ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಸೆಂ ಕೃಷ್ಣ ಅವರ ಬೆನ್ನ ಹಿಂದೆ ಕೈ ಪಕ್ಷ ತೊರೆದ ಹಿರಿಯ ನಾಯಕಿ

ಕರ್ನಾಟಕ ಕಾಂಗ್ರೆಸ್ಸಿನ ಹಿರಿಯ ನಾಯಕಿ ನಫೀಸ್ ಫಜಲ್ ಅವರು ಕಾಂಗ್ರೆಸ್ಸಿಗೆ ಗುಡ್ ಬೈ ಹೇಳಿದ್ದಾರೆ. ಎಸ್ಸೆಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಸಚಿವೆಯಾಗಿದ್ದ ನಫೀಸ್ ಅವರು ಮಹಿಳಾವಾದಿಯಾಗಿ ಗುರುತಿಸಿಕೊಂಡಿದ್ದಾರೆ.

By Mahesh
|
Google Oneindia Kannada News

ಬೆಂಗಳೂರು, ಮಾರ್ಚ್ 29: ಕರ್ನಾಟಕ ಕಾಂಗ್ರೆಸ್ಸಿನ ಹಿರಿಯ ನಾಯಕಿ ನಫೀಸ್ ಫಜಲ್ ಅವರು ಕಾಂಗ್ರೆಸ್ಸಿಗೆ ಗುಡ್ ಬೈ ಹೇಳಿದ್ದಾರೆ. ಎಸ್ಸೆಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಸಚಿವೆಯಾಗಿದ್ದ ನಫೀಸ್ ಅವರು ಮಹಿಳಾವಾದಿಯಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ನಫೀಸ್ ಅವರು ಬಿಜೆಪಿ ಸೇರುವ ನಿರೀಕ್ಷೆಯಿದೆ.

ಎಸ್ ಎಂ ಕೃಷ್ಣ ಅವರ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

After SM Krishna, Nafees Fazal quits Congress

ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಬೇಕೆಂದು ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದಾಗ ಅವಮಾನ ಮಾಡಿದ್ದರು. ಹಿರಿಯರಿಗೆ ಕಾಂಗ್ರೆಸ್ಸಿನಲ್ಲಿ ಬೆಲೆ ಇಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲೂ ಮಹಿಳಾ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ನಫೀಸ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದೇ ಮೊದಲಲ್ಲ: 2008ರಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಚಿವೆ ನಫೀಸ್ ಫಜಲ್ ರಾಜೀನಾಮೆ ನೀಡಿ ಹೊರಬಂದಿದ್ದರು. ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ನೀಡದೆ ಮಹಿಳಾ ವಿರೋಧಿ ಪಕ್ಷವಾಗುತ್ತಿದೆ ಎಂದು ನಫೀಸ್ ದೂರಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Nafees Fazal, who was a minister in the cabinet of S.M. Krishna, has resigned from the primary membership of the Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X