಅವರು ಪತ್ರವನ್ನು ಕಳುಹಿಸಿದ ವ್ಯಕ್ತಿಯ ಬಗ್ಗೆ ನನಗೆ ತಿಳಿದಿದೆ ಮತ್ತು ಅದು ಕನ್ನಡ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಈ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದರು.

ಪತ್ರಗಳು ದೊಮ್ಮಲೂರು ಭಾಗದಿಂದ ರವಾನೆಯಾಗಿರುವುದನ್ನು ಪತ್ತೆ ಹಚ್ಚಿದ ಆಯುಕ್ತರು ಪುಟ್ಟೇನಹಳ್ಳಿ ಠಾಣೆಯಿಂದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿದ್ದರು. ತನಿಖೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Actor Kichcha Sudeep threat case: Central Crime Branch seeks cyber team’s expertise

ಕಿಚ್ಚ ಸುದೀಪ್ ಅವರು ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಪ್ರಚಾರ ಮಾಡುವುದಾಗಿ ಬುಧವಾರ ಹೇಳಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ನಟನ 'ಖಾಸಗಿ ವೀಡಿಯೊ' ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಕೆಲವರು ಬೆದರಿಕೆ ಹಾಕಿದ್ದಾರೆ. ಈ ಕುರಿತು ಕಳೆದ ವಾರ ಪ್ರತಿಕ್ರಿಯಿಸಿದ್ದ ಸುದೀಪ್‌, 'ಹೌದು, ನನಗೆ ಬೆದರಿಕೆ ಪತ್ರ ಬಂದಿದೆ ಮತ್ತು ಅದನ್ನು ನನಗೆ ಯಾರು ಕಳುಹಿಸಿದ್ದಾರೆಂದು ನನಗೆ ತಿಳಿದಿದೆ. ಇದು ಚಿತ್ರರಂಗದ ಯಾರೋ ಒಬ್ಬರು ಎಂದು ನನಗೆ ತಿಳಿದಿದೆ. ಅವರಿಗೆ ತಕ್ಕ ಉತ್ತರ ನೀಡುತ್ತೇನೆ. ನನ್ನ ಕಷ್ಟದ ಸಮಯದಲ್ಲಿ ನನ್ನ ಪರವಾಗಿ ನಿಲ್ಲುವವರ ಪರವಾಗಿ ನಾನು ಕೆಲಸ ಮಾಡುತ್ತೇನೆ' ಎಂದು ತಿಳಿಸಿದ್ದಾರೆ.

Actor Kichcha Sudeep threat case: Central Crime Branch seeks cyber team’s expertise

ನಟ ಕಿಚ್ಚ ಸುದೀಪ್‌ ಮ್ಯಾನೇಜರ್ ಜಾಕ್‌ ಮಂಜು ನೀಡಿದ ದೂರಿನ ಮೇರೆಗೆ ಪುಟ್ಟೇನಹಳ್ಳಿ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 506 ಮತ್ತು 120 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಇತರ ಮುಖಂಡರ ಸಮ್ಮುಖದಲ್ಲಿ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಇದಾದ ಮೂರು ದಿನಗಳ ಬಳಿಕ ಫಲಿತಾಂಶ ಹೊರಬರಲಿದೆ.

ಈಗಾಗಲೇ ಜೆಡಿಎಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್‌ ಮಾಡಿದೆ. ಕಾಂಗ್ರೆದ್‌ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಒಟ್ಟು 166 ಅಭ್ಯರ್ಥಿಗಳ ಪಟ್ಟಿಯನ್ನು ಹೊರ ತಂದಿದೆ. ಇನ್ನುಳಿದ ಅಭ್ಯರ್ಥಿಗಳ ಪಟ್ಟಿಯನ್ನು ಈ ವಾರ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+