ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 5 ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರನ್ನು ನೇಮಿಸಿದ ಎಐಸಿಸಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21 : ಪಕ್ಷ ಸಂಘಟನೆಗೆ ಒತ್ತು ನೀಡಿರುವ ಎಐಸಿಸಿ ಕರ್ನಾಟಕದ 5 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ನೂತನ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಭಾಶಯ ಕೋರಿದ್ದಾರೆ.

ಸೋಮವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಈ ಕುರಿತು ಆದೇಶ ಹೊರಡಿಸಿದರು. ಪಕ್ಷ ನೂತನ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

9 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಿದೆ ಕೆಪಿಸಿಸಿ 9 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಿದೆ ಕೆಪಿಸಿಸಿ

AICC Appoints 5 District Congress Presidents For Karnataka

ಬಾಗಲಕೋಟೆ, ವಿಜಯಪುರ (ಬಿಜಾಪುರ), ಚಿಕ್ಕಮಗಳೂರು, ಚಿತ್ರದುರ್ಗ, ರಾಯಚೂರು ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ವಿ. ಎಸ್.‌ ಉಗ್ರಪ್ಪಗೆ ಸ್ಥಾನ-ಮಾನ ನೀಡಿದ ಕೆಪಿಸಿಸಿ ವಿ. ಎಸ್.‌ ಉಗ್ರಪ್ಪಗೆ ಸ್ಥಾನ-ಮಾನ ನೀಡಿದ ಕೆಪಿಸಿಸಿ

2019ರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ಬಿ. ವಿ. ನಾಯಕ್‌ಗೆ ರಾಯಚೂರು ಜಿಲ್ಲಾಧ್ಯಕ್ಷರ ಹೊಣೆಯನ್ನು ನೀಡಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಪಕ್ಷ ಸೂಚನೆ ನೀಡಿದೆ. 4,80,621 ಮತಗಳನ್ನು ಪಡೆದು ಬಿಜೆಪಿಯ ರಾಜಾ ಅಮರೇಶ್ ನಾಯಕ್ ವಿರುದ್ಧ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ ನಾಯಕರು! ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ ನಾಯಕರು!

ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಎಐಸಿಸಿ ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷ ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳನ್ನು ವಿಸರ್ಜನೆ ಮಾಡಿತ್ತು. ಬಳಿಕ ಒಂದೊಂದೇ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡುತ್ತಿದೆ.

English summary
The All India Congress Committee (AICC) appointed 5 district Congress presidents for the state of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X