• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ನಿಧನ

|
Google Oneindia Kannada News

ಬೆಂಗಳೂರು, ಜೂನ್ 15: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇಂದು ಬೆಳಗಿನ ಜಾವ 3.34ಕ್ಕೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.

48 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಪರಿಣಾಮವಾಗಿ ಸಂಚಾರಿ ವಿಜಯ್​ ಮೃತರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ.

''ಮೆದುಳಿನ ಬಲಭಾಗದಲ್ಲಿ ಹೆಚ್ಚು ಹೊಡೆತ ಬಿದ್ದು ತೀವ್ರ ರಕ್ತಸ್ರಾವ ಆಗಿತ್ತು. ಭಾನುವಾರ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಸರ್ಜರಿ ಮಾಡಿದ್ದರು, ಅದಾಗಿ 36 ಗಂಟೆ ಕಳೆದರೂ ಅವರ ಬ್ರೇನ್​ ಕಡೆಯಿಂದ ಪ್ರತಿಕ್ರಿಯೆ ಇರಲಿಲ್ಲ. ಮೆದುಳಿನ ಕೆಲಸಗಳು ನಿಂತು ಹೋಯಿತು. ಇದನ್ನು ಬ್ರೇನ್​ ಡೆಡ್​ ಎನ್ನುತ್ತೇವೆ''ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ವೈದ್ಯರ ಎಲ್ಲ ಪ್ರಯತ್ನಗಳು ವಿಫಲವಾಗಿವೆ.

ಸಂಚಾರಿ ವಿಜಯ್​ ಬ್ರೇನ್ ​ಡೆಡ್​ ಆದ ಬಳಿಕ ಅವರ ಅಂಗಾಂಗ ದಾನಕ್ಕೆ ಕುಟುಂಬದವರು ಸಮ್ಮತಿ ನೀಡಿದರು. ಇಂದು ಮಧ್ಯಾಹ್ನ 1.15ಕ್ಕೆ ವೈದ್ಯರು ಅಂಗಾಂಗ ದಾನದ ಪ್ರೋಟೋಕಾಲ್​ ಪ್ರಕಾರ ಕಾರ್ಯ ನಿರ್ವಹಿಸಿದ್ದಾರೆ ಎಂಬುದು ಹೆಲ್ತ್​ ಬುಲೆಟಿನ್​ ಮೂಲಕ ತಿಳಿದುಬಂದಿದೆ.

 Actor Sanchari Vijay Passes Away Due To Bike Accident; Family To Donate Organs

ಜೂನ್ 12ರಂದು ರಾತ್ರಿ ಅವರಿಗೆ ಅಪಘಾತವಾಗಿತ್ತು,​ ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರ ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

''ಸಂಚಾರಿ ವಿಜಯ್ ಅವರು ನಿಧನರಾದರು ಎಂದು ತಿಳಿಸಲು ವಿಷಾಧಿಸುತ್ತೇವೆ, ಅವರ ನಿಧನಕ್ಕೆ ಇಡೀ ಅಪೊಲೊ ಕುಟುಂಬವು ಸಂತಾಪ ಸೂಚಿಸುತ್ತದೆ''ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

English summary
Kannada actor Sanchari Vijay passed away after sustaining severe injuries in a bike accident on June 12, 2021. The 38-year-old was out with his friend Naveen to buy medicines on a two-wheeler on Saturday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X