ನಟ ನೆನಪಿರಲಿ ಪ್ರೇಮ್ ಕಾಂಗ್ರೆಸ್ ಸೇರ್ತಾರಾ? ಇಲ್ಲಿದೆ ಮಹತ್ವದ ಸುಳಿವು
ಬೆಂಗಳೂರು,ನವೆಂಬರ್ 13: ರಾಜ್ಯ ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಜಯ ಗಳಿಸಿದ ಬಳಿಕ, ಲೋಕಸಭಾ ಚುನಾವಣೆಗೆ ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದ್ದು, ಬಿಜೆಪಿ, ಜೆಡಿಎಸ್ ಹಾಗೂ ಹಲವು ಚಿತ್ರನಟರಿಗೂ ಸಹ ಗಾಳ ಹಾಕುತ್ತಿದೆ.
ಹೌದು, 2024 ರಲ್ಲಿ ನಡೆಯುವ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗಾಗಲೇ ಅಸಮಾಧಾನಿತ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಗಾಳ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ಕುರಿತು ಟಾರ್ಗೆಟ್ ನೀಡಿದ್ದು, ಹೈಕಮಾಂಡ್ ಹಾಕಿಕೊಟ್ಟ ಸೂತ್ರಕ್ಕೆ ತಕ್ಕಂತೆ ರಾಜ್ಯ ಕಾಂಗ್ರೆಸ್ ನಾಯಕರು ಹಲವು ತಂತ್ರಗಾರಿಕೆಯನ್ನ ನಡೆಸಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಹಲವು ಬಿಜೆಪಿ - ಜೆಡಿಎಸ್ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸದ್ಯದಲ್ಲೇ ಸೇರ್ಪಡೆಯಾಗುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದು, ಲೋಕಸಭಾ ಚುನಾವಣೆಗಾಗಿ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸುವಂತೆ ಮಾಡಿದೆ. ಇನ್ನೂ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನ ಮಾತ್ರವಲ್ಲದೇ ಪ್ರಭಾವಿ ಚಿತ್ರ ನಟರಿಗೂ ಸಹ ಕಾಂಗ್ರೆಸ್ ಪಡೆ ಗಾಳ ಹಾಕಿದೆ ಎನ್ನಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಕನ್ನಡ ಚಿತ್ರರಂಗದ ನಟ ಭೇಟಿ ಮಾಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಖ್ಯಾತ ಚಿತ್ರನಟರಾದ ನೆನಪಿರಲಿ ಪ್ರೇಮ್ ಅವರು ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಇನ್ನೂ ಪಕ್ಷ ಸೇರ್ಪಡೆ ಕುರಿತು ಡಿ ಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಏಕೆಂದರೆ, ಲೋಕಸಭಾ ಚುನಾವಣೆ ಹಿನ್ನಲೆ ಅತೀ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಠಕ್ಕರ್ ಕೊಡಲು ಕಾಂಗ್ರೆಸ್ ನಾಯಕರು ಬಿಗ್ ಪ್ಲಾನ್ ರೆಡಿ ಮಾಡಿದ್ದು, ಅದರಂತೆ ಹಲವು ನಾಯಕರಿಗೆ ಗಾಳ ಹಾಕಿತ್ತಿದ್ದಾರೆ. ಚಿತ್ರ ನಟ ಹಾಗೂ ನಟಿಯವ ಜೊತೆಗೂ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಈಗಾಗಲೇ ಹಲವು ಚಿತ್ರ ನಟ-ನಟಿಯರು ಹಾಗೂ ಕಿರುತೆರೆ ನಟರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಇದೀಗ ಇನ್ನಷ್ಟು ನಟ-ನಟಿಯರನ್ನ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ನಡೆಸಿದ್ದಾರೆ. ನಟ ಪ್ರೇಮ್ ಜೊತೆಗೆ ಈಗಾಗಲೇ ಡಿ ಕೆ ಶಿವಕುಮಾರ್ ಅವರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು, ಕಾಂಗ್ರೆಸ್ ಸೇರ್ಪಡೆ ಹಾಗೂ ಲೋಕಸಭಾ ಚುನಾವಣೆಯ ಕೆಲ ವಿಚಾರಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.











Click it and Unblock the Notifications