ರೈತರಿಗೆ 8,500 ರೂ. ಹೆಚ್ಚುವರಿ ಬೆಳೆನಷ್ಟ ಪರಿಹಾರ : ಸಿದ್ದರಾಮಯ್ಯ ಘೋಷಣೆ
ಕಲಬುರಗಿ, ಅಕ್ಟೋಬರ್ 01: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22,500 ರೂ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗುತ್ತದೆ ಎಂದು ಹೇಳಿದರು.
NDRF ಹಣದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್ ಗೆ 8500 ರೂ ಪರಿಹಾರ ಕೊಡಲಿದೆ. ಇದರಿಂದಾಗಿ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ+8500 ರೂ ಸೇರಿ ಒಟ್ಟು 17000 ಆಗ್ತದೆ, ನೀರಾವರಿ ಜಮೀನಿಗೆ 17000+8500 ಸೇರಿ ಒಟ್ಟು 25500 ರೂ ಆಗ್ತದೆ. ಬಹುವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ 22500+8500 ಸೇರಿ ಒಟ್ಟು 31000 ಸಾವಿರ ರೂಪಾಯಿ ಆಗ್ತದೆ. NDRF + ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ 2000-2500 ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡ್ತಾ ಇದೀವಿ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರವಾಹದಿಂದ ಬೆಳೆ ಜೊತೆಗೆ ಮೂಲಭೂತ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿ ಆಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ವೈಮಾನಿಕ ಸಮೀಕ್ಷೆ ಬಳಿಕ ಶಾಸಕರು, ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ ನಾಲ್ಕು ಜಿಲ್ಲೆಗಳ ಪರಿಸ್ಥಿತಿ ಅವಲೋಕಿಸಿದ್ದೇನೆ.ನಾಲ್ಕು ಜಿಲ್ಲೆಗಳಲ್ಲಿ 117 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷ್ಣ ನದಿಯಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವುದು ಹಾಗೂ ನಾಲ್ಕೂ ಜಿಲ್ಲೆಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ನಲ್ಲಿ ವಿಪರೀತ ಮಳೆ ಆಗಿರುವುದೂ ಸೇರಿ ಅನಾಹುತ ಮತ್ತು ಸಂಕಷ್ಟದ ಪ್ರಮಾಣದ ಹೆಚ್ಚಾಗಿದೆ.
ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಈ ಪ್ರಮಾಣ ಇನ್ನೂ ಹೆಚ್ಚು ಆಗಬಹುದು. ಜಂಟಿ ಸಮೀಕ್ಷೆ ಪೂರ್ಣ ಆದ ಬಳಿಕ ಸ್ಪಷ್ಟವಾಗಿ ಗೊತ್ತಾಗುತ್ತದೆ. ಸದ್ಯ 5 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಜಂಟಿ ಸಮೀಕ್ಷೆ ಮುಗಿದಿದೆ. ಸಮೀಕ್ಷೆ ಪೂರ್ಣಗೊಂಡ ತಕ್ಷಣ ಹಣ ಅವರ ಖಾತೆಗಳಿಗೆ ಹಣ ಹೋಗುತ್ತದೆ. ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೀದರ್, ರಾಯಚೂರು, ಗದಗ್, ಕಲಬುರಗಿ, ಧಾರವಾಡ ಸೇರಿ 8 ಜಿಲ್ಲೆಗಳಲ್ಲಿ ಶೇ95 ರಷ್ಟು ಬೆಳೆ ಹಾನಿ ಆಗಿದೆ.
ಕಳೆದ ವರ್ಷ ಶೇ22 ರಷ್ಟು ಮಳೆ ಹೆಚ್ಚಾಗಿದೆ. ಈ ವರ್ಷ ಶೇ26 ರಷ್ಟು ಹೆಚ್ವು ಮಳೆ ಬಿದ್ದು ವಾಡಿಕೆಗಿಂತ ವಿಪರೀತ ಹೆಚ್ಚಿನ ಮಳೆ ಬಿದ್ದಿದೆ. ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸೂಚಿಸಲಾಗಿದೆ. ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ fitness ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು. Fitness ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ಸಹಿಸಲ್ಲ. ರಕ್ಷಣೆ ಮತ್ತು ಪರಿಹಾರದ ಹಣಕ್ಕೆ ಕೊರತೆ ಇಲ್ಲ. PD ಖಾತೆಯಲ್ಲಿ ಹಣ ಸಂಗ್ರಹ ಇದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ 29ರ ವರೆಗೆ ಸರಾಸರಿಯಂತೆ 845 ಮಿಮೀ ಮಳೆಯಾಗಬೇಕಾಗಿತ್ತು. ಆದರೆ 879 ಮಿಮೀ ಮಳೆಯಾಗಿದೆ. ವಾಡಿಕೆಗಿಂತ ಶೇ.4 ರಷ್ಟು ಹೆಚ್ಚಿನ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯವರೆಗೆ 972 ಮಿಮೀ ಮಳೆಯಾಗಿತ್ತು. ಶೇ. 22 ರಷ್ಟು ಹೆಚ್ಚಿನ ಮಳೆಯಾಗಿತ್ತು. ಆದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ವರ್ಷ ಹಿಂದೆಂದೂ ಕಾಣದ ಪ್ರಮಾಣದಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಸರಾಸರಿ ಮಳೆಯಾಗಬೇಕಾಗಿದ್ದದ್ದು 472 ಮಿಮೀಗಳು. ಆದರೆ ಈ ವರ್ಷ 576 ಮಿಮೀಗಳಷ್ಟು ಅಂದರೆ ಶೇ. 22 ರಷ್ಟು ಹೆಚ್ಚಿನ ಮಳೆಯಾಗಿದೆ.












Click it and Unblock the Notifications