Leelavathi: ನಟಿ ಲೀಲಾವತಿ ನಿಧನಕ್ಕೆ ರಾಜಕೀಯ ಗಣ್ಯರು, ಕಲಾವಿದರ ಸಂತಾಪ
ಬೆಂಗಳೂರು ಡಿಸೆಂಬರ್ 08: ವಯೋಸಹಜ ಕಾಯಿಲೆ ಬಳಲುತ್ತಿದ್ದ ಕನ್ನಡ ಹಿರಿಯ ಕಲಾವಿದೆ ಲೀಲಾವತಿ (Actress Leelavati death) ಅವರು ಇಂದು ಶುಕ್ರವಾರ ನೆಲಮಂಗಲದ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಅಗಲಿಕೆಗೆ ರಾಜಕೀಯ ಗಣ್ಯರು, ಚಿತ್ರರಂಗ ಕಲಾವಿದರು ಕಂಬನಿ ಮಿಡಿದಿದ್ದಾರೆ. ಸಂತಾಪ ವ್ಯಕ್ತಪಡಿಸಿದ್ದಾರೆ.
ಲೀಲಾವತಿ ಅವರು ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.

ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ಅಗಲಿಕೆ ತುಂಬಾ ನೋವಾಗಿದೆ: ಶಿವರಾಜ್ ಕುಮಾರ್
ಅವರ ಅಗಲಿಕೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ನೆಲಮಂಗಲದ ಆಸ್ಪತ್ರೆ ಬಳಿ ನಟ ಶಿವರಾಜ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ''ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು. ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ.

ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜಕುಮಾರ್ ಸೇರಿದಂತೆ ಎಲ್ಲ ದಿಗ್ಗಜ ನಟರೊಂದಿಗೆ ವಿಭಿನ್ನ ಪಾತ್ರಗಳನ್ನು ಮಾಡಿ ಎಲ್ಲರ ಮನೆ ಮಾತಾಗಿದ್ದರು. ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಎಚ್‌ಡಿ ಕುಮಾರಸ್ವಾಮಿ ಸಂತಾಪ
ಕನ್ನಡ ಚಿತ್ರರಂಗದ ಶ್ರೇಷ್ಟ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ ಎಂದಿರುವ ಅವರು; ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಕುಮಾರಸ್ವಾಮಿ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.
— Siddaramaiah (@siddaramaiah) December 8, 2023
ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ… pic.twitter.com/5D9orugWet
ವಿನೋದ್ ರಾಜ್ ಜತೆ ನಿಲ್ಲುತ್ತೇನೆ: ಡಿಕೆಶಿ ಸಂತಾಪ
ಉಪಮುಖ್ಯಮಮತ್ರಿ ಡಿಕೆ ಶಿವಕುಮಾರ್ ಅವರು, ಕನ್ನಡ ಚಿತ್ರರಂಗ ಕಂಡ ಮೇರು ನಟಿಯರಲ್ಲಿ ಲೀಲಾವತಿ ಅವರೂ ಒಬ್ಬರು. ಅವರೊಬ್ಬ ಕಲಾತಪಸ್ವಿ. ತಮ್ಮ ಮನೋಜ್ಞ ಅಭಿನಯದಿಂದ "ಅಮ್ಮ" ಎಂದೇ ಖ್ಯಾತಿ ಪಡೆದಿದ್ದರು. ಕಪ್ಪು ಬಿಳುಪು ಚಿತ್ರದಿಂದ ಆಧುನಿಕ ಚಿತ್ರರಂಗದವರೆಗೂ ಕ್ರಿಯಾಶೀಲರಾಗಿ ಕಲಾಸೇವೆ ಸಲ್ಲಿಸಿದ್ದರು. ನಾಯಕಿಯಾಗಿ, ಪೋಷಕ ನಟಿಯಾಗಿ ಸುಮಾರು 600 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕನ್ನಡ ಸಿನಿರಸಿಕರ ಮನದಲ್ಲಿ ಮನೆಮಾಡಿದ್ದರು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ.
