ಸಿದ್ದರಾಮಯ್ಯ ಕೆಳಗಿಳಿಸಲು ಪ್ಲಾನ್ ರೆಡಿ; ಆ ಸ್ವಾಮೀಜಿ ಜೊತೆಗೆ ಕಾನ್ಫರೆನ್ಸ್ ಕಾಲ್: ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ್
ಧಾರವಾಡ, ಏಪ್ರಿಲ್ 21: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಪ್ರಚಾರವನ್ನ ರಾಜಕೀಯ ಪಕ್ಷಗಳು ನಡೆಸುತ್ತಿದ್ದು, ರಾಜಕೀಯ ವಲಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.
ರಾಜ್ಯದಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರ ಪ್ರಚಾರವನ್ನ ನಡೆಸುತ್ತಿದ್ದು, ಮತದಾರರ ಓಲೈಕೆಗಾಗಿ ನಾನಾ ಕಸರತ್ತುಗಳನ್ನ ನಡೆಸುತ್ತಿರುವ ನಡುವೆ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸ್ಟೋಟಕ ಹೇಳಿಕೆ ನೀಡಿದ್ದು, ಭಾರೀ ಚರ್‌ಚೆಗೆ ಕಾರಣವಾಗಿದೆ.

ಈ ಕುರಿತು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿಯಾಗಿದೆ. ಕಾಂಗ್ರೆಸ್ ನಾಯಕರೇ ಅಜೆಂಡಾ ಸಿದ್ದ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಶಿವಾನಂದ ಪಾಟೀಲ್ ಈ ಬಗ್ಗೆ ಕಾನ್ಸರೆನ್ಸ್ ಕಾಲ್ ನಲ್ಲಿ ಮಾತನಾಡಿದ್ದಾರೆ ಎಂದು ಸ್ಟೋಟಕ ಹೇಳಿಕೆಯನ್ನ ನೀಡಿದ್ದಾರೆ. ಒಬ್ಬರು ಸ್ವಾಮೀಜಿ ಜೊತೆ ಡಿ.ಕೆ.ಶಿವಕುಮಾರ್, ಶಿವಾನಂದ ಪಾಟೀಲ್ ಕಾನ್ಸರೆನ್ಸ್ ಕಾಲ್ ನಲ್ಲಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ವ್ಯವಸ್ಥಿತವಾಗಿ ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದರು.












Click it and Unblock the Notifications