ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ: ಸುತ್ತೋಲೆ ಹೊರಡಿಸಿದ ಸರ್ಕಾರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 27: ರೈತರ ಸಾಲಮನ್ನಾ ಬಳಿಕ ಇನ್ನೊಂದು ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಎಲ್ಲಾ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಿಣಿಕ ಸಾಲಮನ್ನಾ ಮಾಡಲು ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ.

ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧರಾದ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧರಾದ ಎಚ್.ಡಿ.ಕುಮಾರಸ್ವಾಮಿ

ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಸರ್ಕಾರ ಮತ್ತೊಂದು ಸಾಲಮ್ನ್ನಾ ಯೋಜನೆಗೆ ಮುಂದಾಗಿದೆ, ಎಲ್ಲಾ ವರ್ಗಗಳ ವಿದ್ಯಾರ್ಥಿಗಳ ಸಾಲಮನ್ನಾಗೆ ಚಿಂತನೆ ನಡೆಸಿದೆ. ಯುವಕರ ಗಮನ ಸೆಳೆಯಲು ಎಚ್‌ಡಿ ಕುಮಾರಸ್ವಾಮಿ ಮಾಡಿರುವ ಉಪಾಯ ಇದಾಗಿದೆ.

ಸಾಲಮನ್ನಾ ವಿಚಾರದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಪಾಲಿಟಿಕ್ಸ್; ಎಚ್ಡಿಕೆ ಬಾಂಬ್ ಸಾಲಮನ್ನಾ ವಿಚಾರದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಪಾಲಿಟಿಕ್ಸ್; ಎಚ್ಡಿಕೆ ಬಾಂಬ್

ಮೊದಲು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗ ಸಾಲದ ಬಗ್ಗೆ ಮಾಹಿತಿ ಪಡೆದಿದ್ದರು, ಎಲ್ಲಾ ಬ್ಯಾಂಕ್‌ಗಳಿಂದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆ ಸಂಗ್ರಹಿಸುತ್ತಿದೆ. ಬ್ಯಾಂಕ್‌ಗಳು ಮಾಹಿತಿ ನೀಡಲು ಹಿಂದೇಟು ಹಾಕಿದರೆ ಅವರ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದೆ. ಇಲಾಖೆಯಿಂದ ರಾಜ್ಯದ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ. ಲೋಕಸಭಾ ಚುನಾವಣೆ ವೇಳೆ ಘೋಷಣೆ ಸಾಧ್ಯತೆ ಇದೆ.

After farmers loan waiver scheme govt initiative on education loan waiver

ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರಿಂದ ರಾಜ್ಯ ಸರ್ಕಾರ ಮಾಹಿತಿ ಕೇಳಿದೆ. ಶೈಕ್ಷಣಿಕ ಸಾಲದ ಕುರಿತು ಸಮಾಜ ಕಲ್ಯಾಣ ಇಲಾಖೆ ಸಹ ಮಾಹಿತಿ ನೀಡಿಲಿದೆ. ಸಾಲ ಮನ್ನಾ ಮಾಡುವ ಮೂಲಕ ಯುವ ಜನರ ಬೆಂಬಲಗಳಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ.

ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ

ರಾಷ್ಟ್ರೀಕೃತ ಬ್ಯಾಂಕ್‌ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ವಿದ್ಯಾರ್ಥಿಗಳು ಮಾಡಿರುವ ಶೈಕ್ಷಣಿಕ ಸಾಲ ಮನ್ನಾ ಆಗಲಿದೆ ಎಂಬುದು ಸದ್ಯದ ಮಾಹಿತಿ. ಇದಕ್ಕಾಗಿ ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಇನ್ನುವುದು ಸಧ್ಯದ ಮಾಹಿತಿಯಾಗಿದೆ.

English summary
State government has taken initiative to waiver of education loan to appease student sector after farmers crop loan waiver scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X