Cauvery Dispute: ಕಾವೇರಿ ವಿವಾದದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು
ಕರ್ನಾಟಕ ಬರದಲ್ಲಿ ಪರದಾಡುವ ಸಮಯಕ್ಕೆ ತಮಿಳುನಾಡು ಕಾವೇರಿ ನೀರಿಗಾಗಿ ಕಿರಿಕ್ ಶುರು ಮಾಡಿದೆ. ಈಗಾಗಲೇ ರಾಜ್ಯದ ರೈತರು ಈ ಬಗ್ಗೆ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ ಕನ್ನಡದ ಸಿನಿಮಾ ನಟ & ನಟಿಯರು ಕಾವೇರಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂಬ ಕುರಿತು ಆಕ್ರೋಶ ಮೊಳಗಿತ್ತು. ಇದೀಗ ನಟ ಕಿಚ್ಚ ಸುದೀಪ್ ಕಾವೇರಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾವೇರಿ ನದಿ ಭಾಗದಲ್ಲಿ ಈ ಬಾರಿ ತೀವ್ರ ಮಳೆ ಕೊರತೆ ಉಂಟಾಗಿದ್ದು ಕುಡಿಯುವ ನೀರು ಕೂಡ ಸಿಗದ ಪರಿಸ್ಥಿತಿ ಎದುರಾಗಿದೆ. ಮುಂದಿನ ಬೇಸಿಗೆ ಹೊತ್ತಿಗೆ ಕರ್ನಾಟಕದಲ್ಲಿ ಭಾರಿ ನೀರಿನ ಕೊರತೆ ಎದುರಾಗಲಿದೆ. ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು ಮಾತ್ರ ಇದೇ ವಿಚಾರ ಮುಂದಿಟ್ಟುಕೊಂಡು, ನೀರು ಬಿಡಿ ಅಂತಾ ಟಾರ್ಚರ್ ಮಾಡುತ್ತಿದೆ. ಈ ಕುರಿತು ಸಿನಿಮಾ ನಟರು ಧ್ವನಿ ಎತ್ತುತ್ತಿಲ್ಲ ಎಂಬುದು ಆಕ್ರೋಶಕ್ಕೆ ಕಾರಣವಾಗಿತ್ತು. ಇಂದು ಇದೇ ವಿಚಾರವಾಗಿ ನಟ ದರ್ಶನ್ ಟ್ವೀಟ್ ಮಾಡಿದ್ದರು. ಇದೀಗ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಸುದೀಪ್ ಹೇಳಿದ್ದೇನು?
ಕಾವೇರಿ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ನಟ ಕಿಚ್ಚ ಸುದೀಪ್, ಕನ್ನಡಿಗರ ಪರವಾಗಿ ಮಾತನಾಡಿದ್ದಾರೆ. ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಸ್ನೇಹಿತರೆ
— Kichcha Sudeepa (@KicchaSudeep) September 20, 2023
ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ.
ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ.
ಸಿನಿಮಾ ನಟರು ರಾಜಕೀಯ ಕಾರ್ಯಕ್ರಮ ಹಾಗೂ ರಾಜಕಾರಣಿಗಳ ಪರವಾಗಿ ಪ್ರಚಾರಕ್ಕೆ ಮಾತ್ರ ಬರುತ್ತಾರೆ. ಸಿನಿಮಾ ರಿಲೀಸ್ ಆಗುವಾಗ ಬರುವುದನ್ನ ಬಿಟ್ಟರೆ ಕಾವೇರಿ ವಿವಾದದ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಡಾ. ರಾಜ್‌ಕುಮಾರ್ ಅವರು ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಮೊಳಗಿತ್ತು. ಅಲ್ಲದೆ ಕನ್ನಡದ ದೊಡ್ಡ ದೊಡ್ಡ ಸ್ಟಾರ್ ನಟರ ವಿರುದ್ಧ ಜನರು ಪೋಸ್ಟ್ ಹಾಕಿದ್ದರು.
ಒಟ್ನಲ್ಲಿ ಅಂತೂ ಕಾವೇರಿ ವಿವಾದ ಬಗ್ಗೆ ಕನ್ನಡದ ಸ್ಟಾರ್ ನಟರು ಮಾತನಾಡುತ್ತಿದ್ದಾರೆ. ಕನ್ನಡಿಗರಿಗೆ ಈ ವಿಚಾರದಲ್ಲಿ ನ್ಯಾಯ ಸಿಗಬೇಕು ಎಂಬ ಆಗ್ರಹ ಕೇಳಿಬಂದಿದೆ. ಕಾವೇರಿಯ ವಿಚಾರಕ್ಕೆ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಜಿದ್ದು ಜೋರಾಗಿದ್ದು, ಮುಂದೆ ಕನ್ನಡ ಚಿತ್ರರಂಗ ಕೂಡ ಕಾವೇರಿ ಹೋರಾಟಕ್ಕೆ ಕೈಜೋಡಿಸುತ್ತಾ? ಅನ್ನೋದನ್ನ ಕಾದು ನೋಡಬೇಕು.












Click it and Unblock the Notifications