ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐದು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಶಾಲಾರಂಭ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್!

|
Google Oneindia Kannada News

ಬೆಂಗಳೂರು, ಆ. 23: ಬಹುದೊಡ್ಡ ಸವಾಲಿನೊಂದಿಗೆ ಒಂದೂವರೆ ವರ್ಷಗಳ ಬಳಿಕ ರಾಜ್ಯಾದ್ಯಂತ ಶಾಲೆಗಳು ಇಂದು (ಸೋಮವಾರ) ಆರಂಭವಾಗುತ್ತಿವೆ. ಕೊರೊನಾ ವೈರಸ್ ಸೋಂಕಿನ ಆರ್ಭಟದ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್‌ ತಿಂಗಳಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆಮೇಲೆ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತಾದರೂ, ಉಳಿದ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೂ ಸಹ ನಡೆಸಿರಲಿಲ್ಲ.

ಈಗಲೂ ಕೊರೊನಾ ಮೂರನೇ ಅಲೆಯ ಆತಂಕವಿದೆ. ಜೊತೆಗೆ ರೂಪಾಂತರಿ ಡೆಲ್ಟಾ ವೈರಸ್ ಆತಂಕ ಕೂಡ ಇದೆ. ಆದರೆ ಕಳೆದೊಂದು ವರ್ಷದಿಂದ ಮಕ್ಕಳ ಕಲಿಕೆ ಸಂಪೂರ್ಣವಾಗಿ ಕುಂಠಿತಗೊಂಡಿದೆ. ಅದರೊಂದಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಸೋಂಕು ಆಗಿರುವುದರೊಂದ ಅದರ ಹಾವಳಿಯೊಂದಿಗೆ ಬದುಕಬೇಕಾದ ಅನಿವಾರ್ಯತೆ ಕೂಡ ಇದೆ. ಹೀಗಾಗಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಒಂದೂವರೆ ವರ್ಷದ ಬಳಿಕ ಮಕ್ಕಳು ಮತ್ತೆ ಶಾಲೆಗೆ ಹಿಂದಿರುಗುತ್ತಿದ್ದಾರೆ. ಇದೇ ವೇಳೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಶಾಲಾರಂಭದ ಕುರಿತು ಹಲವು ವಿಚಾರಗಳನ್ನು ತಿಳಿಸಿದ್ದಾರೆ.

ಮಕ್ಕಳಿಗೆ ಹಾಜರಾತಿ ಕಡ್ಡಾಯವಿಲ್ಲ!

ಮಕ್ಕಳಿಗೆ ಹಾಜರಾತಿ ಕಡ್ಡಾಯವಿಲ್ಲ!

ಶಾಲಾರಂಭದ ಕುರಿತು ತುಮಕೂರಿನಲ್ಲಿ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, "ರಾಜ್ಯಾದ್ಯಂತ ಇಂದಿನಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

"ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್‌ಲೈನ್‌ನಲ್ಲಿ ಮೂಲಕ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಮೊಬೈಲ್ ಮೂಲಕ ನೀಡುವ ಶಿಕ್ಷಣ ಮಕ್ಕಳಲ್ಲಿ ಕಲಿಕಾಸಕ್ತಿ ಕಡಿಮೆ ಆಗುತ್ತಿರುವುದು, ಅಂತರ್ಜಾಲ ಸಮಸ್ಯೆ ಮತ್ತಿತರ ತಾಂತ್ರಿಕ ಸಮಸ್ಯೆಗಳು ಕಂಡುಬಂದಿದ್ದವು. ಹೀಗಾಗಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ" ಎಂದಿದ್ದಾರೆ.

ಮಕ್ಕಳು ಶಾಲೆಗೆ ಬರಲು ಸಿದ್ಧರಾಗಿದ್ದಾರೆ!

ಮಕ್ಕಳು ಶಾಲೆಗೆ ಬರಲು ಸಿದ್ಧರಾಗಿದ್ದಾರೆ!

"ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗಿದೆ. ಟಾಸ್ಕ್ ಫೋರ್ಸ್ ಸಮಿತಿ ಹಾಗೂ ತಜ್ಞರ ಸಲಹೆ ಮೇರೆಗೆ ನೇರ ತರಗತಿಗಳನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಣಯ ತೆಗೆದು ಕೊಂಡಿದ್ದಾರೆ. ಆರಂಭದಲ್ಲಿ ಮೊದಲಿಗೆ 9, 10, 11 ಹಾಗೂ 12ನೇ ತರಗತಿಯನ್ನು ಪ್ರಾರಂಭಿಸುತ್ತಿದ್ದೇವೆ" ಎಂದು ಬಿ.ಸಿ. ನಾಗೇಶ್ ಹೇಳಿದ್ದಾರೆ.

