Prakash Raj: ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ನಟ ಪ್ರಕಾಶ್ ರೈ

ಬೆಂಗಳೂರು, ಜುಲೈ 15: ರೈತರ ಹೋರಾಟಕ್ಕೆ ಕೊನೆಗೂ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆನ್ನು ಕೈಬಿಡಲು ಮುಂದಾಗಿದೆ. ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

1198 ದಿನಗಳ ಹೋರಾಟಕ್ಕೆ ಜಯ ಸಿಕ್ಕ ಕುರಿತು ಬಹುಭಾಷಾ ನಟ ಪ್ರಕಾಶ್ ರೈ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮೂರು ವರ್ಷಗಳ ಕಾಲ ನಿರಂತರವಾಗಿ ನಡೆದ ಹೋರಾಟಕ್ಕೆ ಜಯ ಸಿಕ್ಕಿದೆ. ರೈತರ ಹೋರಾಟಕ್ಕೆ ಕೊನೆಗೂ ಜಯ ದೊರಕಿದೆ ರೈತರು ಮತ್ತು ರೈತ ಸಂಘಟನೆಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚಿಸಿ ಈ ಒಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ಪ್ರಕಟಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದರು.

Actor Prakash Raj Expressed Gratitude To The Siddaramaiah Government

ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ವಾಪಸ್ ಪಡೆದಿದೆ.

ಇನ್ನೂ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದರು.

ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+