School: ಕರ್ನಾಟಕದ ಶಾಲೆಗಳಲ್ಲಿ ಹಾಜರಾತಿ ವಿಚಾರದಲ್ಲಿ ಮಹತ್ವದ ಬದಲಾವಣೆ!
ಕನ್ನಡ ನಾಡು ತನ್ನ ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಜಗತ್ತಿನಾದ್ಯಂತ ಹೆಸರು ಪಡೆದು ಕೀರ್ತಿ ಗಳಿಸಿದೆ. ಇದೇ ಕಾರಣಕ್ಕೆ ಭಾರತದ ಮೂಲೆ ಮೂಲೆಯಿಂದ ಬಂದು ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಾರೆ ಲಕ್ಷಾಂತರ ವಿದ್ಯಾರ್ಥಿಗಳು. ಕಾಲೇಜುಗಳು ಮಾತ್ರವಲ್ಲ, ಶಾಲೆಗಳಲ್ಲಿ ಕೂಡ ಭಾರಿ ದೊಡ್ಡ ಪ್ರಮಾಣದಲ್ಲಿ ಹೊರ ರಾಜ್ಯಗಳ ವಿದ್ಯಾರ್ಥಿಗಳು ಓದುತ್ತಾ ಇದ್ದಾರೆ. ಹೀಗೆ ಎಲ್ಲಾ ವಿದ್ಯಾರ್ಥಿಗಳಿಗೂ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುತ್ತಾ ಬಂದಿದೆ. ಹೀಗಿದ್ದಾಗ ಕರ್ನಾಟಕದ ಶಾಲೆಗಳಲ್ಲಿ ಹಾಜರಾತಿ ವಿಚಾರದಲ್ಲಿ ಮಹತ್ವದ ಬದಲಾವಣೆ ಆಗಲಿದೆ...
ಕರ್ನಾಟಕ ಸರ್ಕಾರ ಶೈಕ್ಷಣಿಕ ಗುಣಮಟ್ಟ ಅಭಿವೃದ್ಧಿಗೆ ಹಲವು ಯೋಜನೆ ಕೈಗೊಳ್ಳುತ್ತಿದ್ದು, ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗುತ್ತಿದೆ. ಈಗಾಗಲೇ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯ ಒದಗಿಸಲಾಗಿದ್ದು, ಶಾಲೆಗಳ ಅಭಿವೃದ್ಧಿಗೆ ಕ್ರಮವನ್ನೂ ಕೈಗೊಳ್ಳಲಾಗುತ್ತಿದೆ. ಹಾಗೇ ಕರ್ನಾಟಕದ ಶಾಲೆಗಳಲ್ಲಿ ಹಾಜರಾತಿ ವಿಚಾರದಲ್ಲಿ ಮಹತ್ವದ ಬದಲಾವಣೆಗೆ ಇದೀಗ ಕ್ರಮ ಕೈಗೊಳ್ಳಲಾಗಿದೆ. ಹಾಗಾದ್ರೆ ಏನೆಲ್ಲಾ ಬದಲಾವಣೆ ಆಗಲಿದೆ? ಇದರಿಂದ ವಿದ್ಯಾರ್ಥಿಗಳಿಗೆ ಏನು ಉಪಯೋಗ? ಬನ್ನಿ ತಿಳಿಯೋಣ.

ವಿದ್ಯಾರ್ಥಿಗಳ ಹಾಜರಾತಿ ಬದಲಾವಣೆ
ಹೌದು ಇನ್ನುಮುಂದೆ ಕರ್ನಾಟಕದ ಪ್ರತಿ ಜಾಗದಲ್ಲಿ ಇರುವ ಸಣ್ಣ ಸರ್ಕಾರಿ ಶಾಲೆಯಲ್ಲಿಯೂ ಬೆಳಗಿನ ದಿನಚರಿ ಬದಲಾಗಲಿದೆ. ಇನ್ನು ಮುಂದೆ ರಿಜಿಸ್ಟರ್‌ಗೆ ಸಹಿ ಹಾಕಲು ಆತುರಪಡುವಂಥ ಅಗತ್ಯತೆ ಇಲ್ಲ. ಬಯೋಮೆಟ್ರಿಕ್ ಸ್ಕ್ಯಾನರ್‌ನಲ್ಲಿ ಮಸುಕಾದ ಬೆರಳಚ್ಚು ಕೊಟ್ಟು ಹಾಜರಾತಿ ಕನ್ಫರ್ಮ್ ಮಾಡಿಕೊಳ್ಳಬೇಕಿಲ್ಲ. ಇನ್ನಮುಂದೆ ಶಿಕ್ಷಕರು & ವಿದ್ಯಾರ್ಥಿಗಳು ಶಾಲೆಯ ಒಳಗೆ ಬರುತ್ತಿದ್ದಂತೆ ಫೋನ್ ಕ್ಯಾಮೆರಾ ಅವರ ಮುಖಗಳನ್ನು ಸದ್ದಿಲ್ಲದೆ ಸ್ಕ್ಯಾನ್ ಮಾಡುತ್ತದೆ, ಮತ್ತು ಸೆಕೆಂಡುಗಳಲ್ಲಿ ಅವರ ಹಾಜರಾತಿ ದಾಖಲಿಸುತ್ತದೆ. ಈ ಮೂಲಕ ಎಐ ವ್ಯವಸ್ಥೆಯನ್ನು ಪ್ರತಿ ಸರ್ಕಾರ ಶಾಲೆಗಳಲ್ಲಿ ಅಳವಡಿಕೆ ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಎಐ ಮೂಲಕ ಹೊಸ ಕ್ರಾಂತಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಮುಖ ನೀತಿ ಬದಲಾವಣೆ ಇದಾಗಿದ್ದು, ಹೊಸ ಕ್ರಾಂತಿ ಮೂಡಿಸಲಿದೆ. ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಪ್ರಕ್ರಿಯೆ ಇನ್ನುಮುಂದೆ ಫೇಸ್ ರೀಡ್ ಎಂದರೆ ಮುಖ ಗುರುತಿಸುವಿಕೆ ವ್ಯವಸ್ಥೆ ಮೂಲಕವೇ ನಡೆಯಲಿದೆ. ರಾಜ್ಯಾದ್ಯಂತ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇದು ಕಡ್ಡಾಯವಾಗಿದೆ. ಹಲವು ವರ್ಷಗಳಿಂದ ಶಿಕ್ಷಣ ಇಲಾಖೆಯು ನಕಲಿ ಹಾಜರಾತಿ, ಕೆಲಸಕ್ಕೆ ಲೇಟ್ ಆಗಿ ಬರುವುದು, ಮತ್ತು ರಿಜಿಸ್ಟರ್ ತೋರಿಸುವ ಹಾಗೂ ತರಗತಿಗಳಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಗೂ ವ್ಯತ್ಯಾಸ ಇರುತ್ತಿತ್ತು. ಆದರೆ ಈಗ ಎಲ್ಲಾ ಸರ್ಕಾರ ಶಾಲೆಗಳಲ್ಲಿ ಹಾಜರಾತಿ ಸ್ವರೂಪ ಎಐ ಮೂಲಕ ಫೇಸ್ ರೀಡಿಂಗ್ ಟೆಕ್ನಾಲಜಿ ಬಳಸಿ ಹೊಸ ಕ್ರಾಂತಿ ಸೃಷ್ಟಿಸಲು ಮುಂದಾಗಿದೆ ಶಿಕ್ಷಣ ಇಲಾಖೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications