ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿ ದಾಖಲಾತಿ, ಅರ್ಹತೆಗಳು

ಬೆಂಗಳೂರು, ಜನವರಿ 18: ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರ ಕಛೇರಿ 2024-25ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ದಾಖಲಾತಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ದಿನಾಂಕ 11/01/2024ರಂದು ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಲ್ಲಿ 2024-25ನೇ ಸಾಲಿನ ಅದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆದ ಪೂರ್ವಭಾವಿ ಸಭೆಯ ನಡಾವಳಿಗಳನ್ನು ಉಲ್ಲೇಖಿಸಿ ಈ ಸುತ್ತೋಲೆ ಹೊರಡಿಸಲಾಗಿದೆ.

Adarsha Vidyalaya Admission For 2024 Circular

ಸುತ್ತೋಲೆಯಲ್ಲಿ 2024-25ನೇ ಸಾಲಿನ ಪ್ರತಿ ಆದರ್ಶ ವಿದ್ಯಾಲಯದ 6ನೇ ತರಗತಿಗೆ 120 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಆಯ್ಕೆ ಪರೀಕ್ಷೆ ನಡೆಸಬೇಕಾಗಿರುತ್ತದೆ. ಈ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಜಂಟಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದೆ.

ಆಯ್ಕೆ ಪರೀಕ್ಷೆಯನ್ನು ನಡೆಸಲು ಜಿಲ್ಲಾ ಉಪ ನಿರ್ದೇಶಕರು (ಆಡಳಿತ), ಉಪ ನಿರ್ದೇಶಕರು ಅಭಿವೃದ್ಧಿ), ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಐದನೆಯ ತರಗತಿಗಳು ನಡೆಯುತ್ತಿರುವ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮವಹಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

ಪ್ರಸಕ್ತ ಸಾಲಿನ ಪರೀಕ್ಷಾ ನೋಂದಣಿ ಬಗ್ಗೆ ಸ್ಥಳೀಯವಾಗಿ ಸಾಕಷ್ಟು ಪ್ರಚಾರ ನೀಡಲು ತಿಳಿಸಿದೆ ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳುವುದು, ದಾಖಲಾತಿ ಪ್ರಕ್ರಿಯೆಯನ್ನು online ಮೂಲಕ ನಡೆಸುತ್ತಿರುವುದರಿಂದ, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಮಾರ್ಗಸೂಚಿ/ ಸುತ್ತೋಲೆಯನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಿ, ಸೂಚನೆಗಳನ್ನು ಅನುಸರಿಸಿ ನಿರ್ವಹಿಸುವುದರೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು

* 2023-24ನೇ ಸಾಲಿನಲ್ಲಿ ಆಯಾ ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 5ನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅದೇ ತಾಲ್ಲೂಕಿನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

* ಆಯಾ ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು/ ಜಿಲ್ಲೆ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಗೆ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಮೂಲ ತಾಲ್ಲೂಕಿನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

* ಆಯ್ಕೆ ಪರೀಕ್ಷೆಗೆ 5ನೇ ತರಗತಿಯ ಪಠ್ಯ ಪುಸ್ತಕ, ಕಲಿಕಾ ಚೇತರಿಕೆ ಕಲಿಕಾಂಶಗಳನ್ನು ಆಧರಿಸಿ ಕನ್ನಡ (16%), ಆಂಗ್ಲಭಾಷೆ (16%), ಗಣಿತ (16%), ಪರಿಸರ ಅಧ್ಯಯನ (16%), ಸಮಾಜ ವಿಜ್ಞಾನ (16%), ಸಾಮಾನ್ಯ ಜ್ಞಾನ (ಜನರಲ್ ನಾಲೆಡ್ಜ್ (10%) ಮತ್ತು ಸಾಮಾನ್ಯ ಬೌದ್ಧಿಕ ಸಾಮರ್ಥ್ಯ (10%) ಇವುಗಳನ್ನು ಪರಿಗಣಿಸಲಾಗುವುದು. ಪತ್ರಿಕೆಯು ವಸ್ತುನಿಷ್ಟ (objective type) ಪ್ರಶ್ನೆಗಳನ್ನು ಹೊಂದಿದ್ದು, ಆಂಗ್ಲ ಮತ್ತು ಕನ್ನಡ ಮಾಧ್ಯಮಗಳಲ್ಲಿರುತ್ತವೆ. ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ ತಲಾ 1 ಅಂಕದಂತೆ ಇದ್ದು, 100 ಪ್ರಶ್ನೆಗಳಿರುತ್ತವೆ.

* ಪರೀಕ್ಷೆಯು 3/3/2024ರಂದು ನಡೆಯಲಿದೆ. ಪರೀಕ್ಷೆಯ ಅವಧಿ 2 ಗಂಟೆ 30 ನಿಮಿಷಗಳು, ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 10 ನಿಮಿಷಗಳು ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿನ ಕೊಠಡಿಗಳಲ್ಲಿ ಹಾಜರಿರಬೇಕು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು/ ಪೋಷಕರು 17/01/2024 ರಿಂದ www.schooleducation.karnataka.gov.in ಮತ್ತು www.vidyavahini.karnataka.gov.in ವೆಬ್ ಸೈಟ್‌ಗೆ ಭೇಟಿ ನೀಡಬಹುದು.

* ಆಯಾ ತಾಲ್ಲೂಕಿನ ಖಾಯಂ ನಿವಾಸಿಗಳ ಮಕ್ಕಳು ಹೊರ ರಾಜ್ಯ / ಜಿಲ್ಲೆ/ ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ವ್ಯಾಸಂಗ ಮತ್ತು ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರಗಳನ್ನು ಪಡೆದು online ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು upload ಮಾಡುವುದು ಕಡ್ಡಾಯಗೊಳಿಸಲಾಗಿದೆ.

ಇದಕ್ಕೆ ಪೂರಕವಾಗಿ ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆ ದಾಖಲಾಗುವ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ವ್ಯಾಸಂಗ ಮತ್ತು ವಾಸಸ್ಥಳ ದೃಢೀಕರಣದ ಮೂಲ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ವಿಶೇಷ ಚೇತನ ಮಕ್ಕಳು ಮೀಸಲಾತಿಯನ್ನು ಪಡೆಯಲು ಸಕ್ಷಮ ಪ್ರಾಧಿಕಾರಗಳಿಂದ ಪಡೆದಿರುವ ಪ್ರಮಾಣಪತ್ರವನ್ನು online ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಳವಡಿಸುವುದನ್ನು (upload) ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಯು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಶಾಲೆಗೆ ದಾಖಲಾಗುವ ಸಂದರ್ಭದಲ್ಲಿ ಪ್ರಮಾಣಪತ್ರದ ಮೂಲ ಪ್ರತಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ಅಗತ್ಯವಾದ ಸೂಚನೆಗಳನ್ನು www.vidyavahini.karnataka.gov.in ರಲ್ಲಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+