ವೈಯಕ್ತಿಕ ಹಾಗೂ ವೃತ್ತಿ ಬದುಕಿನಲ್ಲೂ ಬಹಳಷ್ಟು ಏಳು ಬೀಳುಗಳನ್ನು ಕಂಡಿದ್ದರು. ಲೀಲಾವತಿ ಅವರು ಇಳಿ ವಯಸ್ಸಿನಲ್ಲೂ ಹೋರಾಟದ ಬದುಕು ನಡೆಸಿದ್ದಾರೆ. ಅವರ ಜೀವನ ಪ್ರೀತಿ, ಉತ್ಸಾಹ, ಪ್ರಾಣಿ ದಯೆ, ಕಲ್ಲು ಮುಳ್ಳುಗಳ ಭೂಮಿಯಲ್ಲಿ ಬೆಳೆ ತೆಗೆದ ರೀತಿ ಸೇರಿದಂತೆ ಅವರ ಪ್ರತಿ ಹೆಜ್ಜೆಯೂ ಬೇರೆಯವರಿಗೆ ಆದರ್ಶವಾಗಿದೆ.
ಇತ್ತೀಚೆಗೆ ಅನಾರೋಗ್ಯದ ನಡುವೆಯೂ ನನ್ನ ಮನೆಗೆ ಬಂದು ಅವರು ಕಟ್ಟಿರುವ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನಿಸಿದ್ದರು. ಅವರ ಇಚ್ಛೆಯಂತೆ ನಾನು ಹೋಗಿ ಆಸ್ಪತ್ರೆ ಉದ್ಘಾಟನೆ ಮಾಡಿ, ಆ ತಾಯಿಯ ಆಶಿರ್ವಾದ ಪಡೆದು ಬಂದಿದ್ದೆ. ಲೀಲಾವತಿ ಅಮ್ಮನವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ನೋವಿನ ಕ್ಷಣದಲ್ಲಿ ನಾವು ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರ ಜತೆ ನಿಲ್ಲುತ್ತೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ
ಲೀಲಾವತಿಯವರು 50 ವರ್ಷಗಳ ಕಾಲ ಕನ್ನಡ ಚಿತ್ರರಂಗಕ್ಕೆ ಸುದೀರ್ಘ ಸೇವೆ ಸಲ್ಲಿಸಿದ್ದ ಲೀಲಾವತಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸದಾಕಾಲ ರೈತರ ಬಗ್ಗೆ ಕಾಳಜಿ ಹೊಂದಿದ್ದರು. ತಮ್ಮದೇ ಹಣದಲ್ಲಿ ಪಶುಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಿಸಿದ್ದಾರೆ ಎಂದು ಸ್ಮರಿಸಿರುವ ಸಚಿವರು, ಅವರ ನಿಧನದ ಸುದ್ದಿ ಕೇಳಿ ನೋವಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಕನ್ನಡನಾಡು ಎಂದೂ ಮರೆಯಲಾಗದ ದಕ್ಷಿಣ ಭಾರತ ಚಿತ್ರರಂಗದ ಮಹಾನ್ ನಟಿ ಲೀಲಾವತಿ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅಪಾರ ದುಃಖವಾಯಿತು. ತಮ್ಮ ಮನೋಜ್ಞ ಅಭಿನಯದ ಮೂಲಕ ಸಂತ ತುಕಾರಾಂ, ಭಕ್ತ ಕುಂಬಾರ, ಸಿಪಾಯಿ ರಾಮು, ವೀರ ಕೇಸರಿ ಸೇರಿದಂತೆ 600 ಕ್ಕೂ ಹೆಚ್ಚು ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಲೀಲಾವತಿ ಅವರು ನೀಡಿದ ಕೊಡುಗೆ ಅಪಾರ.… pic.twitter.com/4uXQ0YduCI
— Vijayendra Yediyurappa (@BYVijayendra) December 8, 2023
ಚಿತ್ರರಂಗಕ್ಕೆ ಕೊಡುಗೆ ಅಪಾರ: ವಿಜಯೇಂದ್ರ
