ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಾವೇರಿ ಆರತಿ & KRS ಜಲಕ್ರೀಡೆ: ಪ್ರವಾಸೋದ್ಯಮಕ್ಕೆ ಉತ್ತೇಜನ
ಬೆಂಗಳೂರು, ಸೆಪ್ಟಂಬರ್ 29: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮಕ್ಕೆ ಈಗಾಗಲೇ ಸರ್ಕಾರ ಚಾಲನೆ ನೀಡಿದೆ. ಐದು ದಿನಗಳ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದ್ದು, ಸೆಪ್ಟಂಬರ್ 30ಕ್ಕೆ ತೆರೆ ಬೀಳಲಿದೆ. ಈ ಸಂಬಂಧ ಹಮ್ಮಿಕೊಮಡಿದ್ದ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ನಲ್ಲಿ ಸಾಹಸ ಹಾಗೂ ಜಲ ಕ್ರೀಡೆಗಳಿಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹತ್ತಾರು ಕ್ರೀಡೆಗಳನ್ನು ಪರಿಚಯಿಸಲಾಗಿದೆ.
ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ಆಗಮಿಸಿ "ಕಾವೇರಿ ಆರತಿ"ಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಬಾರಿಯ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡಿದ್ದು, ಪ್ರವಾಸೋದ್ಯಮಕ್ಕೆ ಹೊಸ ಹೊನಲು ನೀಡಿದೆ. ಜನರನ್ನು ಕೈ ಬೀಸಿ ಕರೆಯುತ್ತಿದೆ.

ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವಾರು ಜಲ ಕ್ರೀಡೆಗಳು ಪ್ರವಾಸಿಗರಿಂದ ಅಪಾರ ಪ್ರತಿಕ್ರಿಯೆ ಪಡೆಯುತ್ತಿವೆ. ಸಾಹಸ ಕ್ರೀಡೆಗಳು ಯುವಕರಿಗೆ ಹೊಸ ಉತ್ಸಾಹ ನೀಡುತ್ತಿದರೆ, ಜಲಕ್ರೀಡೆಗಳು ಕುಟುಂಬ ಸಮೇತರಾಗಿ ಬರುವವರಿಗೆ ವಿಶೇಷ ಅನುಭವ ನೀಡುತ್ತಿವೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷರಾದ ಡಾ. ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕೆಆರ್‌ಎಸ್‌ನಲ್ಲಿ ನಡೆಯುತ್ತಿರುವ ಜಲಕ್ರೀಡೆಗಳಿಗೆ ಪ್ರವಾಸಿಗರಿಗೆ ಇಷ್ಟವಾಗಿದೆ. ಮಕ್ಕಳಿಗಾಗಿ ಸುಮಾರು 80 ಆಟಗಳನ್ನು ಪರಿಚಯಿಸಲಾಗಿದೆ. ಎಲ್ಲ ವಯಸ್ಸಿನ ಪ್ರವಾಸಿಗರು ತಮ್ಮ ರುಚಿಗೆ ತಕ್ಕ ಅನುಭವ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಹಸ, ಮನರಂಜನೆ ಮತ್ತು ಸಂಸ್ಕೃತಿಯ ಸಂಯೋಜನೆಯಿಂದ ಕೆಆರ್‌ಎಸ್ ಪ್ರವಾಸೋದ್ಯಮದ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸದ್ಯ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್‌ಎಸ್‌ಗೆ ಆಗಮಿಸಿ ನೂತನ ರೀತಿಯ ಈ ಆಕರ್ಷಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕು. ಇದು ಮಕ್ಕಳೊಂದಿಗೆ ಪೋಷಕರು ಕುಟುಂಬ ಸಮೇತರಾಗಿ ಬಂದು ಇಲ್ಲಿ ಖುಷಿಪಡುಂತೆ ಅವರು ಕರೆ ನೀಡಿದರು.
ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಲು ಆಗಮಿಸಲಿದ್ದಾರೆ. ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ.












Click it and Unblock the Notifications