ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದತ್ತು ಪುತ್ರರಿಗೂ ಅನುಕಂಪದ ಉದ್ಯೋಗದ ಹಕ್ಕಿದೆ- ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ನ.23: ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಹತ್ವದ ಆದೇಶ ನೀಡಿದೆ. ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಬನಹಟ್ಟಿ ತಾಲೂಕಿನ ನಿವಾಸಿ ಎಸ್. ಗಿರೀಶ್ (32) ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ ಸೂರಜ್ ಗೋವಿಂದ ರಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಹೈಕೋರ್ಟ್ ಆದೇಶವೇನು?: ಮೇಲ್ಮನವಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ದತ್ತು ಮಕ್ಕಳಿಗೆ ಅನುಕಂಪದ ಉದ್ಯೋಗ ನೀಡಲು ಅವಕಾಶವಿಲ್ಲ ಎಂಬುದಾಗಿ 1996ರ ನಿಯಮಗಳು ತಿಳಿಸುತ್ತದೆ ಎಂಬ ಸರ್ಕಾರದ (ಅಭಿಯೋಜನಾ ಇಲಾಖೆ) ವಾದವನ್ನು ತಿರಸ್ಕರಿಸಿದೆ.

ಪೋಷಕರಿಂದ ನೇರ ದತ್ತು ಪಡೆದರೆ ಅಪರಾಧವಲ್ಲ-ಹೈಕೋರ್ಟ್ಪೋಷಕರಿಂದ ನೇರ ದತ್ತು ಪಡೆದರೆ ಅಪರಾಧವಲ್ಲ-ಹೈಕೋರ್ಟ್

ಅನುಕಂಪದ ಉದ್ಯೋಗಕ್ಕೆ ಸಲ್ಲಿಕೆಯಾದ ಅರ್ಜಿ ಪರಿಗಣಿಸುವಾಗ ಸ್ವಾಭಾವಿಕ ಮಕ್ಕಳಿಗೆ ಸರಿಸಮನಾಗಿ ದತ್ತು ಮಕ್ಕಳನ್ನು ಪರಿಗಣಿಸಬೇಕು ಎಂದು 2021ರಲ್ಲಿ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಮೇಲ್ಮನವಿದಾರ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ ನಂತರ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ ಎಂಬ ಕಾರಣಕ್ಕೆ ತಿದ್ದುಪಡಿ ನಿಯಮಗಳ ಲಾಭವನ್ನು ಮೇಲ್ಮನವಿದಾರನಿಗೆ ನಿರಾಕರಿಸುವಂತಿಲ್ಲ ಎಂದು ತಿಳಿಸಿದೆ.

ಮೃತ ವಿನಾಯಕ ಅವರು ಪತ್ನಿ, ಸ್ವಾಭಾವಿಕ ಪುತ್ರ ಮತ್ತು ಪುತ್ರಿ ಅವರನ್ನು ಹೊಂದಿದ್ದರು. ಅನುಕಂಪದ ಮೇಲೆ ಉದ್ಯೋಗ ನೀಡುವಾಗ ಅರ್ಜಿದಾರರ ಆರ್ಥಿಕ ಸಂಕಷ್ಟವನ್ನು ಪರಿಗಣಿಸಬೇಕಾಗುತ್ತದೆ. ಸ್ವಂತ ಪುತ್ರ ಮೃತಪಟ್ಟ ಕಾರಣಕ್ಕೆ ಮನೆಯ ಜವಾಬ್ದಾರಿ ನೋಡಿಕೊಳ್ಳಲು ಗಿರೀಶ್ ಅವರನ್ನು ವಿನಾಯಕ ದತ್ತು ಪಡೆದಿದ್ದಾರೆ. ಅವರ ಸ್ವಾಭಾವಿಕ ಮಗಳು ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ.

ಆದರೆ, ಆಕೆ ದೈಹಿಕ ಹಾಗೂ ಮಾನಸಿಕ ವಿಕಲಚೇತನರಾಗಿದ್ದರೆ. ಇಂತಹ ಸಂದರ್ಭದಲ್ಲಿ ಮನೆ ಜವಾಬ್ದಾರಿ ಹೊತ್ತಿರುವ ದತ್ತುಪುತ್ರನಿಗೆ ಅನುಕಂಪದ ಉದ್ಯೋಗ ನೀಡಬೇಕಾಗುತ್ತದೆ. ಇನ್ನೂ ಅನುಕಂಪದ ಉದ್ಯೋಗದ ನಿಯಮಗಳಿಗೆ ತಿದ್ದುಪಡಿ ತಂದಿರುವುದರಿಂದ, ದತ್ತು ಪುತ್ರ ಮತ್ತು ಸ್ವಾಭಾವಿಕ ಪುತ್ರ ನಡುವೆ ತಾರತಮ್ಯ ಮಾಡುವುದು ಸಂವಿಧಾನದ ಪರಿಚ್ಛೇದ 14ರ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

