ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು.. ಅಷ್ಟೇ.: ನಟ ಕಿಶೋರ್‌ ಕುಮಾರ್‌

ಬೆಂಗಳೂರು, ಜನವರಿ 22: ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಲಕ್ಷಾಂತರ ರಾಮನ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಸೋಮವಾರ ದಂದು ಭಗವಾನ್‌ ಶ್ರೀರಾಮನು ಅಯೋಧ್ಯೆಯ ರಾಮ ಮಂದಿರದಲ್ಲಿ ನೆಲೆಸಲಿದ್ದು, ಕೋಟ್ಯಂತರ ಭಕ್ತರು ಅಯೋಧ್ಯೆ ರಾಮನನ್ನು ಕಣ್ತುಂಬಿಕೊಂಡಿದ್ದಾರೆ. ಆದರೆ, ರಾಮ ಮಂದಿರ ರಾಜಕೀಯ ಲಾಭಕ್ಕಾಗಿ ಎಂದು ನಟ ಕಿಶೋರ್‌ ಕುಮಾರ್‌ ಕಿಡಿಕಾರಿದ್ದಾರೆ.

ಹೌದು, ಈ ಕುರಿತಂತೆ ನಟ ಕಿಶೋರ್‌ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಅಸಲಿ ಹಿಂದೂ ವಿರೋಧಿ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರು ಹಿಂದೂ ವಿರೋಧಗಳಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Actor Kishore Kumar Asked Who Is The Real Anti Hindu

ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು.. ಅಷ್ಟೇ. ದೇಶದ ಸಮಸ್ಯೆಗಳನ್ನು ಮರೆಮಾಚಿ ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಹಾಕಿ ಎನ್ನುತ್ತಿರುವ ಅಂಧಭಕ್ತರು ಹಿಂದೂ ವಿರೋಧಿಗಳಲ್ಲವೇ ಎಂದು ಜಾಡಿಸಿದ್ದಾರೆ. ನಟ ಕಿಶೋರ್‌ ಕುಮಾರ್‌ ಪೋಸ್ಟ್‌ ಮಾಡಿರುವ ಸಾಲುಗಳು ಇಲ್ಲಿದೆ.

ಅಸಲಿ ಹಿಂದೂ ವಿರೋಧಿ ಯಾರು? ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ?

Actor Kishore Kumar Asked Who Is The Real Anti Hindu

ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು ?? ಜ್ವಲಂತ ಸಮಸ್ಯೆಗಳನ್ನು ಮರೆಮಾಚಿ, ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ?? ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿಬಿಡುವುದಿಲ್ಲವೇ?? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು.. ಅಷ್ಟೇ. ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ.. ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ.. ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ ? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ.. ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+