Actor Kiccha Sudeep Mother: ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಕಿಚ್ಚ ಸುದೀಪ್
Actor Kichha Sudeep Mother Funeral: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (86) ಅವರು ಇಂದು (ಅಕ್ಟೋಬರ್ 20) ಮುಂಜಾನೆ ನಿಧನರಾಗಿದ್ದು, ತಾಯಿ ನೆನೆದಯ ನಟ ಸುದೀಪ್ ಕಣ್ಣೀರಿಟ್ಟಿದ್ದಾರೆ. ಇನ್ನು ವಿದ್ಯುತ್ ಚಿತಾಗಾರದಲ್ಲಿ ಸರೋಜಾ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಚಿತಾಗಾರದ ಹೊರಗೆ ನಟ ಸುದೀಪ್ ಮತ್ತು ಕುಟುಂಬಸ್ಥರು ತಾಯಿ ಸರೋಜಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿದರು. ಈ ವೇಳೆ ನಟ ಸುದೀಪ್ ತಾಯಿ ನೆನೆದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜ ಅವರು ಇಂದು (ಅಕ್ಟೋಬರ್ 20) ನಿಧನರಾಗಿದ್ದು, ಮಧ್ಯಾಹ್ನ ಸುದೀಪ್ ಅವರ ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟ ಸುದೀಪ್ ಅವರ ತಾಯಿ ಸರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು (ಅಕ್ಟೋಬರ್ 20) ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿತ್ತು.
ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿ ಸರೋಜಾ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಇನ್ನು ತಾಯಿಯ ಅನಾರೋಗ್ಯ ಹಿನ್ನೆಲೆ ಸುದೀಪ್ ಅವರು ನಿನ್ನೆ ಬಿಗ್ ಬಾಸ್ ಶೂಟಿಂಗ್ ಅನ್ನು ಬೇಗ ಮುಗಿಸಿ ಹೋಗಿದ್ದಾರೆ. ಆದ್ದರಿಂದ ನಿನ್ನೆಯ ವಾರದ ಪಂಚಾಯ್ತಿ, ಕಡಿಮೆ ಅವಧಿಗೆ ಪ್ರಸಾರ ಆಗಿತ್ತು ಎಂದು ತಿಳಿದುಬಂದಿದೆ.
ಇನ್ನು ಇತ್ತೀಚೆಗಷ್ಟೇ ಬಿಗ್‌ಬಾಸ್ ವೇದಿಕೆಯಲ್ಲೇ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಈ ಸೀಸನ್ನ ಮೊದಲ ವೀಕೆಂಡ್ ಪಂಚಾಯ್ತಿಗೆ ಬಂದಿದ್ದ ಸುದೀಪ್ ಶೇರವಾನಿ ಹಾಕಿಕೊಂಡು ಬರಿಗಾಲಿನಲ್ಲಿ ವೇದಿಕೆ ಮೇಲೆ ಬಂದಿದ್ದರು. ಆಗ ನವರಾತ್ರಿ ಹಿನ್ನೆಲೆ ತಾವು ಹೀಗೆ ಡ್ರೆಸ್ ಮಾಡಿಕೊಂಡು ಬಂದಿದ್ದಾಗಿ ಸುದೀಪ್ ಹೇಳಿದ್ದರು. "ಅಮ್ಮನನ್ನು ನೋಡಿ, ಬರಿಗಾಲಲ್ಲಿ ಬಂದಿದ್ದೀನಿ, ಹಬ್ಬಕ್ಕೆ ತಕ್ಕಂತೆ ಡ್ರೆಸ್ ಮಾಡಿಕೊಂಡಿದ್ದೀನಿ," ಎಂದು ಹೇಳಿದ್ದರು.
ಇನ್ನು ಸುದೀಪ್ ಅವರ ತಾಯಿ ಸರೋಜಾ ಅವರು ಮಂಗಳೂರು ಮೂಲದವರಾಗಿದ್ದಾರೆ. ವಿಕ್ರಾಂತ್ ರೋಣ ವೇಳೆ ಈ ಬಗ್ಗೆ ಮಾತನಾಡಿದ್ದ ಸುದೀಪ್ ಅವರು "ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ತುಂಬಾ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ, ಆದರೆ, ನನಗೆ ಮಾತನಾಡಲು ಬರುವುದಿಲ್ಲ," ಎಂದು ಹೇಳಿದ್ದರು.












Click it and Unblock the Notifications