ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ಸಾಮರ್ಥ್ಯದ 'ಎಐ ಡೇಟಾ ಹಬ್' ಸ್ಥಾಪನೆಗೆ ಪ್ಲಾನ್
ಬೆಂಗಳೂರು: ಕರ್ನಾಟಕ ಕರಾವಳಿ ಭಾಗದಲ್ಲಿ ಕೈಗಾರಿಕೆ ಹೂಡಿಕೆಗೆ ಮುಂದೆ ಬರುತ್ತಿಲ್ಲ. ಇದಕ್ಕೆ ಅಲ್ಲಿನ ಕೋಮುವಾದ ಕಾರಣ ಎಂದು ಐಟಿ ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು, ಸಾಕಷ್ಟು ಚರ್ಚೆ ಹಾಗೂ ಟೀಕೆಗೂ ಕಾರಣವಾಗಿತ್ತು. ಇದರ ಬೆನ್ನಲ್ಲೆ ಕರಾವಳಿ ಜಿಲ್ಲೆಯಲ್ಲಿ ಹೂಡಿಕೆ, ಡೇಟಾ ಕೇಂದ್ರ ಸ್ಥಾಪನೆ ಬಗ್ಗೆ ಕೈಗಾರಿಕೆ ಸಚಿವ ಎಂಬಿ ಪಾಟೀಲರು ಶುಭ ಸುದ್ದಿ ನೀಡಿದ್ದಾರೆ. ಇ.ಎಸ್.ಡಿ.ಎಂ ವಲಯದ ಬೆಳವಣಿಗೆಗೆ ಪೂರಕವಾಗಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ವಿವಿಧ ಸಾಮರ್ಥ್ಯದ ಎಐ ಡಾಟಾ ಸೆಂಟರ್ ವಲಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಭವಿಷ್ಯದ ಕೈಗಾರಿಕಾ ಬೆಳವಣಿಗೆ ಮುಖ್ಯವಾಗಿಟ್ಟುಕೊಂಡು ಬೆಂಗಳೂರಿನ ಖನಿಜ ಭವನದಲ್ಲಿ ಬುಧವಾರ ಇ.ಎಸ್.ಡಿ.ಎಂ ಮತ್ತು ಕೋರ್ ಮ್ಯಾನಫ್ಯಾಕ್ಚರಿಂಗ್ ವಿಷನ್ ಗ್ರೂಪ್‌ಗಳ ಪ್ರಮುಖ ಸಭೆ ನಡೆಯಿತು. ಮೂರು ರೀತಿಯ ಡಾಟಾ ಸೆಂಟರ್‌ಗಳು ಇದ್ದು, 500 ಮೆಗಾವ್ಯಾಟ್ ಮತ್ತು ಅದಕ್ಕಿಂತ ದೊಡ್ಡ ಸಾಮರ್ಥ್ಯದ ಹೈಬರ್ಸ್ಕೇಲರ್ ಡಾಟಾ ಸೆಂಟರ್ ಸ್ಥಾಪಿಸಲು ಪೂರಕವಾದ ವಾತಾವರಣ ನಿರ್ಮಿಸಲಾಗುವುದು.

ಮಾತ್ರವಲ್ಲದೇ ಉದ್ಯಮ ಮಟ್ಟದ ಮಧ್ಯಮ ಸಾಮರ್ಥ್ಯ ಹಾಗೂ 25 ರಿಂದ 200 ಮೆಗಾವ್ಯಾಟ್ ಸಾಮರ್ಥದ ಡಾಟಾ ಸೆಂಟರ್ ಗಳನ್ನು ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಮಾಡುವ ಉದ್ದೇಶ ಹೊಂದಿದ್ದೇವೆ. ಈ ಸಂಬಂಧ ಹೂಡಿಕೆ ಸೆಳೆಯುವ ಪ್ರಯತ್ನ ನಡೆದಿದೆ ಎಂದು ಅವರು ವಿವರಿಸಿದರು.
ಕರಾವಳಿಯಲ್ಲಿ ಎಐ ಡೇಟಾ ಸೆಂಟರ್: ಕಾರ್ಯಸಾಧ್ಯತಾ ವರದಿಗೆ ಸೂಚನೆ
ರಾಜ್ಯದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ ಅಭಿವೃದ್ಧಿಪಡಿಸುವ ಉದ್ದೇಶ ಇದೆ. ಜೊತೆಗೆ ಮಂಗಳೂರಿನಲ್ಲಿ ಕೇಬಲ್ ಲ್ಯಾಂಡಿಂಗ್ ಸ್ಟೇಷನ್ ಸ್ಥಾಪನೆ ಸಂಬಂಧ ಕಾರ್ಯ ಸಾಧ್ಯತಾ ಅಧ್ಯಯನ ನಡೆಸುವುದಕ್ಕೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಇ.ಎಸ್.ಡಿ.ಎಂ ವಲಯಕ್ಕೆ ಸೇರಿದ ಜಾಗತಿಕ ಮಟ್ಟದ ಕಂಪನಿಗಳು ಮುಂಬರುವ ದಿನಗಳಲ್ಲಿ 25 ರಿಂದ 30 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಉತ್ಸುಕವಾಗಿವೆ. ಇದು ಆ ಕಂಪನಿಗಳ ಎರಡನೇ ಹಂತದ ಹೂಡಿಕೆಯಾಗಿದ್ದು, ಕರ್ನಾಟಕವು ಇದರಲ್ಲಿ ಹೆಚ್ಚಿನ ಪಾಲನ್ನು ಸೆಳೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಜತೆಗೆ ಬಿಡಿ ಭಾಗಗಳ ಜೋಡಣೆ, ಅಗತ್ಯ ಪರೀಕ್ಷಾ ಸೌಕರ್ಯ, ಪ್ಯಾಕೇಜಿಂಗ್ ಮತ್ತು ವಿಶೇಷ ಉಗ್ರಾಣದ ಮೂಲ ಸೌಕರ್ಯಗಳನ್ನು ರಾಜ್ಯದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಅಮೆರಿಕದ ಅರಿಝೋನಾ ಪ್ರಾಂತ್ಯದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಹಂತದಲ್ಲೇ ಸಂಪೂರ್ಣ ತರಬೇತಿ ಕೊಡುವ ಪದ್ಧತಿ ಇದೆ. ನಮ್ಮಲ್ಲೂ 3 ಮತ್ತು 4ನೇ ಹಂತದ ನಗರಗಳಲ್ಲಿ ಉನ್ನತ ಮಟ್ಟದ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಉದ್ಯಮಿಗಳು ಹೇಳಿದ್ದಾರೆ. ಜೊತೆಗೆ, ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ ಸೆಮಿಕಂಡಕ್ಟರ್ ಉದ್ಯಮ ಕೇಂದ್ರಿತ ನಗರಗಳಲ್ಲಿರುವ ಉತ್ಕೃಷ್ಟ ವಿಶ್ವವಿದ್ಯಾಲಯಗಳು ನಮ್ಮಲ್ಲೂ ಕ್ಯಾಂಪಸ್ ತೆರೆಯಲು ಸಹಕಾರ ನೀಡಲಾಗುವುದು.
