ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಪಿಯುಸಿಯಿಂದಲೇ ಬಿ.ಇಡಿಗೆ ಅವಕಾಶ

|
Google Oneindia Kannada News

ಬೆಂಗಳೂರು, ನವೆಂಬರ್ 9: ಇನ್ನುಮುಂದೆ ಪಿಯುಸಿಯಿಂದಲೇ ಬಿ.ಇಡಿ ತರಬೇತಿಗೆ ಪ್ರವೇಶ ಪಡೆಯಬಹುದಾಗಿದೆ. ಈಗ ಜಾರಿಯಲ್ಲಿರುವ ಎರಡು ವರ್ಷಗಳ ಬಿ.ಇಡಿ ಕೋರ್ಸ್ ಇನ್ನುಮುಂದೆ ನಾಲ್ಕು ವರ್ಷಗಳಿಗೆ ವಿಸ್ತರಿಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸಮ್ಮತಿ ಸೂಚಿಸಿದೆ. 2019ರಿಂದಲೇ ಕೋರ್ಸ್ ಜಾರಿಗೆ ಬರುವ ಸಾಧ್ಯತೆ ಇದೆ.

ವಿಶೇಷವೆಂದರೆ ಬಿಇ, ವೈದ್ಯ ಕೋರ್ಸ್ ಗಳ ಮಾದರಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿದ ತಕ್ಷಣ ವಿದ್ಯಾರ್ಥಿಗಳು ನಾಲ್ಕು ವರ್ಷಗಳ ಬಿ.ಇಡಿ ಕೋರ್ಸ್‌ಗೆ ಸೇರ್ಪಡೆಯಾಗಬಹುದು. ಕೇಂದ್ರ ಮಾನವ ಸಂಪನ್ಮೂಲ ತಜ್ಞರೊಂದಿಗೆ ಮಾತುಕತೆ ನಡೆದಿದೆ. ಅದಾದ ಬಳಿಕ ನಾಲ್ಕು ವರ್ಷಗಳ ಬಿ.ಇಡಿ ಕೋರ್ಸ್ ಆರಂಭಕ್ಕೆ ಅನುಮತಿ ದೊರೆತಿದೆ. ಕಾನೂನು ಅಭಿಪ್ರಾಯ ಪಡೆಯಲು ಕಾನೂನು ಸಚಿವಾಲಯಕ್ಕೆ ಪತ್ರ ರವಾನಿಸಲಾಗಿದೆ.

ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ

ಕೆಲವೇ ವಾರಗಳಲ್ಲಿ ಇದಕ್ಕೆ ಕಾನೂನು ಸಚಿವಾಲಯ ತನ್ನ ಪ್ರತಿಕ್ರಿಯೆ ಏನು ಎನ್ನುವುದನ್ನು ತಿಳಿಸಲಿದೆ. ಕಾನೂನು ಸಚಿವಾಲಯ ಸಮ್ಮತಿ ಸೂಚಿಸಿದರೆ 2019ರಿಂದಲೇ ನಾಲ್ಕು ವರ್ಷಗಳ ಬಿ.ಇಡಿ ಕೋರ್ಸ್ ಆರಂಭವಾಗುತ್ತದೆ.

After PUC you can apply for B.ed course

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು 3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

ಈಗ ಪದವಿ ಮುಗಿಸಿದ ನಂತರ ಅಭ್ಯರ್ಥಿಗಳು ಎರಡು ವರ್ಷಗಳ ಬಿ.ಇಡಿ ಕೋರ್ಸ್‌ಗೆ ಸೇರ್ಪಡೆಯಾಗಲು ಅವಕಾಶವಿದೆ. ನಾಲ್ಕು ವರ್ಷಗಳ ಕೋರ್ಸ್ ಜಾರಿಗೆ ಬಂದಲ್ಲಿ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ನೇರವಾಗಿ ಬಿ.ಇಡಿ ಕೋರ್ಸ್‌ಗೆ ಸೇರ್ಪಡೆಗೊಳ್ಳಬಹುದು.

English summary
HRD gave a direction that even after PUC students can enter for B.ed course. So that they can save one year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X