ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ: ನಟ ಪ್ರಕಾಶ್ ರಾಜ್
Karnataka Lok Sabha Election Result 2024: ದೇಶದಲ್ಲಿ ಲೋಕಸಭಾ ಚುನಾಣೆಯ ಮತದಾನ 7 ಹಂತಗಳಲ್ಲಿ ನಡೆದಿದ್ದು, ಈ ಪೈಕಿ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಇನ್ನು ಇಂದು (ಜೂನ್ 04) ಫಲಿತಾಂಶ ಹೊರಬಿದ್ದಿದ್ದು, ಈ ಬಗ್ಗೆ ಟ್ವೀಟ್ ಮೂಲಕ ಪ್ರಕಾಶ್ ರಾಜ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೋಡಿ.
ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟ ಆಗಿದ್ದು, ಆಡಳಿತರೂಢ ಬಿಜೆಪಿ ಪಕ್ಷ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆ ಬಿಜೆಪಿಗೆ ತನ್ನ ಮೈತ್ರಿಕೂಟದ ಇತರೆ ಪಕ್ಷಗಳ ಬೆಂಬಲವನ್ನು ಒಟ್ಟುಗೂಡಿಸುವ ಪರಿಸ್ಥಿತಿ ಬಂದಿದೆ. ಇನ್ನು ರಾಜ್ಯದಲ್ಲು ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು, "ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮವಾಗಿ ಹೋರಾಡಿದ್ದೇವೆ" ಎಂದು ಬರೆದುಕೊಂಡಿದ್ದಾರೆ. ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
The EMPEROR IS NAKED… he is forced to walk with someone else’s support now … 😂😂😂. … Thank you INDIA and the responsible Civil Society … for puncturing his Ego and for showing his place.. We fought well for our Country … and We shall continue to…💪💪💪 #JaiHind… https://t.co/RnRzxl7oti
— Prakash Raj (@prakashraaj) June 4, 2024












Click it and Unblock the Notifications