ಕರ್ನಾಟಕದಲ್ಲಿ ವೈದ್ಯಕೀಯ, ಅರೆವೈದ್ಯಕೀಯ ಕಾಲೇಜು ಪುನಾರಂಭ

ಬೆಂಗಳೂರು, ಡಿಸೆಂಬರ್.01: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾಗೂ ಲಾಕ್ ಡೌನ್ ನಿಂದಾಗಿ ಬಂದ್ ಆಗಿದ್ದ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕಾಲೇಜುಗಳು ಮಂಗಳವಾರದಿಂದ ಪುನಾರಂಭಗೊಂಡಿವೆ.

ರಾಜ್ಯದಲ್ಲಿನ ದಂತ ವೈದ್ಯಕೀಯ, ಆಯುಷ್, ಅರೆ ವೈದ್ಯಕೀಯ, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು 9 ತಿಂಗಳ ನಂತರ ಪುನಾರಂಭಗೊಳಿಸಲು ಅನುಮತಿ ನೀಡಲಾಗಿದೆ. ಕೊವಿಡ್-19 ಮಾರ್ಗಸೂಚಿಗಳ ಅಡಿಯಲ್ಲಿ ಪ್ರತಿನಿತ್ಯದ ತರಗತಿ ಮತ್ತು ತರಬೇತಿ ನೀಡುವುದಕ್ಕೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಡಿಸೆಂಬರ್.01ರಿಂದ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಆದೇಶ ಹೊರಡಿಸಿದ್ದರು. ರಾಜ್ಯದಲ್ಲಿ ನವೆಂಬರ್.17ರಿಂದಲೇ ಡಿಗ್ರಿ, ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾರ್ಯಾರಂಭ ಮಾಡಿವೆ.

After 9 Months Medical And Paramedical Colleges Opened In Karnataka

ಕಾಲೇಜುಗಳಲ್ಲಿ ಕೊವಿಡ್-19 ಶಿಷ್ಟಾಚಾರ ಪಾಲನೆ:

ರಾಜ್ಯಾದ್ಯಂತ ಪುನಾರಂಭಗೊಂಡಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಕಾಲೇಜುಗಳಲ್ಲಿ ಕೊರೊನಾವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆ ಸೇರಿದಂತೆ ಎಲ್ಲ ರೀತಿಯ ಕೊವಿಡ್-19 ಶಿಷ್ಟಾಚಾರ ಪಾಲನೆಗೆ ಆದೇಶಿಸಲಾಗಿದೆ. ಇದರ ಜೊತೆಗೆ ಕಾಲೇಜುಗಳಿಗೆ ಹಾಜರಾಗುವ ಪ್ರತಿಯೊಬ್ಬ ವೈದ್ಯಕೀಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಜೊತೆಗೆ ವಿದ್ಯಾರ್ಥಿಗಳು ಕೂಡಾ ಕೊವಿಡ್-19 ಸೋಂಕು ತಗುಲಿಲ್ಲ ಎನ್ನುವ ಬಗ್ಗೆ ವರದಿಯನ್ನು ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+