ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಿಡತೆ ದಾಳಿ ಆತಂಕ; ಸಭೆ ಕರೆದ ಕೃಷಿ ಸಚಿವ ಬಿ. ಸಿ. ಪಾಟೀಲ್

|
Google Oneindia Kannada News

ಬೆಂಗಳೂರು, ಮೇ 27 : ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಭಾರತದ ಹಲವು ರಾಜ್ಯಗಳಲ್ಲಿ ಆತಂಕ ಮೂಡಿಸಿದೆ. ಕರ್ನಾಟಕವೂ ಇದಕ್ಕೆ ಹೊರತಾಗಿಲ್ಲ. ಆದರೆ, ಕೃಷಿ ಸಚಿವ ಬಿ. ಸಿ. ಪಾಟೀಲ್ ರೈತರಿಗೆ ಅಭಯ ನೀಡಿದ್ದಾರೆ.

ಉತ್ತರ ಭಾರತದ ಕೆಲವು ರಾಜ್ಯಗಳನ್ನು ರಕ್ಕಸ ಮಿಡತೆಗಳು ಬಾಧಿಸುತ್ತಿವೆ. ಕರ್ನಾಟಕಕ್ಕೂ ಮಿಡತೆಗಳು ಆಗಮಿಸುವ ಆತಂಕ ರೈತರನ್ನು ಕಾಡುತ್ತಿದೆ. ಮಿಡತೆಗಳನ್ನು ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ? ಎಂದು ರೈತರು ಚಿಂತಿಸುತ್ತಿದ್ದಾರೆ.

ಮಿಡತೆ ದಾಳಿ ತಡೆಗೆ ರೈತರಿಗೆ ಕೃಷಿ ಇಲಾಖೆ ಸಲಹೆಗಳು ಮಿಡತೆ ದಾಳಿ ತಡೆಗೆ ರೈತರಿಗೆ ಕೃಷಿ ಇಲಾಖೆ ಸಲಹೆಗಳು

ಕೃಷಿ ಸಚಿವ ಬಿ. ಸಿ. ಪಾಟೀಲ್ ಗುರುವಾರ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಮಿಡತೆಗಳ ಹಾವಳಿಯಿಂದ ಕೃಷಿ ಸಮುದಾಯವನ್ನು ರಕ್ಷಿಸುವ ಕುರಿತು ಸಭೆಯಲ್ಲಿ ಅಧಿಕಾರಿಗ ಜೊತೆ ಚರ್ಚೆ ನಡೆಸಲಿದ್ದಾರೆ.

ಕರ್ನಾಟಕಕ್ಕೆ ಮಿಡತೆ ದಾಳಿ ಆತಂಕ; ಸರ್ಕಾರಕ್ಕೆ ಎಚ್‌ಡಿಕೆ ಸಲಹೆ ಕರ್ನಾಟಕಕ್ಕೆ ಮಿಡತೆ ದಾಳಿ ಆತಂಕ; ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

 Agriculture Minister Calls For Meetings On Panic Of Locust Attack

"ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಮಿಡತೆ ದಾಳಿಯನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ಬಿ. ಸಿ. ಪಾಟೀಲ್ ಫೇಸ್‌ಬುಕ್ ಪೋಸ್ಟ್‌ ಮೂಲಕ ರೈತರಿಗೆ ಅಭಯ ನೀಡಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿ ಮರುಭೂಮಿ ಮಿಡತೆ ದಾಳಿ: ಬೆಳೆಗಳ ನಾಶ ದೇಶದ ವಿವಿಧ ರಾಜ್ಯಗಳಲ್ಲಿ ಮರುಭೂಮಿ ಮಿಡತೆ ದಾಳಿ: ಬೆಳೆಗಳ ನಾಶ

ಎಲ್ಲಾ ಬೆಳೆ ತಿನ್ನಲಿವೆ: ಮರುಭೂಮಿ ಮಿಡತೆಗಳು ಬಹುಭಕ್ಷಕ ಕೀಟಗಳು. ಯಾವುದೇ ಗಿಡ ಅಥವಾ ಬೆಳೆಯ ಎಲೆ, ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ಭಕ್ಷಿಸುತ್ತವೆ.

ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಭೇಧಗಳಿವೆ. ಭಾರತದಲ್ಲಿ ನಾಲ್ಕು ಪ್ರಭೇದಗಳನ್ನು ಕಾಣಬಹುದಾಗಿದೆ. ಈ ಮಿಡತೆಗಳ ಪೈಕಿ ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ಮೊಟ್ಟೆ ಇಡುತ್ತದೆ.

ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ಮೊಟ್ಟೆಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧ ಹೊಂದಿದ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12 ರಿಂದ 16 ಕಿ. ಮೀ. ವೇಗದಲ್ಲಿ ಹಾರಾಟ ನಡೆಸುತ್ತವೆ.

English summary
Karnataka agriculture minister B. C. Patil called department officials meeting on May 28, 2020 to discuss about panic of Locust attack in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X