Kichha Sudeep Mother: ನಟ ಕಿಚ್ಚ ಸುದೀಪ್‌ ತಾಯಿ ಸರೋಜಾ ನಿಧನ, ಶೋಕದಲ್ಲಿ ಕುಟುಂಬ

ಬೆಂಗಳೂರು, ಅಕ್ಟೋಬರ್ 20: ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ, ಬಿಗ್ ಬಾಸ್ ಕನ್ನಡ ನಿರೂಪಕ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ಕುಟುಂಬವು ಶೋಕ ಸಾಗರದಲ್ಲಿ ಮುಳುಗಿದೆ.

ನಟ ಸುದೀಪ್ ಅವರ ತಾಯಿ ದೀರ್ಘ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ನಿಧನರಾಗಿದ್ದಾರೆ. ಈ ಸುದ್ದಿ ಕಿಚ್ಚು ಸುದೀಪ್ ಮತ್ತು ಅವರ ಆಪ್ತರಿಗೆ, ಅಭಿಮಾನಿಗಳಿಗೆ ಆಘಾತ ನೀಡಿದೆ.

Actor Kichha Sudeep s Mother Saroja Passed Away Due Health Issues

ಮೃತ ದೇಹವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಜೆಪಿ ನಗರದ ಸುದೀಪ್ ಅವರ ಮನೆಗೆ ತರಲಾಗುತ್ತದೆ. ಅಲ್ಲಿಯೇ ಸಿನಿ ಕಲಾವಿದರಿಗೆ, ರಾಜಕೀಯ ಗಣ್ಯರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೃತ ಸರೋಜಾ ಅವರು, ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ಚಿತ್ರರಂಗದ ಕಲಾವಿದರು, ನಟ, ನಟಿಯರು ಸರೋಜಾ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಸಂತಾಪ

ನಟ ಸುದೀಪ್ ತಾಯಿ ನಿಧನಕ್ಕೆ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ''ಖ್ಯಾತ ಚಲನಚಿತ್ರ ನಟ ಹಾಗೂ ಆತ್ಮೀಯರಾದ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ನಿಧನರಾಗಿರುವ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ. ನಟ ಸುದೀಪ್ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ತಾಯಿಯ ನಿಧನದ ದುಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ'' ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಕ್ಷಾತ್ ಅನ್ನಪೂರ್ಣೆ ಆಗಿದ್ದರು: ಬೊಮ್ಮಾಯಿ

ಸುದೀಪ್ ತಾಯಿ ಅವರು ಸಾಕ್ಷಾತ್ ಅನ್ನಪೂರ್ಣೆ, ಹಲವು ವರ್ಷಗಳ ಕಾಲ ಅವರು ಮನೆಗೆ ಹೋದಾಗೆಲ್ಲ ಊಟ, ಉಪಚಾರ, ಪ್ರೀತಿಯಿಂದ ಮಾತನಾಡುತ್ತಿದ್ದರು. ಅವರ ಅಗಲಿಕೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ. ಈಗ ನಾನು ಅವರ ಮನೆಗೆ ಹೋಗಿ, ಅಂತಿಮ ದರ್ಶನ ಪಡೆಯುತ್ತೇನೆ. ಸುದೀಪ್ ಹಾಗೂ ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ದೇವರಲ್ಲಿ ಅವರು ಪ್ರಾರ್ಥಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+