ವರ್ಗಾವಣೆ ದಂಧೆ; ಚಾಲಕನ ಜೀವಕ್ಕೆ ಏನಾದ್ರೂ ಹೆಚ್ಚು ಕಮ್ಮಿ ಆದರೆ ಕುಮಾರಸ್ವಾಮಿ ನೇರ ಹೊಣೆ : ಚೆಲುವರಾಯಸ್ವಾಮಿ

ಬೆಂಗಳೂರು,ಜುಲೈ 06: ನೆಲಮಂಗಲ ಡಿಪೋ ಕೆಎಸ್ ಆರ್ ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಅಧಿಕಾರ ಇಲ್ಲ. ಏನೇನೊ ಮಾತನಾಡ್ತಾ ಇದ್ದಾರೆ, ಚಾಲಕನ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

Agriculture Minister N Cheluvarayaswamy

ಇನ್ನೂ ಆತನನ್ನ ಬೇರೆ ಯಾವುದೋ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿರಲಿಲ್ಲ. ನಾಗಮಂಗಲದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು, ಕೇವಲ 30 ಕಿ.ಮೀ ದೂರ ವರ್ಗಾವಣೆ ಮಾಡಿರೋದು..
ಆತನ ಜೀವಕ್ಕೆ ಏನಾದ್ರೂ ಹೆಚ್ಚು ಕಮ್ಮಿ ಆದರೆ ಕುಮಾರಸ್ವಾಮಿ ನೇರ ಹೊಣೆ ಎಂದು ಹೇಳಿದ್ದಾರೆ.

ಆತ ವಿಷ ಕುಡಿದಾಗ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರು. ಹೆಚ್ಚಿನ ಚಿಕಿತ್ಸೆ ಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಸಂಬಂಧಿಕರು ಮುಂದಾಗಿದ್ರು. ಆದರೆ ಕುಮಾರಸ್ವಾಮಿ ಬೇಡ ಅಂತ ಹೇಳಿದ್ದಾರೆ. ಆಸ್ಪತ್ರೆಗೆ ಹೋಗುತ್ತಿದ್ದವರನ್ನ ಮಾಜಿ ಶಾಸಕ ಮತ್ತು ಅವನ ಪತ್ನಿ ತಡೆದಿದ್ದಾರೆ. ಬೆಳಿಗ್ಗೆ ಆಸ್ಪತ್ರೆಗೆ ಸೇರಿಸಿದ್ದಾರೆ. ಇದು ಅಪರಾಧ ಅಲ್ಲವೇ, ಆತನಿಗೆ ಚಿಕಿತ್ಸೆ ತಡವಾಗಿದೆ. ಅದಕ್ಕೆ ಕುಮಾರಸ್ವಾಮಿ ಕಾರಣ ಎಂದು ಕಿಡಿಕಾರಿದ್ದಾರೆ.

ಕೆಲವರು ಅನಾವಶ್ಯಕ ರೀತಿಯಲ್ಲಿ ರಾಜಕೀಯ ಮಾಡ್ತಿದ್ದಾರೆ. ಇದೇ ಅವರ ಕಾಯಕ. ವರ್ಗಾವಣೆ ಪ್ರಕ್ರಿಯೆ ಸಹಜ. ಸರ್ಕಾರ ಬದಲಾದಾಗ ಎಲ್ಲರ ಕಾಲದಲ್ಲೂ ವರ್ಗಾವಣೆ ಆಗಿರುತ್ತದೆ. ನಾನು ಆ ಚಾಲಕನ ವರ್ಗಾವಣೆಗೆ ಲೆಟರ್ ಕೊಟ್ಟಿಲ್ಲ, ವರ್ಗಾವಣೆ ಮಾಡಿ ಎಂದು ನಾನು ಹೇಳಿಲ್ಲ. ಆದರೆ ವರ್ಗಾವಣೆ ಆಗಿದೆ ಎಂದಿದ್ದಾರೆ.

ಆ ಚಾಲಕನ ಬಾವ ನನಗೆ ಫೋನ್ ಮಾಡಿದ್ದರು. ಹಾಗಾಗಿ ಅದನ್ನು ನಾನೇ ಹೋಲ್ಡ್ ಮಾಡುವಂತೆ ಹೇಳಿದ್ದೇನೆ. ಏನಾದರೂ ತಪ್ಪಿದ್ದರೆ ತನಿಖೆ ಮಾಡಿ ಆಮೇಲೆ ವರ್ಗಾವಣೆ ಮಾಡಿ ಎಂದು ಹೇಳಿದ್ದೆ. ಅದನ್ನು ಕ್ಯಾನ್ಸಲ್ ಮಾಡಿ ಎಂದು ಒತ್ತಾಯಿಸಿ ನಿನ್ನೆ ಈ ರೀತಿ ಮಾಡಿಕೊಂಡಿದ್ದಾರೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+