ದರ್ಶನ್ ಹಾಗೂ ಗ್ಯಾಂಗ್ನ ಮತ್ತೊಂದು ಕರಾಳ ಮುಖ ಬಯಲು; ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟಿದ ನಟ
ಬೆಂಗಳೂರು, ಜೂನ್ 13: ರಾಜ್ಯಾದ್ಯಂತ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಆರೋಪಿಗಳು ಜೈಲು ಸೇರಿದ್ದು, ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಕುಟುಂಬಸ್ಥರು ಸೇರಿದಂತೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಿಂದ ಜೈಲು ಪಾಲಾಗಿರುವ ನಟ ದರ್ಶನ್ ವಿರುದ್ಧ ಹಿಂದಿನ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪರಿಹಾರ ಕೇಳಲು ಹೋದ ಸಂತ್ರಸ್ತರ ವಿರುದ್ಧ ದರ್ಶನ್ ಯಾವ ರೀತಿ ನಡೆದುಕೊಂಡಿದ್ದರು ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದ್ದು, ಇದರಿಂದ ದರ್ಶನ್ ಹಾಗೂ ಗ್ಯಾಂಗ್ನ ಮತ್ತೊಂದು ಕರಾಳ ಮುಖ ಬಯಲಾಗಿದೆ.

ದರ್ಶನ್ ಹಾಗೂ ಅವರ ಗ್ಯಾಂಗ್ ಕಳೆದ ಹತ್ತು ವರ್ಷಗಳ ಹಿಂದಿನ ಕರಾಳ ಘಟನೆಯನ್ನ ಇದೀಗ ರಿವೀಲ್ ಮಾಡಿದ್ದು, ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ ಮೆರೆಯಲಾಗಿದೆ. ನಟ ದರ್ಶನ್ ಹೀರೋ ಅಲ್ಲ ವಿಲನ್ ಎಂದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ. ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲಾಗಿದ್ದು ಕೊಲೆ ಪ್ರಕರಣ ಬಳಿಕ ದರ್ಶನ್‌ನ ಒಂದೊಂದೆ ಮುಖ ಅನಾವರಣಗೊಳ್ಳುತ್ತಿದೆ. ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು, ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಬದುಕು ನರಕಮಯ ಆಗಿದೆ. ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಸಂತ್ರಸ್ತ ವ್ಯಕ್ತಿ. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಬುರುಡೆಯ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿದೆ. ಮಹೇಶ್ ಅವರನ್ನು ದರ್ಶನ್ ಕಡೆಯವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದಾರೆ. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ.
ಪರಿಹಾರ ಕೇಳಲು ಕಾರ್ಮಿಕನ ಸಂಬಂಧಿಕರು ಫಾರ್ಮ್ ಹೌಸ್ಗೆ ಹೋದರೆ ಡಿ ಗ್ಯಾಂಗ್ ಸಾಕುನಾಯಿ ಛೂ ಬಿಟ್ಟಿತ್ತಂತೆ. ಬಳಿಕ ಮೈಸೂರಿನ ಹೊಟೇಲ್ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು. ವಿಚಾರ ಹೊರಗಡೆ ಬಾಯಿಬಿಟ್ರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ದರ್ಶನ್ ಹಾಗೂ ಅವರ ಗ್ಯಾಂಗ್ ಬೆದರಿಸಿತ್ತು. ಹತ್ತು ವರ್ಷಗಳಿಂದ ಮಹೇಶ್ ಹಾಸಿಗೆ ಹಿಡಿದಿದ್ದಾರೆ. ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ. ದರ್ಶನ್ಗೆ ಹಿಡಿಶಾಪ ಹಾಕುತ್ತಾ ಮಹೇಶ್ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ದರ್ಶನ್ ಗೆ ಹಿಡಿ ಶಾಪ ಹಾಕುತ್ತಾ ಕಣ್ಣೀರಲ್ಲಿ ಕಾರ್ಮಿಕ ಮಹೇಶ್ ಕುಟುಂಬವಿದೆ. ಇವರಿಗೆ ದಾನಿಗಳ ನೆರವು ಅಗತ್ಯವಿದೆ.












Click it and Unblock the Notifications