ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ₹9,81,784 ಕೋಟಿ ಹೂಡಿಕೆ ಒಪ್ಪಂದ: ನಿರಾಣಿ

|
Google Oneindia Kannada News

ಬೆಂಗಳೂರು,ನ.5: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್‌. ನಿರಾಣಿ ತಿಳಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಮಾಹಿತಿಯನ್ನ ಹಂಚಿಕೊಳ್ಳಲು ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ, ಎಂದು ಅವರು ಹೇಳಿದರು.

ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5, 41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.

Agreement to invest Rs 981784 crore at Global Investors Conference

ವಿವಿಧ ಉದ್ಯಮಿಗಳು 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು. ಆದರೆ, ಈ ಯೋಜನೆಗಳಿಗೆ ಭೂಮಿ, ವಿದ್ಯುತ್, ಕಚ್ಚಾ ವಸ್ತುಗಳು, ಸಬ್ಸಿಡಿ ಸೇರಿದಂತೆ ವಿವಿಧ ವಿಷಯಗಳು ಇತ್ಯರ್ಥವಾಗಬೇಕಾಗಿರುವುದರಿಂದ ಒಪ್ಪಂದ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಉದ್ಯಮಿಗಳೊಂದಿಗೆ ನಮ್ಮ ಅಧಿಕಾರಿಗಳು ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ," ಎಂದು ತಿಳಿಸಿದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳನ್ನು ತೊಂಬತ್ತು ದಿನದೊಳಗೆ ಅನುಮೋದನೆ ನೀಡಲಾಗುವುದು. ಒಡಂಬಡಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಮುಖ್ಯವಾಗಿ ಈ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳ ಪೈಕಿ ಅಂದಾಜು ಶೇ.70ರಷ್ಟು ಯೋಜನೆಗಳು ಅನುಷ್ಠಾನಗೊಳ್ಳುವ ವಿಶ್ವಾಸ ಇದೆ ಎಂದರು.

Agreement to invest Rs 981784 crore at Global Investors Conference

ಬೆಂಗಳೂರಿನ ಆಚೆಗೆ ಕೈಗಾರಿಕೆಗಳನ್ನು ವಿಸ್ತರಿಸುವುದು ಈ ಜಾಗತಿಕ ಹೂಡಿಕೆದಾರರ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಅದರಂತೆ ಸಮಾವೇಶದಲ್ಲಿ ಆಗಿರುವ ಒಟ್ಟು ಒಪ್ಪಂದಗಳ ಪೈಕಿ ಶೇ.90ರಷ್ಟು ಬೆಂಗಳೂರಿನ ಆಚೆ ಆಗುತ್ತಿದೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 2 ಮತ್ತು 3ನೇ ಹಂತದ ನಗರಗಳಲ್ಲೂ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಸಚಿವರು ಪ್ರಶಂಸಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿನ ಡಾ. ಇ ವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

English summary
Agreement to invest Rs 9,81,784 crore at Global Investors Conference sasy murugesh nirani, Appointment of Nodal Officers for implementation of schemes,invest karanataka,global capital investors conference, bengalore,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X