Actress Priyanka Upendra: ಹೆಣ್ಮಕ್ಕಳ ಮೇಲಿನ ಶೋಷಣೆ ಬಗ್ಗೆ ನಟಿ ಪ್ರಿಯಾಂಕಾ ಉಪೇಂದ್ರ ಖಡಕ್ ಮಾತು
ಬೆಂಗಳೂರು, ಅಕ್ಟೋಬರ್ 22: ರಾಜ್ಯದಲ್ಲಿ ಕೆಲವೆಡೆ ಮಹಿಳೆಯ ಮೇಲಿನ ದೌರ್ಜನ್ಯ ನಡೆಯುತ್ತಲೇ ಇವೆ. ಸಮಾಜದಲ್ಲಿ ನಡೆಯುತ್ತಿರುವ ಆಗು ಹೋಗುಗಳ ಬಗ್ಗೆ ಸೆಲೆಬ್ರೆಟಿಗಳು ಆಗಾಗ ಧ್ವನಿ ಎತ್ತುತ್ತಾರೆ. ಅದೇ ರೀತಿ ಇಂದು ನಟಿ ಪ್ರಿಯಾಂಕಾ ಉಪೇಂದ್ರ ಅವರು ಹೆಣ್ಣುಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯದ ಕುರಿತು ಮಾನತಾಡಿದ್ದಾರೆ. ಹೆಣ್ಣು ಮಕ್ಕಳ ಸ್ಥಾನಮಾನದ ರಕ್ಷಣೆಯೂ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ (ಅಕ್ಟೋಬರ್ 22) ನಟಿ ಪ್ರಿಯಾಂಕ ಉಪೇಂದ್ರ ಅವರು, ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ ಹಾಗೂ ಕ್ರೀಡಾಕೂಟ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಜಗತ್ತು ಶರವೇಗದಲ್ಲಿ ಬೆಳವಣಿಗೆಯಾಗುತ್ತಿದೆ. ಇದೇ ರೀತಿ ಹೆಣ್ಣು ಮಕ್ಕಳ ಸ್ಥಾನಮಾನದ ರಕ್ಷಣೆಯೂ ಅಗತ್ಯದೆಡೆಗೆ ಹೆಚ್ಚಿನ ಗಮನ ಹರಿಸಬೇಕು. ಹೆಣ್ಣು ಮಕ್ಕಳನ್ನು ಶೋಷಣೆ ಮಾಡುವವರ ವಿರುದ್ಧ ಸಮಾಜ ಒಟ್ಟಾಗಿ ನಿಲ್ಲಬೇಕು ಅಂದಾಗ ಇದಕ್ಕೆಲ್ಲ ಕಡಿವಾಣ ಹಾಕಬಹುದು ಎಂದು ನಟಿ ಪ್ರಿಯಾಂಕಾ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಮಾತನಾಡಿ, ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದು ಮೊದಲ ಆದ್ಯತೆಯಾಗಿದೆ. ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿ ಸಮುದಾಯ ಹೋರಾಟಕ್ಕೆ ಅಣಿಯಾಗಬೇಕು ಎಂದು ಅವರು ಕರೆ ನೀಡಿದರು.
ರಂಗಕರ್ಮಿ, ನಟಿ ರೋಹಿಣಿ ರಘುನಂದನ್, ಎ.ಪಿ.ಎಸ್ ವಿಶ್ವಸ್ಥ ಸಂಸ್ಥೆಯ ಅಧ್ಯಕ್ಷರಾದ ಸಿಎ.ಡಾ.ವಿಷ್ಣುಭರತ್ ಆಲ್ಲಂಪಲ್ಲಿ, ಸಂಸ್ಥೆಯ ಪದಾಧಿಕಾರಿಗಳಾದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

UI Film: ಉಪೇಂದ್ರ ಯುಐ ಸಿನಿಮಾದಲ್ಲಿ ಬ್ಯೂಸಿ
ಸಾಮಾನ್ಯವಾಗಿ ನಟಿ ಪ್ರಿಯಾಂಕಾ ಉಪೇಂದ್ರ ಹೊರಗೆ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ. ಯಾವ ಗಾಸಿಪ್‌ಗೂ ಒಳಗಾಗದೇ ತಾವು, ನಟನೆ, ಕುಟುಂಬ ಎಂದು ನಟಿಯಾಗಿ, ಪತ್ನಿಯಾಗಿ, ತಾಯಿಯಾಗಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಅವರು ಇಂದು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ.
ನಟಿ ಪ್ರಿಯಾಂಕಾ ಉಪೇಂದ್ರ ಅವರು ಪತಿ ನಟ, ನಿರ್ದೇಶಕ ಉಪೇಂದ್ರ ಅವರಿಗೆ ಸದಾ ಬೆಂಬಲವಾಗಿ ನಿಲ್ಲುತ್ತಾರೆ. ಸದ್ಯ ಉಪೇಂದ್ರ ಅವರು UI ಸಿನಿಮಾದಲ್ಲಿ ಬ್ಯೂಸಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಒಂದೊಂದೆ ಹಾಡುಗಳು, ಸ್ಟಿಲ್, ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವು ಇದೇ ವರ್ಷ ಡಿಸೆಂಬರ್ 20ರಂದು ಬಿಡುಗಡೆ ಆಗಲಿದೆ. ನವೆಂಬರ್ ಮಧ್ಯಭಾಗದಿಂದ ಚಿತ್ರತಂಡ ಪ್ರಚಾರ ಕಾರ್ಯ ಆರಂಭಿಸುವ ಸಾಧ್ಯತೆ ಇದೆ.












Click it and Unblock the Notifications