ವಿದೇಶಗಳಲ್ಲಿ ಕೇಂದ್ರಗಳ ಕ್ಲಸ್ಟರ್ ಸ್ಥಾಪನೆ
ಅಮೆರಿಕದಲ್ಲಿ ಡೇಟಾ ಕೇಂದ್ರಗಳು ಮತ್ತು ನಿರ್ದಿಷ್ಟ ವಿಶ್ವವಿದ್ಯಾಲಯಗಳು ಹೇಗೆ ಕೆಲಸ ಮಾಡುತ್ತಿವೆ ಎನ್ನುವುದನ್ನು ತಿಳಿದುಕೊಳ್ಳಬೇಕಾಗಿದೆ. ಜೊತೆಗೆ ಮಲೇಷಿಯಾದಲ್ಲಿ ಕಳೆದ ಐದು ವರ್ಷಗಳಲ್ಲಿ 50ರಿಂದ 200 ಮೆಗಾವ್ಯಾಟ್ ಡೇಟಾ ಕೇಂದ್ರಗಳ ಕ್ಲಸ್ಟರ್ ಸ್ಥಾಪಿಸಲಾಗಿದೆ. ಈ ಎರಡೂ ದೇಶಗಳಿಗೆ ರಾಜ್ಯದ ಉನ್ನತ ಮಟ್ಟದ ನಿಯೋಗವನ್ನು ಕಳಿಸುವ ವಿಚಾರ ಚರ್ಚೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೋರ್ ಮ್ಯಾನಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಕಬ್ಬಿಣದ ಅದಿರಿನ ಲಭ್ಯತೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಆದರೆ ರಾಜ್ಯದಲ್ಲಿ ಇದರ ಬಳಕೆಗೆ ಮಿತಿ ಇದ್ದು, ಇದರ ಪರಾಮರ್ಶೆ ಅಗತ್ಯವಿದೆ. ಏಕೆಂದರೆ, ಅದಿರಿನ ಬೇಡಿಕೆಗೂ ಅದರ ಪೂರೈಕೆಗೂ ಅಗಾಧ ವ್ಯತ್ಯಾಸವಿದೆ. ಇದಕ್ಕೆ ಸೂಕ್ತ ನೀತಿ ಅಗತ್ಯವಿದ್ದು, ಸರಕಾರ ಇದನ್ನು ಸಕಾರಾತ್ಮಕವಾಗಿ ಪರಿಶೀಲಿಸಲಿದೆ.
ಈ ವಲಯವು ನೆಟ್-ಝೀರೋ ಗುರಿಯನ್ನು ತಲುಪಬೇಕಾಗಿದೆ. ಇದು ಸಾಧ್ಯವಾಗಬೇಕೆಂದರೆ ನೈಸರ್ಗಿಕ ಅನಿಲ ಮತ್ತು ಮರುಬಳಕೆ ಇಂಧನ ಯಥೇಚ್ಛವಾಗಿ ಸಿಗಬೇಕು. ಮೆದು ಕಬ್ಬಿಣ ಉತ್ಪಾದನಾ ಸ್ಥಾವರಗಳು ಪರಿಸರ ಮಾಲಿನ್ಯ ನಿಯಂತ್ರಣವನ್ನು ಸಾಧಿಸುವಂತಹ ತಂತ್ರಜ್ಞಾನಗಳ ಮೇಲೆ ಹೆಚ್ಚು ಹಣ ವಿನಿಯೋಗಿಸಬೇಕಾಗಿದೆ. ಇದೇ ರೀತಿ ಆಟೋಮೋಟೀವ್ ಕೈಗಾರಿಕೆಗಳು ತಮಗೆ ಬೇಕಾದ ವಿಶೇಷ ದರ್ಜೆಯ ಉಕ್ಕನ್ನು ಆಮದು ಮಾಡಿಕೊಳ್ಳುತ್ತಿವೆ. ಈ ಉಕ್ಕನ್ನು ಭಾರತದಲ್ಲೇ ಉತ್ಪಾದಿಸಲು ಬೆಂಬಲದ ಅಗತ್ಯವಿದೆ ಎನ್ನುವುದನ್ನು ಉದ್ಯಮಿಗಳು ಗಮನಕ್ಕೆ ತಂದಿದ್ದು, ಅವರ ಸಲಹೆಗಲನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL













Click it and Unblock the Notifications