Aditya L1: ಆದಿತ್ಯ ಎಲ್ 1 ಉಡಾವಣೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 02: ಭಾರತದ ಪ್ರತಿಷ್ಠಿತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಸೂರ್ಯನನ್ನು ಅಧ್ಯಯನ ಮಾಡಲು ಬಾಹ್ಯಾಕಾಶದಲ್ಲಿ ಆಳವಾದ ಶೋಧಕ್ಕಾಗಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಈಗ ಭರಪೂರ ಅಭಿನಂಧನೆಗಳು ಹರಿದು ಬರುತ್ತಿವೆ.
ಈ ಕುರಿತು ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದು, ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳಿಗೆ ತುಂಬುಹೃದಯದ ಅಭಿನಂದನೆಗಳು. ಇದರೊಂದಿಗೆ ಸೂರ್ಯನ ಅಧ್ಯಯನ ನಡೆಸುವ ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರೆತಿದ್ದು, ಈ ಯೋಜನೆಯ ಮುಂದಿನ ಎಲ್ಲಾ ಹಂತಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನೂ ಇಸ್ರೋ ಸಾಧನೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಕ್ರಮಗಳ ಸರಮಾಲೆಯನ್ನೇ ಸೃಷ್ಟಿಸುತ್ತಿರುವ ಇಸ್ರೋ ಸೂರ್ಯನ ಅಧ್ಯಯನಕ್ಕೆ ಆದಿತ್ಯ L-1 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ನಮ್ಮೆಲ್ಲಾ ಬಾಹ್ಯಾಕಾಶ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಪರಿಶ್ರಮ, ಬದ್ಧತೆಯನ್ನು ನಾವೆಲ್ಲರೂ ಗೌರವಿಸಿ ಸ್ಮರಿಸೋಣ ಎಂದು ಹೇಳಿದ್ದಾರೆ.
ಸೂರ್ಯನ ಅಧ್ಯಯನ ನಡೆಸುವ ಆದಿತ್ಯ ಎಲ್1 ಉಪಗ್ರಹದ ಯಶಸ್ವಿ ಉಡಾವಣೆಗೈದಿರುವ ನಮ್ಮ ಹೆಮ್ಮೆಯ @isro ವಿಜ್ಞಾನಿಗಳಿಗೆ ತುಂಬುಹೃದಯದ ಅಭಿನಂದನೆಗಳು.
— Siddaramaiah (@siddaramaiah) September 2, 2023
ಇದರೊಂದಿಗೆ ಸೂರ್ಯನ ಅಧ್ಯಯನ ನಡೆಸುವ ಇಸ್ರೋ ವಿಜ್ಞಾನಿಗಳ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರೆತಿದ್ದು, ಈ ಯೋಜನೆಯ ಮುಂದಿನ ಎಲ್ಲಾ ಹಂತಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ.#AdityaL1 pic.twitter.com/Pga2ySknE0
ಈ ಕುರಿತು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿ, ಸೌರ ವೀಕ್ಷಣಾ ಮಿಷನ್ ಆದಿತ್ಯ ಎಲ್‌೧ನ ಯಶಸ್ವಿ ಉಡಾವಣೆಗಾಗಿ ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಇಂಜಿನಿಯರ್‌ಗಳು, ಸಂಶೋಧಕರು ಮತ್ತು ಇಸ್ರೋ ನಲ್ಲಿರುವ ನಮ್ಮ ಕಠಿಣ ಪರಿಶ್ರಮದ ಸಿಬ್ಬಂದಿಗೆ ನಾವು ಋಣಿಯಾಗಿದ್ದೇವೆ ಮತ್ತು ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.












Click it and Unblock the Notifications