ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರೀ ಮಳೆ : ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ

By Gururaj
|
Google Oneindia Kannada News

ಚಿಕ್ಕಮಗಳೂರು, ಜೂನ್ 13 : ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು, ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

ಚಾರ್ಮಾಡಿ ಘಾಟ್‌ನ 4, 7, 8, 9ನೇ ತಿರುವಿನಲ್ಲಿ ಗುಡ್ಡ ಕುಸಿದುಬಿದ್ದಿದೆ. ವಾಹನ ಸಂಚಾರ ಬಂದ್‌ ಮಾಡಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ಹಾಸನ-ಮಂಗಳೂರು ರೈಲು ಮಾರ್ಗ ಸಂಚಾರಕ್ಕೆ ಸಿದ್ಧಹಾಸನ-ಮಂಗಳೂರು ರೈಲು ಮಾರ್ಗ ಸಂಚಾರಕ್ಕೆ ಸಿದ್ಧ

7 ಜೆಸಿಬಿ, 2 ಹಿಟ್ಯಾಚಿಗಳ ಮೂಲಕ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಸೋಮವಾರವೂ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಘಾಟ್‌ನಲ್ಲಿ ಸಿಲುಕಿ ಪ್ರಯಾಣಿಕರು ಸಂಕಷ್ಟ ಅನುಭವಿಸಿದ್ದರು.

Again landslide in Charmadi Ghat road

ಮಳೆಯಿಂದಾಗಿ ಕುಸಿದ ಬಿದ್ದ ಗುಡ್ಡದ ಮಣ್ಣನ್ನು ಮಂಗಳವಾರ ಮಧ್ಯಾಹ್ನ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ಎರಡು ದಿನಗಳ ಕಾಲ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ: ಮೈದುಂಬಿದ ಹೇಮಾವತಿಹಾಸನ ಜಿಲ್ಲೆಯಲ್ಲಿ ಭಾರಿ ಮಳೆ: ಮೈದುಂಬಿದ ಹೇಮಾವತಿ

'ಘಾಟಿಯಲ್ಲಿ 2 ದಿನ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಜೂನ್ 14ರವರೆಗೆ ಎರಡೂ ಕಡೆಗಳಿಂದ (ಮೂಡಿಗೆರೆ, ಮಂಗಳೂರು) ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ' ಎಂದು ಚಿಕ್ಕಮಗಳೂರು ಎಸ್ಪಿಕೆ.ಅಣ್ಣಾಮಲೈ ಹೇಳಿದ್ದಾರೆ.

English summary
Again landslides continue at Charmadi Ghat on Wednesday, June 13, 2018 evening. landslide spotted in Ghat 4, 7, 8 and 9th cross. Vehicle movement banned in Charmadi Ghat till June 14, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X