ಕರ್ನಾಟಕದ ಕರಾವಳಿ, ಮಲೆನಾಡು ಮೇಲೆ ಕಾಂಗ್ರೆಸ್ ಕಣ್ಣು!
ಬೆಂಗಳೂರು, ನವೆಂಬರ್ 3; 2023ನೇ ವಿಧಾನಸಭಾ ಚುನಾವಣೆಗೂ ಮುನ್ನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬೃಹತ್ ಸಮಾವೇಶಗಳನ್ನು ನಡೆಸುವ ಮೂಲಕ ಪ್ರದೇಶವನ್ನು ಮತ್ತೆ ಮರಳಿ ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ಮೇಕೆದಾಟು ಪಾದಯಾತ್ರೆಯ ಯಶಸ್ಸಿನ ಬಳಿಕ ಉತ್ತರ ಕರ್ನಾಟಕದ ಕಡೆ ಕಾಂಗ್ರೆಸ್ ಗಮನಹರಿಸಿದೆ. ಬಹುಕಾಲದಿಂದಲೂ ಬಾಕಿ ಉಳಿದಿರುವ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ-3 ಯೋಜನೆಗಳನ್ನು ಕೈಗೆತ್ತಿಕೊಡ ಪಾದಯಾತ್ರೆ ನಡೆಸಲು ಪಕ್ಷವು ಉದ್ದೇಶಿಸಿದೆ.
ಇದೇ ಮಾದರಿಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸುವ ಮೂಲಕ, ಈ ಎರಡು ಪ್ರದೇಶಗಳನ್ನು ಮತ್ತೆ ಮರಳಿ ಪಡೆಯಲು ಕಾಂಗ್ರೆಸ್ ಪಕ್ಷವು ಮುಂದಾಗಿದೆ. ಕಳೆದ ವಿಧಾನಸಭೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿಜೆಪಿ ಪಕ್ಷವು 31 ಕ್ಷೇತ್ರಗಳಲ್ಲಿ 26 ಸ್ಥಾನಗಳನ್ನು ಗೆದ್ದಿದ್ದು, ಪ್ರದೇಶವನ್ನು ಕೇಸರಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದೆ.

ಬಿಜೆಪಿಯ ಕೋಮು ರಾಜಕಾರಣ, ಕಾಫಿ, ಅಡಿಕೆ, ತೆಂಗು, ಭತ್ತದ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬಹುಕಾಲದಿಂದ ಬಾಕಿ ಉಳಿದಿರುವ ವಾರಾಹಿ ನೀರಾವರಿ ಯೋಜನೆ ಸೇರಿದಂತೆ ಪ್ರಮುಖ ಸಮಸ್ಯೆಗಳ ಕುರಿತು ಕಾಂಗ್ರೆಸ್ ಪಕ್ಷವು ಕೆಲಸ ಮಾಡುತ್ತಿದೆ.
ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಬೃಹತ್ ಮರೆವಣೆಗೆ ನಡೆಸಲು ಮುಂದಾಗಿದ್ದು, ರಾಜ್ಯದ ಈ ಭಾಗದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಹೀಗಾಗಿ ಈ ಎರಡು ಪ್ರದೇಶಗಳು ಬಹಳ ಮುಖ್ಯ ಎಂದು ಕರ್ನಾಟಕ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ಇನ್ನೂ 2018ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪೈಕಿ 31 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ ಐದು ಸ್ಥಾನಗಳನ್ನು ಗೆದ್ದಿತ್ತು, ಆದರೆ ಈ ಬಾರಿ ಕನಿಷ್ಠ 20 ರಿಂದ 23 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ ಎಂದರು.

ಇತ್ತೀಚೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರ ಜೊತೆಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮದ ಕುರಿತು ಅಂತಿಮ ಸುತ್ತಿನ ಚರ್ಚೆಯನ್ನು ನಡೆಸಲಾಗುವುದು ಎಂದು ಸುರ್ಜೇವಾಲಾ ಹೇಳಿದ್ದಾರೆ.
2023ರ ಚುನಾವಣೆ; ಇನ್ನೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 130 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೈಕಮಾಂಡ್ ಹೊಂದಿದ್ದು, ಪಕ್ಷದ ಕಾರ್ಯಕ್ಷಮತೆ ಕಡಿಮೆ ಮಾಡಿದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿನ ಸ್ಥಾನಗಳ ಮೇಲೆ ಹೆಚ್ಚು ಗಮನಹರಿಸುವಂತೆ ಹೈಕಮಾಂಡ್ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರಿಗೆ ನಿರ್ದೇಶನ ನೀಡಿದ್ದಾರೆ.
ಈ ಹಿಂದೆ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷವು 20 ರಿಂದ 23 ಸ್ಥಾನಗಳನ್ನು ಗೆಲ್ಲುತ್ತಿತ್ತು. ಆದರೆ ಬಿಜೆಪಿಯ ಆಕ್ರಮಣಕಾರಿ ಹಿಂದುತ್ವದ ರಾಜಕೀಯದಿಂದಾಗಿ 5 ಸ್ಥಾನಗಳಿಗೆ ಕುಸಿದಿದೆ. ಆದ್ದರಿಂದ ನಾವು ಈ ಪ್ರದೇಶಗಳ ಮೇಲಿನ ಹಿಡಿತವನ್ನ ಮರಳಿ ಪಡೆಯಬೇಕಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.












Click it and Unblock the Notifications