ಜೆಎಸ್ಎಸ್ ಸುತ್ತೂರು ಮಠದಲ್ಲಿ ವಾಸ್ತವ್ಯ/ವ್ಯಾಸಂಗ ಹೇಗೆ?
ಮೈಸೂರು, ಏ. 2: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸುತ್ತಾ ಬಂದಿರುವ ಸುತ್ತೂರು ಮಠದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಾಸ್ತವ್ಯ/ವ್ಯಾಸಂಗಕ್ಕೆ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಪ್ರವೇಶಾವಕಾಶ ಒದಗಿಬಂದಿದೆ.
ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದಲ್ಲಿ 2014-15ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. 1 ರಿಂದ 7ನೇ ತರಗತಿವರೆಗೆ ಕನ್ನಡ ಮಾಧ್ಯಮಕ್ಕೆ, ಒಂದು ಹಾಗೂ 5ನೇ ತರಗತಿಗಳ ಇಂಗ್ಲಿಷ್ ಮಾಧ್ಯಮಕ್ಕೆ ಹಾಗೂ 8ನೇ ತರಗತಿಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೆ ಈ ಪ್ರವೇಶಾವಕಾಶವಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ (ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಅಶಕ್ತರು, ಕಡು ಬಡವರು) ಬಡತನ ರೇಖೆಯೊಳಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಏ. 10ರಿಂದ ಅರ್ಜಿಗಳನ್ನು ವಿತರಿಸಲಾಗುತ್ತದೆ. ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ http://jssonline.org/jss/ ವೆಬ್ ಸೈಟ್ ಮೂಲಕವೂ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನ. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವವಿಳಾಸವುಳ್ಳ, ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿ, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು- 571129, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.
ಅರ್ಜಿ ಪಡೆಯಲು ಅಥವಾ ಪ್ರಕ್ರಿಯೆಯ ಯಾವುದೇ ವೇಳೆ ಪೋಷಕರು, ಪಾಲಕರು ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಸಂಬಂಧಪಟ್ಟವರನ್ನು ಸಂಪರ್ಕಿಸಲು ಕೋರಲಾಗಿದೆ. ಮಾಹಿತಿಗಾಗಿ ದೂ. 08221-232323 (ಹಿರಿಯ ಪ್ರಾಥಮಿಕ ಶಾಲೆ) 232653 (ಪ್ರೌಢಶಾಲೆ) 232559 (ಆಡಳಿತಾಧಿಕಾರಿಗಳ ಕಚೇರಿ) ಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications