ಲೋಕಸಭೆ ಚುನಾವಣೆ ಫಲಿತಾಂಶ: ಬಿಜೆಪಿಯಲ್ಲಿ ಮಹತ್ವದ ಬದಲಾವಣೆ?

ಬೆಂಗಳೂರು, ಮೇ 27: ಲೋಕಸಭೆ ಚುನಾವಣೆ 2024ರ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್, ವಿರೋಧ ಪಕ್ಷ ಬಿಜೆಪಿ. 28 ಕ್ಷೇತ್ರಗಳ ಪೈಕಿ ಯಾರಿಗೆ ಎಷ್ಟು ಸ್ಥಾನ? ಎಂಬ ಲೆಕ್ಕಾಚಾರ ನಡೆಯುತ್ತಿದೆ. ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್, ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂಬುದು ಸುದ್ದಿ.

ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ. ಪದಾಧಿಕಾರಿಗಳು ಬದಲಾಗಲಿದ್ದಾರೆ, ಸಚಿವ ಸಂಪುಟ ಪುನಾರಚನೆಯೂ ಆಗಲಿದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಪ್ರತಿಪಕ್ಷ ಬಿಜೆಪಿಯಲ್ಲಿಯೂ ಬದಲಾವಣೆ ಖಚಿತ ಎಂಬ ಮಾಹಿತಿ ಈಗ ಸಿಕ್ಕಿದೆ.

After June 4 Karnataka BJP likely to see some big changes

ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿರುವುದು, ಎರಡು ಬಣಗಳಾಗಿದೆ ಎಂಬ ಆರೋಪದ ಕುರಿತು ಚರ್ಚೆಗಳಾಗಿವೆ. ಚುನಾವಣಾ ಫಲಿತಾಂಶದ ಬಳಿಕ ಇವುಗಳನ್ನು ಪರಿಹರಿಸಲು ರಾಷ್ಟ್ರೀಯ ನಾಯಕರು ಮುಂದಾಗಬಹುದು.

ಫಲಿತಾಂಶ ಏನು ಹೇಳುತ್ತದೆ?; ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 15-16, ಕಾಂಗ್ರೆಸ್ 12-13 ಸೀಟುಗಳಲ್ಲಿ ಗೆಲ್ಲಬಹುದು ಎಂಬುದು ಆಂತರಿಕ ವರದಿಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಬಳಿಕವೂ ಕೆಲವು ಅಸಮಾಧಾನವಿದ್ದು, ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಎಲ್ಲವನ್ನು ಬಗೆಹರಿಸಲಾಗುತ್ತದೆ.

ರಾಷ್ಟ್ರೀಯ ನಾಯಕರು ಈಗಾಗಲೇ ಹರ್ಯಾಣ, ಮಧ್ಯ ಪ್ರದೇಶ ರಾಜ್ಯದ ಬಿಜೆಪಿ ಘಟಕದಲ್ಲಿ ಬದಲಾವಣೆ ಮಾಡಲು ಮುಂದಾಗಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಕರ್ನಾಟಕದ ಸಂಘಟನೆಯಲ್ಲಿಯೂ ಹಲವು ಬದಲಾವಣೆಯಾಗಲಿದೆ ಎಂಬುದು ಕೆಲವು ನಾಯಕರು ಮಾತು.

ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಪಕ್ಷವನ್ನು ಸೇರಿಸಿಕೊಂಡಿರುವುದು ಚುನಾವಣೆಯಲ್ಲಿ ಹೇಗೆ ಪ್ರಭಾವ ಬೀರಲಿದೆ? ಎಂಬ ಚರ್ಚೆ ಈಗ ನಡೆಯುತ್ತಿದೆ. ಇದನ್ನು ತಿಳಿಯಲು ಜೂನ್ 4ರ ತನಕ ಕಾಯಬೇಕಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ ನಡೆಸುತ್ತಿವೆ.

ಮೈತ್ರಿ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಉಂಟು ಮಾಡಿದರೂ ಸಹ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸಹಾಯಕವಾಗಲಿದೆ ಎಂಬ ನಿರೀಕ್ಷೆ ಬಿಜೆಪಿ ನಾಯಕರದ್ದು. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಶಾಸಕರು, ಟಿಕೆಟ್ ಕೈತಪ್ಪಿದ ಶಾಸಕರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುವ ತಂತ್ರವನ್ನು ರೂಪಿಸಲಾಗಿದೆ.

ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಕೆಲವು ತಿಂಗಳುಗಳಲ್ಲಿ ಅಶಿಸ್ತು ಕಾಣುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೈತಪ್ಪಿದ ಬಳಿಕ ಕೆ. ಎಸ್. ಈಶ್ವರಪ್ಪ ಬಂಡಾಯ ಎದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಪಕ್ಷದಿಂದ ಉಚ್ಛಾಟನೆಗೊಂಡರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್‌ ಬಂಡಾಯ ಎದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು, ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡರು.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸಂಘಟನೆ ಮಟ್ಟದಲ್ಲಿ ಬಲಿಷ್ಠವಾಗುತ್ತಿದೆ. ಅದನ್ನು ಎದುರಿಸಲು ಬಿಜೆಪಿಯಲ್ಲಿ ಕೆಲವು ಬದಲಾವಣೆ ತರುವುದು ಅನಿವಾರ್ಯ ಎಂಬುದು ಕೆಲವು ನಾಯಕರ ಮಾತು, ಆದ್ದರಿಂದ ಪ್ರಮುಖ ಬದಲಾವಣೆ ಅಗತ್ಯವಿದೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆಗಸ್ಟ್‌-ಸೆಪ್ಟೆಂಬರ್ ತಿಂಗಳಿನಲ್ಲಿ ಬಿಜೆಪಿ ಘಟಕದಲ್ಲಿ ಬದಲಾವಣೆ ನಿರೀಕ್ಷೆ ಮಾಡಲಾಗಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಬಲವಾಗಿರುವ ರಾಜ್ಯ ಕರ್ನಾಟಕ. ಆದ್ದರಿಂದ ಇಲ್ಲಿನ ಸಂಘಟನೆ ಬಲಪಡಿಸುವತ್ತ ಕೇಂದ್ರದ ವರಿಷ್ಠರು ಗಮನ ಹರಿಸಿದ್ದಾರೆ. ವಿಧಾನಸಭೆ ಚುನಾವಣೆ 2023ರ ಫಲಿತಾಂಶದ ಬಳಿಕ ಪಕ್ಷದಲ್ಲಿ ಕೆಲವು ಬದಲಾವಣೆ ತಂದರೂ ಅದು ನಿರೀಕ್ಷಿತ ಮಟ್ಟಕ್ಕೆ ತಲುಪಿಲ್ಲ ಎಂಬ ಮಾತು ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+