ಕನ್ನಡನಾಡು ಎಂದೂ ಮರೆಯಲಾಗದ ದಕ್ಷಿಣ ಭಾರತ ಚಿತ್ರರಂಗದ ಮಹಾನ್ ನಟಿ ಲೀಲಾವತಿ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅಪಾರ ದುಃಖವಾಯಿತು. ತಮ್ಮ ಮನೋಜ್ಞ ಅಭಿನಯದ ಮೂಲಕ ಸಂತ ತುಕಾರಾಂ, ಭಕ್ತ ಕುಂಬಾರ, ಸಿಪಾಯಿ ರಾಮು, ವೀರ ಕೇಸರಿ ಸೇರಿದಂತೆ 600 ಕ್ಕೂ ಹೆಚ್ಚು ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಲೀಲಾವತಿ ಅವರು ನೀಡಿದ ಕೊಡುಗೆ ಅಪಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಕಲಾ ಸೇವೆಯ ಜತೆ ಜತೆಗೆ ಅವರಿಗಿದ್ದ ಸಾಮಾಜಿಕ ಕಳಕಳಿ, ಬಡವರ ಪರವಾಗಿದ್ದ ಧೀಮಂತಿಕೆಯಿಂದ ಅವರು ಭೌತಿಕವಾಗಿ ಇಲ್ಲದಿದ್ದರೂ, ಎಂದೆಂದಿಗೂ ಕನ್ನಡ ನಾಡಿನ ಸಿನಿ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ. ಅವರ ಸುಪುತ್ರ ವಿನೋದ್ ರಾಜ್ ಹಾಗೂ ಅಭಿಮಾನಿ ವರ್ಗಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ. ಲೀಲಾವತಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು ಪ್ರಾರ್ಥಿಸುವೆ ಎಂದರು.
ನಿಧನ ಸುದ್ದಿ ಆಘಾತ ತಂದಿದೆ: ಸುಮಲತಾ
ಕನ್ನಡದ ಹೆಸರಾಂತ ಹಿರಿಯ ನಟಿ ಡಾ.ಲೀಲಾವತಿ ಅವರ ನಿಧನದ ಸುದ್ದಿ ತೀವ್ರ ಆಘಾತ ತಂದಿದೆ. ದಕ್ಷಿಣದ ಸಿನಿಮಾ ರಂಗಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಆರನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೀಲಾವತಿ ಅವರು ನಾನಾ ಭಾಷೆಗಳಲ್ಲಿ ನಟಿಸುವ ಮೂಲಕ ದಕ್ಷಿಣ ಯಶಸ್ವಿ ನಟಿಯಾಗಿದ್ದರು. ಅವರೊಂದಿಗೆ ನನಗೂ ಕಥಾನಾಯಕ ಸಿನಿಮಾದಲ್ಲಿ ಪಾತ್ರ ಮಾಡಲು ಅವಕಾಶ ಸಿಕ್ಕಿತ್ತು. ಅಗಲಿಕೆ ನೋವನ್ನು ಭರಿಸುವಂತಹ ಶಕ್ತಿಯನ್ನು ಲೀಲಾವತಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಚಿವ ಶರಣ್ ಪ್ರಕಾಶ್ ಪಾಟೀಲ್ ಕಂಬನಿ
ಅನಾರೋಗ್ಯದಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಹೆಸರಾಂತ ಚಿತ್ರ ನಟಿ ಲೀಲಾವತಿ ಅವರ ನಿಧನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಆರ್ ಪಾಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು ೬೦೦ ಚಿತ್ರಗಳಲ್ಲಿ ನಟಿಸಿದ್ದ ಅವರ ನಿಧನದಿಂದ ಕನ್ನಡ ಮಾತ್ರವಲ್ಲದೆ, ಭಾರತದ ಚಿತ್ರರಂಗಕ್ಕೂ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ. ಹಿರಿಯ ನಟಿಯನ್ನು ಉಳಿಸಿಕೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದವತಿಯಿಂದಲೇ ಚಿಕಿತ್ಸೆ ಕೊಡಿಸುವುದಾಗಿ ಹೇಳಿದ್ದರು. ಆದರೆ, ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಈಡೇರಲಿಲ್ಲ ಎಂದು ವಿಷಾದಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications