ಡಿ.ಕೆ ಶಿವಕುಮಾರ್ ನಟ್-ಬೋಲ್ಟ್ ಹೇಳಿಕೆ ತಪ್ಪಾದರೂ ಉದ್ದೇಶ..

ಬೆಂಗಳೂರು, ಮಾರ್ಚ್ 06: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆಯೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಕಲಾವಿದರು ಹಾಗೂ ವಿರೋಧ ಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಮೋಹಕ ತಾರೆ ನಟಿ ನಟಿ ರಮ್ಯಾ, ಚಿತ್ರರಂಗದ ಕಲಾವಿದರ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 'ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಹೇಳಿರುವುದು ತಪ್ಪು. ಆದರೆ ಅವರು ತಾವು ಹೇಳಿರುವುದು ಆ ಉದ್ದೇಶದಿಂದಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಪ್ರಕಾರ ಡಿಸಿಎಂ ಡಿ.ಕೆ ಶಿವಕುಮಾರ್‌ ಸರ್‌ ಅವರು ಆ ರೀತಿ ಹೇಳಿರಬಹುದು. ಆದರೆ ಅವರು ಹಾಗೆ ಮಾಡುವುದಿಲ್ಲ. ಅವರು ಆ ರೀತಿ ಹೇಳಿರಬಹುದು ಆದರೆ ಅವರು ಹೇಳಿರುವ ಅರ್ಥ ಅದಲ್ಲ ಅಂತಾ ನನಗೆ ಅನಿಸುತ್ತದೆ' ಎಂದು ನಟಿ ರಮ್ಯಾ ಹೇಳಿದ್ದಾರೆ.

Actress Ramya Response about D K Shivakumar Controversial Statement

ಇನ್ನು ಈ ಹಿಂದೆ ಕೂಡ ಈ ಬಗ್ಗೆ ಮಾತನಾಡಿದ್ದ ನಟಿ ರಮ್ಯಾ, 'ಡಿಸಿಎಂ ಡಿ.ಕೆ ಶಿವಕುಮಾರ್ ಸರ್‌ ಅವರು ಹೇಳಿದ್ದರಲ್ಲಿ ತಪ್ಪೇನು ಇಲ್ಲ. ನಟ - ನಟಿಯರಿಗೆ ಅವರದ್ದೇ ಆದ ಜವಾಬ್ದಾರಿ ಇರುತ್ತದೆ. ಕಲಾವಿದರು ನಾಡಿನ ನೆಲ, ಜಲ ಹಾಗೂ ಭಾಷೆಯ ಪರವಾಗಿ ಹೋರಾಟ ಮಾಡಬೇಕು ಎಂದು ರಮ್ಯಾ ಹೇಳಿದ್ದಾರೆ. ಸಿನಿಮಾ ಹಾಗೂ ಪಾಲಿಟಿಕ್ಸ್‌ ನಡುವಿನ ಬೆಂಬಲ ಈ ಹಿಂದೆಯಂತೆ ಈಗ ಕಾಣಿಸುತ್ತಿಲ್ಲ. ಆ ರೀತಿಯ ಬೆಂಬಲ ಅವಶ್ಯವಿದೆ' ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಕಲಾವಿದರ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಂತೆ ನಟಿ ರಮ್ಯಾ ವಿರುದ್ಧವೂ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹೇಳಿಕೆಯನ್ನು ಪರಾಮರ್ಶಿಸಿರುವ ರಮ್ಯಾ, ಡಿ.ಕೆ ಶಿವಕುಮಾರ್‌ ಅವರು ಹೇಳಿರುವುದು ತಪ್ಪು. ಆದರೆ ಅವರು ಹೇಳಿರುವ ಉದ್ದೇಶ ಬೇರೆ ಎಂದು ಹೇಳಿದ್ದಾರೆ.

Actress Ramya Response about D K Shivakumar Controversial Statement

ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್‌, ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಸಿಟ್ಟಿದೆ. ಕೆಲಸ ಇದ್ದಾಗ ನಮ್ಮ ಬಳಿ ಬರುತ್ತಾರೆ. ನಂತರ ಬಳಸಿ ಬಿಸಾಡುತ್ತಾರೆ. ಮೇಕೆದಾಟು ಪಾದಯಾತ್ರೆಗೆ ಚಿತ್ರರಂಗದ ಕೆಲವರು ಮಾತ್ರ ಬಂದರು. ಬಹುತೇಕರು ಬರಲೇ ಇಲ್ಲ. ಈ ರೀತಿ ಮಾಡುವವರ ನಟ್, ಬೋಲ್ಟ್ ಟೈಟ್ ಮಾಡುವುದು ಹೇಗೆಂಬುದು ನನಗೆ ಗೊತ್ತು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+