ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪಚುನಾವಣೆಯಲ್ಲಿ ಜೆಡಿಎಸ್ ಅಸ್ತಿತ್ವವನ್ನು ಒಪ್ಪಿಕೊಂಡ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ನ 10: ಕರ್ನಾಟಕದ ಎರಡು ಅಸೆಂಬ್ಲಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. "ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ"ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

"ಜೆಡಿಎಸ್ ಪಕ್ಷದ ಅಸ್ತಿತ್ವ ಕುಸಿದರೆ ಕಾಂಗ್ರೆಸ್ಗೆ ಉಳಿಗಾಲವಿಲ್ಲ ಎಂಬುದು ತಡವಾಗಿಯಾದರೂ ಮಾನ್ಯ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ"ಎಂದು ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ:

2018ರ ಚುನಾವಣೆಯ ನಂತರ ಜೆಡಿಎಸ್ ಕಳೆದುಕೊಂಡ ಕ್ಷೇತ್ರಗಳು2018ರ ಚುನಾವಣೆಯ ನಂತರ ಜೆಡಿಎಸ್ ಕಳೆದುಕೊಂಡ ಕ್ಷೇತ್ರಗಳು

ಜೆಡಿಎಸ್ ಪಕ್ಷದ ಅಸ್ತಿತ್ವ ಕುಸಿದರೆ ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ ಎಂಬುದು ಮಾನ್ಯ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯವಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ಜೆಡಿಎಸ್ ತನ್ನ ಮತಗಳನ್ನು ಉಳಿಸಿ ಕೊಂಡಿದ್ದರೆ, ಬಿಜೆಪಿ ಸುಲಭವಾಗಿ ಗೆಲ್ಲುತ್ತಿರಲಿಲ್ಲ' ಎನ್ನುವ ಮೂಲಕ ಜಾತ್ಯತೀತ ಜನತಾದಳ ಪಕ್ಷದ ಅಸ್ತಿತ್ವ ಸಡಿಲವಾದರೆ ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಶಿರಾ: ಬಿ.ವೈ.ವಿಜಯೇಂದ್ರ ಮುಂದೆ ಮಂಡಿಯೂರಿದ ಪ್ರಜ್ವಲ್ ರೇವಣ್ಣ ಕಾರ್ಯತಂತ್ರಶಿರಾ: ಬಿ.ವೈ.ವಿಜಯೇಂದ್ರ ಮುಂದೆ ಮಂಡಿಯೂರಿದ ಪ್ರಜ್ವಲ್ ರೇವಣ್ಣ ಕಾರ್ಯತಂತ್ರ

"ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾ ಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಮುಂದೆ ಓದಿ...

ಜನಾಶೀರ್ವಾದದಿಂದ ಪ್ರಧಾನಿಯಾದರು

ಜನಾಶೀರ್ವಾದದಿಂದ ಪ್ರಧಾನಿಯಾದರು

"ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ" - ಕುಮಾರಸ್ವಾಮಿ ಟ್ವೀಟ್.

ಬಿಜೆಪಿ ಸರ್ಕಾರ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಗೆಲುವು

ಬಿಜೆಪಿ ಸರ್ಕಾರ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಗೆಲುವು

"ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ಯಡಿಯೂರಪ್ಪನವರಿಗೆ ಹತ್ತಿರವಾಗುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ದ ವಾಗ್ದಾಳಿಯನ್ನು ಮುಂದುವರಿಸಿದ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ದ ವಾಗ್ದಾಳಿಯನ್ನು ಮುಂದುವರಿಸಿದ ಕುಮಾರಸ್ವಾಮಿ

"ಕಾಂಗ್ರೆಸ್ ಕೂಡ ಉಪಚುನಾವಣೆಗಳಲ್ಲಿ ಹೀನಾಯವಾಗಿ ಸೋತಿದೆ. ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸುವ ಮೊದಲು ಕಾಂಗ್ರೆಸ್ಸಿನ ಬುಡ ಅಲ್ಲಾಡುತ್ತಿರುವುದು ಸಿದ್ದರಾಮಯ್ಯ ಅವರಿಗೆ ಸ್ವಯಂವೇದ್ಯವಾಗಿದೆ"ಎಂದು ಟ್ವೀಟ್ ಮಾಡುವ ಮೂಲಕ, ಚುನಾವಣಾ ಫಲಿತಾಂಶದ ನಂತರವೂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿಯನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ.

Recommended Video

ಹೆಂಡತಿಯ challenge ಒಪ್ಪಿ ತೇಜ್ ಎನ್ ಮಾಡಿದ್ರು ಗೊತ್ತಾ ? | Oneindia Kannada
ಆ ಪಕ್ಷದ ಒಳಗಿನ ನಾಯಕರ ನಡುವಣ ಒಳಬೇಗುದಿ

ಆ ಪಕ್ಷದ ಒಳಗಿನ ನಾಯಕರ ನಡುವಣ ಒಳಬೇಗುದಿ

"ಕಾಂಗ್ರೆಸ್ ಹೀನಾಯ ಸೋಲಿಗೆ ಆ ಪಕ್ಷದ ಒಳಗಿನ ನಾಯಕರ ನಡುವಣ ಒಳಬೇಗುದಿ ಕಾರಣ ಎಂಬುದು ಗುಟ್ಟಾಗಿ ಉಳಿದಿಲ್ಲ. ಮೈಸೂರಿನ ಸಂಸದರು ಹೇಳುವಂತೆ ಸಿದ್ದು ಅವರು ಬಿಜೆಪಿಗೆ ಬೆಂಬಲಿಸಿರುವ ಗುಮಾನಿ ಕೆಲ ಕಾಂಗ್ರೆಸ್ ನಾಯಕರಿಗೂ ಕಾಡುತ್ತಿದೆ"ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

English summary
After Loosing Both The Seat Bypoll HD Kumaraswamy Angry On Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X