ಡಿಕೆಶಿಗೆ ಮತ್ತೆ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು, ಫೆಬ್ರವರಿ 07: ಆದಾಯಕ್ಕೂ ಮೀರಿದ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದ ಪ್ರಕರಣದಲ್ಲಿ ಸಿಬಿಐ ಮೇಲ್ಮನವಿ ಸಲ್ಲಿಸಿದ್ದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಡಿ. ಕೆ. ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡಿದ್ದ ಆರೋಪ ಸಂಬಂಧ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಗ್ರೌಂಡ್ ಠಾಣೆ ಪೊಲೀಸರಿಗೆ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಹಾಗಾಗಿ ಡಿಕೆಶಿ ಈಗ ಮತ್ತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.

Again Trouble For DK Shivakumar Special Court Ordered To Register FIR

ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೋಡಘಟ್ಟ ಎಂಬುವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ.

ಅಲ್ಲದೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕರ್ನಾಟಕದ ಸಾಮಾಜಿಕ ಜಾಲಾತಾಣದ ಮುಖ್ಯಸ್ಥ ಬಿ. ಆರ್. ನಾಯ್ಡು ವಿರುದ್ಧವೂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: 2024ರ ಜನವರಿ ಮೊದಲ ವಾರದಲ್ಲಿ ಹುಬ್ಬಳ್ಳಿಯ ಪೊಲೀಸರು 60 ವರ್ಷದ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಎಂಬುವರನ್ನು 31 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು. ಇದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕದಿಂದ ಪ್ರತಿಭಟನೆಗಳು ನಡೆದಿದ್ದವು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಸಚಿವ ಸುನೀಲ್ ಕುಮಾರ್, ಕೆ. ಎಸ್. ಈಶ್ವರಪ್ಪ, ಪ್ರತಾಪ್ ಸಿಂಹ, ಸಿ. ಟಿ. ರವಿ ಸೇರಿದಂತೆ ಹಲವು ಮುಖಂಡರು ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂಬುದಾಗಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು.

ಇದೇ ಫೋಟೋಗಳನ್ನು ಪ್ಯಾಬ್ರಿಕೇಟ್ ಮಾಡಿಕೊಂಡು ಬಳಕೆ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೆ ಮಾಡುವ ಮೂಲಕ ವಿವಿಧ ವರ್ಗಗಳ ನಾಗರೀಕರ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ. ಆ ಮೂಲಕ ಬಿಜೆಪಿ ಮುಖಂಡರ ವಿರುದ್ಧ ದ್ವೇಷ ಕಾರುವುದು ಮತ್ತು ಪ್ರಚೋದನೆ ಮಾಡುವುದಕ್ಕೆ ಮುಂದಾಗಿದ್ದಾರೆ. ಜತೆಗೆ,ಆಧಾರವಿಲ್ಲದ ಆರೋಪಗಳನ್ನು ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದರು.

ಈ ಪೋಸ್ಟ್‌ಗಳನ್ನು ವಿಶ್ವದ ವಿವಿಧ ಭಾಗಗಳಲ್ಲಿ ಸಾವಿರಾರು ಜನ ವೀಕ್ಷಣೆ ಮಾಡಿದ್ದಾರೆ. ಇಂತಹ ಕೃತ್ಯಗಳನ್ನು ಮುಂದುವರೆಸಿದಲ್ಲಿ ಮತ್ತೆ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಲಿದ್ದಾರೆ. ಆದ್ದರಿಂದ ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+