ಮಹದಾಯಿ ಸಮಸ್ಯೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ

By: ಎಚ್.ಎಸ್.ಶ್ರೇಯಸ್
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 1: ಮಾತುಕತೆ ಮೂಲಕ ಮಹದಾಯಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಮಹದಾಯಿ ನ್ಯಾಯಮಂಡಳಿಯು ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದೆ.

'ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸೋದರತ್ವ ಭಾವನೆಯಿಂದ' ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಿ ಎಂದು ನ್ಯಾಯಮೂರ್ತಿ ಜೆ.ಎಂ.ಪಂಚಲ್ ನೇತೃತ್ವದ ನ್ಯಾಯಮಂಡಳಿ ಗುರುವಾರ ತಿಳಿಸಿದೆ.[ಸಂಸದರಿಗೆ ಪಾದರಕ್ಷೆ ತೋರಿಸಿ ಎಸೆಯುತ್ತೇವೆ : ಅಗ್ನಿ ಶ್ರೀಧರ್]

Mahadayi

ಕರ್ನಾಟಕದ ಪರ ವಕೀಲ ಮೋಹನ್ ಕಾತರಕಿ, ನ್ಯಾಯಮಂಡಳಿ ಸಲಹೆಯನ್ನು ಸ್ವಾಗತಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸಲಹೆಯನ್ನು ತಿಳಿಸುತ್ತೇನೆ ಎಂದಿದ್ದಾರೆ. ಗೋವಾ ಹಾಗೂ ಮಹಾರಾಷ್ಟ್ರ ಪರ ವಕೀಲರು ಸಹ ಆಯಾ ಮುಖ್ಯಮಂತ್ರಿಗಳಿಗೆ ತಿಳಿಸಲಿದ್ದಾರೆ.[ಮಹದಾಯಿ ಹೋರಾಟ : 15 ಕಾರ್ಯಕರ್ತರಿಗೆ ಜಾಮೀನು]

ಕಳಸಾ-ಬಂಡೂರಿ ನಾಲಾ ಯೋಜನೆಯಲ್ಲಿ 7 ಟಿಎಂಸಿ ಅಡಿ ನೀರು ಬಳಸುವುದಕ್ಕೆ ಅವಕಾಶ ನೀಡಬೇಕು ಎಂದು ಜುಲೈನಲ್ಲಿ ಕರ್ನಾಟಕ ಸಲ್ಲಿಸಿದ್ದ ಮನವಿಯನ್ನು ನ್ಯಾಯಮಂಡಳಿ ನಿರಾಕರಿಸಿತ್ತು. ಮಧ್ಯಂತರ ತೀರ್ಪು ಹೊರಬಿದ್ದ ನಂತರ ಕರ್ನಾಟಕದಲ್ಲಿ ವ್ಯಾಪಕ ಪ್ರತಿಭಟನೆಗಳಾಗಿದ್ದವು. ನ್ಯಾಯಮಂಡಳಿ ತೀರ್ಪಿನ ವಿರುದ್ಧ ಕರ್ನಾಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Mahadayi water disputes tribunal, on Thursday suggested that the chief ministers of Karnataka, Goa and Maharashtra attempt to arrive at an amicable settlement to the water dispute.
Please Wait while comments are loading...