"ತರಗತಿಗಳನ್ನು ಪ್ರಾರಂಭಿಸಲು ಈಗಾಗಲೇ ರಾಜ್ಯದ ಎಲ್ಲಾ ಡಿಡಿಪಿಐಗಳೊಂದಿಗೆ ಸಭೆ ನಡೆಸಿದ್ದೇವೆ. ಮಕ್ಕಳು ಶಾಲೆಗೆ ಬರಲು ಸಿದ್ಧರಿದ್ದಾರೆ ಎಂಬ ಅಭಿಪ್ರಾಯವನ್ನು ಅವರೆಲ್ಲರೂ ವ್ಯಕ್ತಪಡಿಸಿದ್ದಾರೆ. ಆದರಿಂದ ಶಾಲೆಯನ್ನು ಪ್ರಾರಂಭಿಸಲು ತೀರ್ಮಾನ ಮಾಡಿದ್ದೇವೆ" ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಪೋಷಕರ ಅನುಮತಿ ಪ್ರಮಾಣ ಪತ್ರ ಕಡ್ಡಾಯ!

ಪೋಷಕರ ಅನುಮತಿ ಪ್ರಮಾಣ ಪತ್ರ ಕಡ್ಡಾಯ!

"ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಬಗ್ಗೆ ನಿಗಾವಹಿಸುವಂತೆ ಡಿಡಿಪಿಐಗಳಿಗೆ ಸೂಚನೆ ಕೊಟ್ಟಿದ್ದೇವೆ. ಶಾಲೆಗೆ ಹಾಜರಾಗುವ ಮಕ್ಕಳು ತಮ್ಮ ಪೋಷಕರಿಂದ ಅನುಮತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಲೇಬೇಕು. ಕರ್ತವ್ಯಕ್ಕೆ ಹಾಜರಾಗುವ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಲಸಿಕೆ ಪಡೆಯದವರಿಗೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶವಿಲ್ಲ. ಲಸಿಕೆ ಪಡೆಯದೆ ಕರ್ತವ್ಯಕ್ಕೆ ಹಾಜರಾಗದಿರುವವರ ರಜೆಯನ್ನು ಅನಧಿಕೃತ ಗೈರು ಹಾಜರಿ ಎಂದು ಪರಿಗಣಿಸಲಾಗುವುದು" ಎಂದು ಬಿ.ಸಿ. ನಾಗೇಶ್ ಎಚ್ಚರಿಸಿದ್ದಾರೆ.

"ಕೋವಿಡ್ ಲಸಿಕೆ ಪಡೆಯಲು ಶಿಕ್ಷಕರಿಗಾಗಿ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿಯಂತೆ ಶೇಕಡಾ 95ಕ್ಕಿಂತ ಹೆಚ್ಚಿನ ಶಿಕ್ಷಕರು ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯದ ಶಿಕ್ಷಕರು ತಪ್ಪದೇ ಲಸಿಕೆಯನ್ನು ಪಡೆಯಬೇಕೆಂದು ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ. ಜೊತೆಗೆ ಮಕ್ಕಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದೂ ನಾಗೇಶ್ ತಿಳಿಸಿದ್ದಾರೆ.

Recommended Video

ನನಿಗೆ ಡ್ರೆಸ್ ಸೆನ್ಸ್ ಹೇಳಿಕೊಟ್ಟಿದ್ದೆ ಇವರು! | Oneindia Kannada
ಈ ಐದು ಜಿಲ್ಲೆಗಳಲ್ಲಿ ಶಾಲೆ ಆರಂಭಿಸುತ್ತಿಲ್ಲ!

ಈ ಐದು ಜಿಲ್ಲೆಗಳಲ್ಲಿ ಶಾಲೆ ಆರಂಭಿಸುತ್ತಿಲ್ಲ!

"ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದು ಕಡ್ಡಾಯವಿಲ್ಲ. ಶಾಲೆಗೆ ಹಾಜರಾಗದಿರುವವರಿಗೆ ಆನ್‌ಲೈನ್ ತರಗತಿಗಳನ್ನು ಸಹ ಮುಂದುವರೆಸಲಾಗುವುದು. ಸಂಭಾವ್ಯ‌ ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗುಲುವುದಿಲ್ಲ ಎಂದು ಮಕ್ಕಳ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳೆದ ಒಂದು ತಿಂಗಳಿಂದ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ. ಪ್ರಾಣಹಾನಿ ಸಂಭವಿಸಿರುವುದು ವರದಿಯಾಗಿಲ್ಲ. ಈ ಕಾರಣಗಳ ಹಿನ್ನೆಲೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ" ಎಂದರು.

ಜೊತೆಗೆ "ಶಾಲೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊದಲನೆಯ ಹಾಗೂ ಎರಡನೆಯ ಅಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಎಷ್ಟಿತ್ತು ಎಂಬ ವರದಿಯ ಮಾಹಿತಿಯನ್ನು ಸಂಗ್ರಹಿಸಲು ಬಿಇಓಗಳಿಗೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ 5 ಜಿಲ್ಲೆಗಳಲ್ಲಿ ಶೇಕಡ ಎರಡಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳಿರುವುದರಿಂದ ಈ ಜಿಲ್ಲೆಗಳಲ್ಲಿ ಶಾಲೆಗಳನ್ನು ಪ್ರಾರಂಭಿಸುತ್ತಿಲ್ಲ" ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

English summary
After one and half year statewide schools are reopening today (23 August 2021). The Minister of Education B.C. Nagesh said that schools will be started from 23rd august. And all precautions taken. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X