ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ತರಗತಿ ಪ್ರಾರಂಭಿಸಲು ಅನುಮತಿ
ಬೆಂಗಳೂರು, ಸೆಪ್ಟೆಂಬರ್ 07: ಶಾಲಾ ಶಿಕ್ಷಣ ಇಲಾಖೆ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಆಂಗ್ಲ ದ್ವಿಭಾಷಾ (Bilingual) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವ ಕುರಿತು ಜ್ಞಾಪನಾ ಪತ್ರವನ್ನು ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ. ಬಿ. ಕಾವೇರಿ ಆದೇಶವನ್ನು ಹೊರಡಿಸಿದ್ದಾರೆ. ಪ್ರಸ್ತಾವನೆ ಮತ್ತು ಆದೇಶದ ವಿವರಗಳನ್ನು ಉಲ್ಲೇಖಿಸಿದ್ದಾರೆ.
ಈ ಜ್ಞಾಪನಾ ಪತ್ರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ದ್ವಿಭಾಷಾ (Bilingual) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಆದೇಶ 15/06/2024 ಸೇರಿ ವಿವಿಧ ಆದೇಶ ಉಲ್ಲೇಖಿಸಲಾಗಿದೆ.

ಜ್ಞಾಪನಾ ಪತ್ರದ ವಿವರ: ವಿಷಯದ ಅನ್ವಯ ರಾಜ್ಯದ ಮುಖ್ಯ ಮಂತ್ರಿಗಳು 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದಲ್ಲಿ ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲಾಗಿದೆ.
ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ (ದ್ವಿಭಾಷಾ) ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.
ಅದರಂತೆ ಸರ್ಕಾರವು 2024-25ನೇ ಸಾಲಿನಿಂದ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಷರತ್ತುಗಳಿಗೊಳಪಟ್ಟು ಅನುಮತಿಸಿ ಆದೇಶಿಸಿದೆ.
ಷರತ್ತುಗಳೇನು?; ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿತ್ತು.
2024-25ನೇ ಸಾಲಿನ (ಫೆಬ್ರವರಿ) ಬಜೆಟ್‌ನಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಅದರಂತೆ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ಬಳಸಿಕೊಂಡು ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿಸಲಾಗಿತ್ತು.
ಪ್ರಸ್ತುತ 1ನೇ ತರಗತಿಯಲ್ಲಿ 16 ಮಕ್ಕಳಿಗಿಂತ ಹೆಚ್ಚಿರುವ ಹಾಗೂ ಒಟ್ಟಾರೆ ದಾಖಲಾತಿ 100 ಇರುವ ಮಾನದಂಡ ಅನುಸರಿಸಿ ಒಟ್ಟು 373 ಶಾಲೆಗಳನ್ನು 2ನೇ ಹಂತದಲ್ಲಿ ಆಯ್ಕೆ ಮಾಡಲಾಗಿದ್ದು, ಸದರಿ 373 ಶಾಲೆಗಳಿಗೆ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಯಾವುದೇ ಆರ್ಥಿಕ ಹೊರೆ ಇಲ್ಲದಂತೆ ಷರತ್ತು ಬದ್ಧವಾಗಿ ಪ್ರಾರಂಭಿಸಲು ಸರ್ಕಾರದ ಅನುಮೋದನೆ ಕೋರಲಾಗಿತ್ತು. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕುರಿತು ಆದೇಶಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರ ಷರತ್ತುಗಳಿಗೊಳಪಟ್ಟು ಅನುಮತಿಕೊಟ್ಟಿದೆ.
-
CBSE 10ನೇ ತರಗತಿ ಫಲಿತಾಂಶ 2026 ಪ್ರಕಟ: ನಿಮ್ಮ ಅಂಕಗಳನ್ನು ಕ್ಷಣಾರ್ಧದಲ್ಲಿ ಇಲ್ಲಿ ಚೆಕ್ ಮಾಡಿ -
CBSE 10th Results 2026: ಹತ್ತನೇ ತರಗತಿ ನಂತರ ನಿಮ್ಮ ಆಯ್ಕೆ ಏನಾಗಿರಬೇಕು? ಮುಂದಿನ ಹಾದಿ ಹೀಗಿರಲಿ -
CBSE ಹೊಸ ನಿಯಮ: ಮುಖ್ಯ ವಿಷಯದಲ್ಲಿ ಫೇಲ್ ಆದರೂ ಪಾಸ್ ಅವಕಾಶ, CBSE ರಿಸಲ್ಟ್ ನೋಡುವುದು ಹೇಗೆ -
Central Board of Secondary Education: 10ನೇ ತರಗತಿ ಎರಡು ಪರೀಕ್ಷೆ ವ್ಯವಸ್ಥೆ: ಅವಕಾಶವೇ ಅಥವಾ ಹೆಚ್ಚುವರಿ ಒತ್ತಡವೇ -
ನಿಮ್ಮ ಮನೆಯ ಸಮೀಪ ಸರ್ಕಾರಿ ಪಿಯು ಕಾಲೇಜು ಎಲ್ಲಿದೆ ಗೊತ್ತೇ? ಅವರಿವರನ್ನು ಕೇಳಿ ದಿಕ್ಕುತಪ್ಪಬೇಡಿ, ಇಲ್ಲಿದೆ ಮಾಹಿತಿ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ರಾಜ್ಯದಲ್ಲಿ ಮೇ 29ರಿಂದಲೇ 2026-27ನೇ ಹೊಸ ಶೈಕ್ಷಣಿಕ ವರ್ಷ ಆರಂಭ, ಈ ಬಾರಿ ದಸರಾಗೆ ಬರೋಬ್ಬರಿ 19 ದಿನ ರಜೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications