Kichcha Sudeep : ಚುನಾವಣೆ ಹೊತ್ತಲಿ ಕಮಲ ಕೋಟೆಗೆ ಕಿಚ್ಚ ಸುದೀಪ್ ಎಂಟ್ರಿ!? ಕಮಲ ಹಿಡಿಯೋದು ಪಕ್ಕಾ?
ಬೆಂಗಳೂರು,ಮಾರ್ಚ್5: ರಾಜ್ಯ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಚುನಾವಣಾ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿನಿಮಾ ಸ್ಟಾರ್ ಗಳನ್ನು ಪಕ್ಷಗಳತ್ತ ಕರೆತರುವ ನಿಟ್ಟಿಯಲ್ಲಿ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಖ್ಯಾತ ನಟ ಕಿಚ್ಚ ಸುದೀಪ ಇಂದು ಬಿಜೆಪಿ ಪಕ್ಷವನ್ನ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಅನೇಕ ರಾಜಕೀಯ ನಾಯಕರ ಜೊತೆ ನಟ ಕಿಚ್ಚ ಸುದೀಪ್ ಅವರಿಗೆ ಒಡನಾಟ ಹೊಂದಿದ್ದು. ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಸುದೀಪ್ ಅವರನ್ನು ರಾಜಕೀಯ ಪಕ್ಷಕ್ಕೆ ಕರೆತರುವ ಪ್ರಯತ್ನಗಳು ನಡೀತಿದೆ. ನಟ ಕಿಚ್ಚ ಸುದೀಪ್ ನೇರವಾಗಿ ರಾಜಕೀಯಕ್ಕೆ ಧುಮುಕುತ್ತಾರಾ ಅಥವಾ ಮುಂದಿನ 30 ದಿನಗಳ ಕಾಲ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಆಗಿ ಅಖಾಡಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಮೊದಲಿನಿಂದಲೂ ಬಿಜೆಪಿ ನಾಯಕರೊಟ್ಟಿಗೆ ನಿಕಟ ಸಂಪರ್ಕಲ್ಲಿದ್ದ ಸುದೀಪ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇಂದು (ಬುಧವಾರ) ನಡೆಯುವ ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ನಟ ಸುದೀಪ್ ಮಾಹಿತಿ ನೀಡಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ನಟ ಸುದೀಪ್ ಅವರನ್ನ ಪಕ್ಷಕ್ಕೆ ಕರೆತರು ನಿಟ್ಟಿನಲ್ಲಿ ಸಾಕಷ್ಟು ಬಾರಿ ಚರ್ಚೆ ನಡೆದಿವೆ ಎಂದು ಹೇಳಲಾಗಿದೆ. ಅದು ಅಲ್ಲದೇ ಬಿಜೆಪಿ ಘಟಾನುಘಟಿ ನಾಯಕರನ್ನ ಪಕ್ಷದತ್ತ ಸೆಳೆಯಲು ರಣತಂತ್ರ ರೂಪಿಸಿದೆ. ನಟ ಸುದೀಪ್ ಮನವೊಲಿಕೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅಖಾಡಕ್ಕಿಳಿದ್ದಿದ್ದಾರೆ. ಇಬ್ಬರು ನಾಯಕರ ಜೊತೆಗೆ ಕಿಚ್ಚ ಸುದೀಪ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.
ಈ ಕುರಿತು ನಟ ಸುದೀಪ್ ಟಿವಿ9 ಜೊತೆ ಮಾತನಾಡಿ, ನಾನೊಬ್ಬ ಕಲಾವಿದ. ನನ್ನ ಜೊತೆಗೆ ಮಾತುಕತೆಗೆ ಬಂದಿದ್ದರು. ಇಲ್ಲ ಅಂತ ತೇಲಿಸೋಕೆ ಹೋಗಲ್ಲ. ಇತ್ತೀಚೆಗೆ ಪೊಲಿಟಿಕಲ್ ನಾಯಕರಿಗೆ ನಂಬಿಕೆ ಬಂದಿದೆ. ಡಿಕೆ ಶಿವಕುಮಾರ್, ಸುಧಾಕರ್, ಬಸವರಾಜ ಬೊಮ್ಮಾಯಿ, ರಮ್ಯಾ ಅವರು ನನ್ನ ಸ್ನೇಹಿತರು. ನಾನು ಇನ್ನೂ ನಿರ್ಧಾರ ತಗೊಂಡಿಲ್ಲ. ಎರಡೂ ಕಡೆ ಆಪ್ತರು ಇರುವಾಗ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ ಆಗುತ್ತದೆ ಎಂದು ಹೇಳಿದ್ದಾರೆ.

ಎಮೋಶನ್ಸ್ ಇದೆ. ಅದರ ಜೊತೆ ನಮ್ಮ ನಿರ್ಧಾರವನ್ನು ಸೇರಿಸೋಕೆ ಹೋಗಲ್ಲ. ಸುದೀಪ್ ಅವರು ರಾಜಕೀಯಕ್ಕೆ ಬರೋದು ಬೇಡ ಅಂತ ನಮ್ಮ ಜನರ ತಲೆಯಲ್ಲಿ ಇರಬಹುದು. ಒಳ್ಳೆಯದನ್ನು ಮಾಡೋಕೆ ಪವರ್ ಬೇಕಂತಲೇ ಇಲ್ಲ. ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಟಿವಿ 9 ಗೆ ನಟ ಸುದೀಪ್ ಹೇಳಿದ್ದಾರೆ.











Click it and Unblock the Notifications