Shiva Rajkumar: ಆಸ್ಪತ್ರೆಗೆ ದಾಖಲಾದ ನಟ ಶಿವರಾಜ್ ಕುಮಾರ್!
ಬೆಂಗಳೂರು, ನವೆಂಬರ್ 03: ಕಳೆದ ಕೆಲವು ದಿನಗಳಿಂದಲೂ ಹಿರಿಯ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಶುಕ್ರವಾರ ಜ್ವರ ತುಸು ಹೆಚ್ಚಾದ ಕಾರಣ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ನಗರದ ವೈದೇಹಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇನ್ನೂ ನಟ ಶಿವರಾಜ್ ಕುಮಾರ್ ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದರು, ನಂತರ ಸಂಜೆ ವೇಳೆಗೆ ಜನರಲ್ ಚೆಕಪ್ ಮುಗಿಸಲಾಗಿದೆ, ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದು ಸದ್ಯ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
61 ವರ್ಷವಾದರೂ ಯುವಕನಂತೆ ಇರುವ ಶಿವರಾಜ್ ಕುಮಾರ್ ಕೈಯಲ್ಲಿ ಹತ್ತಾರು ಚಿತ್ರಗಳಿವೆ. ತಮಿಳು ತೆಲುಗು ಭಾಷೆಗಳಲ್ಲಿ ಅವರಿಗೆ ಆಫರ್ ಬರುತ್ತಿವೆ.ಇತ್ತಿಚಿನ ಘೋಸ್ಟ್ ಚಿತ್ರ ಸೂಪರ್ ಹಿಟ್ ಆಗಿದೆ. ಇನ್ನೂ ನಟ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದು ಅಭಿಮಾನಿಗಳು ಭಯಪಡಬೇಕಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಶಿವರಾಜ್ ಕುಮಾರ್ ಸದ್ಯ ಹಲವು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಜೊತೆಗೆ ಕಿರುತೆರೆ ಕಾರ್ಯಕ್ರಮದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಸಖತ್ ಬ್ಯುಸಿಯಾಗಿರುವ ಶಿವಣ್ಣ ಅವರಿಗೆ ಸ್ಪಲ್ವ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇನ್ನೂ ಕೆಲವು ವರ್ಷಗಳ ಹಿಂದೆ ನಟ ಶಿವರಾಜ್ ಕುಮಾರ್ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಪಡೆದು ಕೆಲ ದಿನ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆದಿದ್ದರು.
ಸದ್ಯ ಜೈಲರ್ ಸಿನಿಮಾದ ಚಿಕ್ಕದೊಂದು ಪಾತ್ರ ತಮಿಳುನಾಡಿನಲ್ಲಿಯೂ ಜನಪ್ರಿಯ ನಟರಾಗಿರುವ ಶಿವರಾಜ್ ಕುಮಾರ್ ಅವರು, ಎಂ.ಜಿ. ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿಬಂದಿರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ಘೋಸ್ಟ್'ನಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಾಯಕನಾಗಿ ನಟಿಸಿದ್ದು, ಬಾಕ್ಸಾಫೀಸ್‌ನಲ್ಲಿ ಉತ್ತಮ ಗಳಿಕೆಯನ್ನು ಕಂಡಿದೆ.
ಸದ್ಯ ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್ 'ಮಫ್ತಿ' ನಿರ್ದೇಶಕ ನರ್ತನ್ ಆಕ್ಷನ್ ಕಟ್ ಹೇಳುತ್ತಿರುವ 'ಬೈರತಿ ರಣಗಲ್' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿರುವ ಶಿವಣ್ಣ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ.
ಶಿವರಾಜ್‌ಕುಮಾರ್ ಅವರ ಆರೋಗ್ಯ ದೃಢವಾಗಿದೆ ಎಂದು ಆಸ್ಪತ್ರೆ ವೈದ್ಯರು ಶನಿವಾರ ಮಾಹಿತಿ ನೀಡಿದ್ದಾರೆ.












Click it and Unblock the Notifications