Adopted son also eligible for compensatory appointment: Ruled HC

ಅಂತಿಮವಾಗಿ ಅನುಕಂಪದ ಉದ್ಯೋಗಕ್ಕಾಗಿ ಮೇಲ್ಮನವಿದಾರ ಗಿರೀಶ್ (ದತ್ತುಪುತ್ರ) ಸಲ್ಲಿಸಿರುವ ಅರ್ಜಿಯನ್ನು 12 ವಾರಗಳಲ್ಲಿ ಪರಿಗಣಿಸಬೇಕು ಎಂದು ಅಭಿಯೋಜನಾ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಸ್ವತಃ ಮಗ ಅಥವಾ ಮಗಳಾಗಲಿ ಹಾಗೂ ದತ್ತು ಮಗ ಅಥವಾ ಮಗಳಾಗಲಿ, ಅವರು ಮಕ್ಕಳೇ ಆಗಿರುತ್ತಾರೆ. ಇದರಲ್ಲಿ ತಾರತಮ್ಯವಿದೆ ಎಂಬುದಾಗಿ ನ್ಯಾಯಾಲಯ ಒಪ್ಪಿಕೊಂಡರೆ, ದತ್ತು ಸ್ವೀಕಾರದ ಉದ್ದೇಶವೇ ಈಡೇರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ವಿನಾಯಕ ಎಂ. ಮುತ್ತಟ್ಟಿ ಎಂಬುವರು ಬನಹಟ್ಟಿಯ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಪಬ್ಲಿಕ್ ಪ್ರಾಸಿಕೂಟರ್ ಅವರ ಕಚೇರಿಯಲ್ಲಿ ದಲಾಯತ್ (ಗ್ರೂಪ್-ಡಿ ನೌಕರ) ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಪುತ್ರ ೨೦೧೦ರಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. 2011ರಲ್ಲಿ ವಿನಾಯಕ ಎಂ.ಮುತ್ತಟ್ಟಿ ಅವರು ಗಿರೀಶ್ (21 ವರ್ಷವಿದ್ದಾಗ) ಎಂಬಾತನನ್ನು ದತ್ತು ಪಡಿದುಕೊಂಡಿದ್ದರು. ಆ ಸಂಬಂಧ ದತ್ತು ಸ್ವೀಕಾರ ಪತ್ರ ಬರೆಸಿದ್ದರು.

ಕಾರಣಾಂತರಗಳಿಂದ 2018ರ ಮಾ.27ರಂದು ವಿನಾಯಕ ಮೃತಪಟ್ಟಿದ್ದರು. ಇದರಿಂದ ಅನುಕಂಪದ ಆಧಾರದಲ್ಲಿ ತಂದೆಯ ಉದ್ಯೋಗವನ್ನು ತಮಗೆ ನೀಡುವಂತೆ ಕೋರಿ ದತ್ತು ಪುತ್ರ ಗಿರೀಶ್, 2018ರ ಜೂ.7ರಂದು ಅಭಿಯೋಜನಾ (ಪ್ರಾಸಿಕ್ಯೂಷನ್) ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಇಲಾಖೆಯ ನಿರ್ದೇಶಕರು 2018ರ ಆ.7ರಂದು ತಿರಸ್ಕರಿಸಿದ್ದರು.

ಅರ್ಜಿದಾರರು ದತ್ತು ಮಗವಾಗಿದ್ದು, ಅವರಿಗೆ ಅನುಕಂಪದ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅರ್ಜಿದಾರ ಅನುಕಂಪದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ ದಿನಾಂಕದಂದು, 'ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದಲ್ಲಿ ನೇಮಕಾತಿ) ನಿಯಮಗಳು-1996' ಅನ್ವಯವಾಗುತ್ತಿರಲಿಲ್ಲ ಎಂದು ನಿರ್ದೇಶಕರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದರು. ಈ ಆದೇಶ ಪ್ರಶ್ನಿಸಿ ಗಿರೀಶ್, ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ನ್ಯಾಯಪೀಠ ಸಹ ಆ ಅರ್ಜಿಯನ್ನು ತಿರಸ್ಕರಿಸಿ 2021ರ ಜೂ.24ರಂದು ಆದೇಶಿಸಿತ್ತು. ಇದರಿಂದ ಆತ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

English summary
Adopted son also eligible for compensatory appointment: Ruled Karnataka High Court
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X