ನಟ ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ; ಸುಮಲತಾ ಶಾಕಿಂಗ್ ಹೇಳಿಕೆ
ಬೆಂಗಳೂರು, ಆಗಸ್ಟ್ 27: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿರುವ ಸುಮಲತಾ, ಇದು ಕೇವಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾತ್ರ ನಡೆಯುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಜೈಲುಗಳಲ್ಲಿ ನಡೆಯುತ್ತಿರುವುದು ಇದೇ ಎಂದಿದ್ದಾರೆ.
ಮಾಧ್ಯಮಗಳು ಪ್ರತಿ ಜೈಲಿಗೂ ಹೋಗಿ ಈ ವಿಚಾರಗಳನ್ನು ಬಯಲಿಗೆ ತನ್ನಿ ಎಂದು ಹೇಳಿದ್ದಾರೆ. ಕೇವಲ ಕರ್ನಾಟಕವಲ್ಲ, ಇಡೀ ದೇಶದಲ್ಲಿ, ಯಾಕೆ ಪ್ರಪಂಚದ ಯಾವ ಜೈಲಿಗೆ ಹೋದರೂ ಅಲ್ಲಿ ಕೈದಿಗಳಿಗೆ ಮೊಬೈಲ್, ಡ್ರಗ್ಸ್, ಸಿಗರೇಟ್ ಸೇರಿದಂತೆ ಎಲ್ಲವೂ ಸಿಗುತ್ತದೆ. ಹಾಗಂತ ಇದು ಒಳ್ಳೆಯದು ಎಂದು ನಾನು ಹೇಳುತ್ತಿಲ್ಲ. ಇದು ಕೂಡ ಭ್ರಷ್ಟಾಚಾರ, ಕಾನೂನಿಗೆ ವಿರುದ್ಧವಾದದ್ದು. ಇದು ಇಡೀ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ. ಆದರೆ, ಒಂದು ವ್ಯಕ್ತಿಯನ್ನು ಮಾತ್ರ ಈ ವಿಚಾರದಲ್ಲಿ ಹೈಲೈಟ್ ಮಾಡುತ್ತಿರುವುದು ಸರಿಯಲ್ಲ ಎಂದು ನಟ ದರ್ಶನ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಜೈಲಿನಲ್ಲಿ ನಡೆದಿರುವುದು ಸರಿ ಎಂದು ನಾನೂ ಹೇಳಲ್ಲ. ಇದೇ ಕಾರಣಕ್ಕೆ ಅಧಿಕಾರಿಗಳನ್ನು ಸಸ್ಪೆಂಡ್ ಕೂಡ ಮಾಡಿದ್ದಾರಲ್ಲ? ಜೈಲಿನಲ್ಲಿ ಈ ರೀತಿಯ ವ್ಯವಸ್ಥೆಗಳಿಗೆ ಕ್ರಮ ತೆಗೆದುಕೊಳ್ಳಲೇಬೇಕಾಗಿತ್ತು. ಆ ಕೆಲಸ ನಡೆದಿದೆ ಎಂದೂ ಸುಮಲತಾ ಹೇಳಿದ್ದಾರೆ. ಜೈಲಿನಲ್ಲಿ ಹಣ ಕೊಟ್ಟರೆ ಎಲ್ಲ ವ್ಯವಸ್ಥೆ ಸಿಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಹಿಂದೆ ಜೈಲಿನ ಮುಖ್ಯಾಧಿಕಾರಿಯಾಗಿದ್ದ ರೂಪಾ ಅವರೂ ಈ ವಿಚಾರದ ಬಗ್ಗೆ ಧ್ವನಿ ಎತ್ತಿದ್ದರು. ಆಗ ಈ ವಿಚಾರ ದೊಡ್ಡ ಸುದ್ದಿಯಾಗಲಿಲ್ಲ. ಈಗ ದರ್ಶನ್ ವಿಚಾರವಾಗಿ ಇದನ್ನೇ ಹೈಪ್ ಮಾಡಲಾಗುತ್ತಿದೆ.
ಜೈಲಲ್ಲಿ ಜೊತೆಗೆ ಸಿಗೋದೇ ಕ್ರಿಮಿನಲ್‌ಗಳು: ಫೋಟೋದಲ್ಲಿ ದರ್ಶನ್ ಕುಖ್ಯಾತ ರೌಡಿಗಳೊಂದಿಗೆ ಕುಳಿತು ಸಿಗರೇಟ್ ಸೇದುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಜೈಲಲ್ಲಿ ಯಾರಪ್ಪಾ ಇರ್ತಾರೆ? ಜೈಲಿನಲ್ಲಿ ಇರೋದೇ ಕ್ರಿಮಿನಲ್‌ಗಳು. ಅಲ್ಲಿ ಇನ್ಯಾರು ಸಿಗುತ್ತಾರೆ? ಅಲ್ಲಿ ಜೊತೆಯಲ್ಲಿ ಸಿಕ್ಕವರ ಜೊತೆ ಮಾತನಾಡದೆ ಇನ್ಯಾರ ಜೊತೆಗೆ ಮಾತನಾಡಲು ಸಾಧ್ಯ? ಎಂದು ನಟ ದರ್ಶನ್ ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಿರಾ? ಎಂದು ಕೇಳಿದ್ದಕ್ಕೆ, ಇದು ನಮ್ಮ ಪರ್ಸನಲ್ ವಿಚಾರ. ಇದನ್ನು ಎಲ್ಲರ ಮುಂದೆ ಮಾತನಾಡಲು ಸಾಧ್ಯವಿಲ್ಲ ಎಂದು ಉತ್ತರಿಸಿದ್ದಾರೆ.

ನಟ ದರ್ಶನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಕುಟುಂಬದ ಜೊತೆ ತುಂಬಾ ಒಡನಾಟವಿತ್ತು. ದರ್ಶನ್ ಅವರು ಸುಮಲತಾ ಅವರನ್ನು ಮದರ್ ಇಂಡಿಯಾ ಎಂದು ಕರೆಯುತ್ತಿದ್ದರು. ಸುಮಲತಾ ಕೂಡ ದರ್ಶನ್ ಅವರನ್ನು ತನ್ನ ಮಗ ಎಂದು ಹೇಳಿಕೊಳ್ಳುತ್ತಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಜೈಲು ಸೇರಿದ ಮೇಲೆ ಸುಮಲತಾ ಪುತ್ರ ನಟ ಅಭಿಷೇಕ್ ಅಂಬರೀಷ್ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ದರ್ಶನ್‌ರನ್ನ ಭೇಟಿಯಾಗಿ ಬಂದಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications