ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ರಜನಿಕಾಂತ್, ಎನ್‌ಟಿಆರ್ ಅತಿಥಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 28: ಚಂದನವನದ ಖ್ಯಾತ ನಟ ದಿ. ಪುನೀತ್ ರಾಜಕುಮಾರ್‌ಗೆ ನೀಡಲಾಗುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹಿರಿಯ ನಟ ರಜನೀಕಾಂತ್ ಹಾಗೂ ತೆಲುಗಿನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಬೆಂಗಳೂರಿನಲ್ಲಿ ನವೆಂಬರ್ 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕಾಗಿ ಇಡೀ ಕರುನಾಡು ಎದುರು ನೋಡುತ್ತಿದೆ. ಇದರ ಮಧ್ಯೆ ಮುಖ್ಯ ಅತಿಥಿಗಳು ಯಾರು ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಕೊಟ್ಟಿದ್ದಾರೆ.

Breaking: ಡಾ.ಪುನೀತ್ ರಾಜ್‌ಕುಮಾರ್‌: ನವೆಂಬರ್ 1 ರಂದು 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ: ಸಿಎಂBreaking: ಡಾ.ಪುನೀತ್ ರಾಜ್‌ಕುಮಾರ್‌: ನವೆಂಬರ್ 1 ರಂದು 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ: ಸಿಎಂ

ರಜನಿಕಾಂತ್ ಮುಖ್ಯ ಅತಿಥಿಯಾಗಿ ಆಗಮಿಸುವುದಕ್ಕೆ ಸಮ್ಮತಿಸಿದ್ದು, ಇನ್ನೇನು ಅನುಮತಿ ಪತ್ರವನ್ನು ನೀಡುವುದೊಂದು ಬಾಕಿ ಉಳಿದಿದೆ. ಅದೇ ರೀತಿ ಕನ್ನಡವನ್ನು ಬಲ್ಲವರಾದ ಜೂನಿಯರ್ ಎನ್‌ಟಿಆರ್ ಕೂಡ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 Actor Rajinikanth and Junior NTR is Chief Guest of Karnataka Ratna Award Function on Nov 1st

ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ: ಕನ್ನಡ ರಾಜ್ಯೋತ್ಸವದಂದು ದಿ. ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರವೊಂದು ಸಿಹಿ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರ ನವೆಂಬರ್ 1ರಂದು ಅಭಿಮಾನಿಗಳ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಮಾಡಲಿದೆ.

ಬೆಂಗಳೂರಿನಲ್ಲಿ ಗುರುವಾರ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನವೆಂಬರ್ 1ರಂದು ಸಂಜೆ 4ಗಂಟೆಗೆ ವಿಧಾನಸೌಧ ಮುಂಭಾಗ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನೆಚ್ಚಿನ ನಟ ಪುನೀತ್ ಸ್ಮರಣಾರ್ಥ ಸಮಾರಂಭದಲ್ಲಿ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಿಸಲಾಗಿತ್ತು. ಅದರಂತೆ ರಾಜ್ಯೋತ್ಸವದಂದು ನೀಡಲಾಗುತ್ತಿದೆ ಎಂದು ವಿವರಿಸಿದರು.

English summary
Actor Rajinikanth and Junior NTR will come to Karnataka as Chief Guest of Karnataka Ratna Award Function on Nov 1st. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X